Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | 2024-25ನೇ ಆರ್ಥಿಕ...

ಮಂಗಳೂರು | 2024-25ನೇ ಆರ್ಥಿಕ ವರ್ಷದಲ್ಲಿ ಎಂಸಿಸಿ ಬ್ಯಾಂಕ್‌ಗೆ 13 ಕೋ. ರೂ. ಲಾಭ

►ಬೈಂದೂರಿನಲ್ಲಿ 20ನೇ ಶಾಖೆ ಆರಂಭ ► 1,500 ಕೋ.ರೂ. ವ್ಯವಹಾರದ ಗುರಿ

ವಾರ್ತಾಭಾರತಿವಾರ್ತಾಭಾರತಿ15 April 2025 4:24 PM IST
share
ಮಂಗಳೂರು | 2024-25ನೇ ಆರ್ಥಿಕ ವರ್ಷದಲ್ಲಿ ಎಂಸಿಸಿ ಬ್ಯಾಂಕ್‌ಗೆ 13 ಕೋ. ರೂ. ಲಾಭ

ಮಂಗಳೂರು : ಅವಿಭಜಿತ ದ.ಕ.ಜಿಲ್ಲೆಯ ಎಂಸಿಸಿ ಬ್ಯಾಂಕ್ 2024-25ನೇ ಆರ್ಥಿಕ ವರ್ಷದಲ್ಲಿ 13 ಕೋ.ರೂ. ವ್ಯವಹಾರಿಕ ಲಾಭಗಳಿಸಿದೆ. ಸತತವಾಗಿ ಎನ್‌ಪಿಎ ಪ್ರಮಾಣ ಕಡಿಮೆಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಪ್ರಸ್ತುತ ವರ್ಷ ಶೇ.1.30 ಎನ್‌ಪಿಎ ದಾಖಲಿಸಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದ್ದಾರೆ.

ಬ್ಯಾಂಕ್‌ನ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ರಾಜ್ಯಕ್ಕೆ ವಿಸ್ತರಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಬೆಳ್ತಂಗಡಿ ಮತ್ತು ಬೆಳ್ಮಣ್‌ನಲ್ಲಿ ಶಾಖೆಗಳನ್ನು ತೆರೆದಿದೆ. ಜುಲೈಯೊಳಗೆ ಬೈಂದೂರ್‌ನಲ್ಲಿ 20ನೇ ಶಾಖೆಯನ್ನು ತೆರೆಯಲಾಗುವುದು. ಅನಿವಾಸಿ ಭಾರತೀಯರಿಗೆ ಸೇವಾ ಸೌಲಭ್ಯವನ್ನು ನೀಡುವ ಕರ್ನಾಟಕದ ಪಟ್ಟಣ ಸಹಕಾರಿ ಬ್ಯಾಂಕುಗಳ ಪೈಕಿ ಎಂಸಿಸಿ ಎರಡನೇ ಬ್ಯಾಂಕ್ ಆಗಿ ಗುರುತಿಸಲ್ಪಟ್ಟಿವೆ. ಬ್ಯಾಂಕಿನ ವ್ಯವಹಾರವು 1240 ಕೋ. ರೂ. ತಲುಪಿದ್ದು, ಮುಂದಿನ ವರ್ಷಕ್ಕೆ 1,500 ಕೋ. ರೂ. ಸಾಧಿಸುವ ಗುರಿ ಹಾಕಲಾಗಿದೆ ಎಂದರು.

ಬ್ಯಾಂಕಿನ ನಿವ್ವಳ ಮೌಲ್ಯ 76 ಕೋ. ರೂ. ನಿಂದ 86.68 ಕೋ. ರೂ. ಗೆ ತಲುಪಿದೆ. ಬ್ಯಾಂಕಿನ ವ್ಯವಹಾರ ಕಳೆದ ವರ್ಷಕ್ಕಿಂತ ಶೇ.15 ಏರಿಕೆಯಾಗಿದೆ. ಒಟ್ಟು ಠೇವಣಿಯಲ್ಲಿ ಶೇ.11 ಪ್ರಗತಿ ಸಾಧಿಸಿದ್ದು, 705.40 ಕೋ. ರೂ. ಠೇವಣಿ, ಮುಂಗಡದಲ್ಲಿ ಶೇ.20.37 ಪ್ರಗತಿ ಸಾಧಿಸಿದೆ. ದುಡಿಯುವ ಬಂಡವಾಳ 836.73 ಕೋ. ರೂ. ಮತ್ತು ಶೇರು ಬಂಡವಾಳ 32.43 ಕೋ. ರೂ. ಆಗಿರುತ್ತದೆ ಎಂದು ಅನಿಲ್ ಲೋಬೋ ಹೇಳಿದರು.

ಬ್ಯಾಂಕಿನ ವ್ಯವಹಾರವನ್ನು ಸಂಪೂರ್ಣ ಕೋರ್ ಬ್ಯಾಂಕಿಂಗ್ ಮೂಲಕ ನಡೆಸಲಾಗುತ್ತಿದೆ. ಇತರ ಖಾಸಗಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ಎಲ್ಲಾ ಸೇವೆ ಮತ್ತು ಸೌಲಭ್ಯಗಳು ಎಂಸಿಸಿ ಬ್ಯಾಂಕಿನಲ್ಲೂ ದೊರೆಯುತ್ತವೆ. ಗ್ರಾಹಕರಿಗೆ ಕಡಿಮೆ ಬಾಡಿಗೆಯಲ್ಲಿ ಲಾಕರ್ ಸೌಲಭ್ಯ, ಕಡಿಮೆ ದರದಲ್ಲಿ ದೇಶ ವಿದೇಶದ ಶಿಕ್ಷಣ ಸಾಲ, ಎಂಎಸ್‌ಎಂಇ ವ್ಯವಹಾರ ಸಾಲ, ವಾಹನ ಸಾಲ, ವಸತಿ ಸಾಲ, ಮನೆ ಖರೀದಿ, ದುರಸ್ತಿ, ಮದುವೆ, ಗೃಹಉಪಯೋಗಿ ವಸ್ತು ಖರೀದಿ ಸಾಲವನ್ನು ತ್ವರಿತವಾಗಿ ನೀಡುತ್ತಿದೆ. ಸೇವಾ ಶುಲ್ಕವಿಲ್ಲದೆ ಚಿನ್ನಾಭರಣ ಸಾಲವನ್ನು ನೀಡುತ್ತಿದೆ. ಏಟಿಎಂ ಮತ್ತು ಮೊಬೈಲ್ ಬ್ಯಾಂಕಿಂಗ್ ಸೌಲಭ್ಯವನ್ನು ಉಚಿತವಾಗಿ ನೀಡುತ್ತಿದೆ. ಬ್ಯಾಂಕಿನಲ್ಲಿರುವ ಠೇವಣಿಗಳಿಗೆ ಖಾಸಗಿ ಮತ್ತು ವಾಣಿಜ್ಯ ಬ್ಯಾಂಕುಗಳಂತೆಯೇ ಭಾರತೀಯ ರಿಸರ್ವ್ ಬ್ಯಾಂಕಿನ ಡಿಪಾಜಿಟ್ ಇನ್ಸೂರೆನ್ಸ್ ಆ್ಯಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್‌ನಿಂದ ವಿಮಾ ಸೌಲಭ್ಯವಿದೆ. ಜೂನ್ ಅಂತ್ಯದೊಳಗೆ ಸ್ವಂತ ಕಟ್ಟಡಕ್ಕೆ ಕುಲಶೇಖರ ಶಾಖೆಯನ್ನು ಸ್ಥಳಾಂತರಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ, ನಿರ್ದೇಶಕರಾದ ಆಂಡ್ರ್ಯೂ ಡಿಸೊಜ, ಡಾ.ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ.ರೊಡ್ರಿಗಸ್, ಡೇವಿಡ್ ಡಿಸೊಜ, ಎಲ್ರೊಯ್ ಕಿರಣ್ ಕ್ರಾಸ್ಟೊ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೊಜ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ.ಪಿಂಟೊ, ಸುಶಾಂತ್ ಸಲ್ಡಾನ್ಹಾ, ಐರಿನ್ ರೆಬೆಲ್ಲೊ, ಡಾ.ಫ್ರೀಡಾ ಡಿಸೊಜ, ಆಲ್ವಿನ್ ಪಿ.ಮೊಂತೆರೊ, ಫೆಲಿಕ್ಸ್ ಡಿಕ್ರೂಜ್, ಶರ್ಮಿಳಾ ಮಿನೇಜಸ್ ಹಾಗೂ ಮಹಾ ಪ್ರಬಂಧಕ ಸುನಿಲ್ ಮಿನೇಜಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X