Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸಮನ್ವಯ ಶಿಕ್ಷಕರ ಸಂಘದ...

ಮಂಗಳೂರು: ಸಮನ್ವಯ ಶಿಕ್ಷಕರ ಸಂಘದ ವತಿಯಿಂದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ

ಸಮನ್ವಯ ಶಿಕ್ಷಕ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ18 Nov 2024 8:03 PM IST
share
ಮಂಗಳೂರು: ಸಮನ್ವಯ ಶಿಕ್ಷಕರ ಸಂಘದ ವತಿಯಿಂದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ

ಮಂಗಳೂರು: ಭಾರತ ರತ್ನ ಮೌಲಾನಾ ಅಬುಲ್ ಕಲಾಂ ಆಝಾದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಮತ್ತು ಸಮನ್ವಯ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯ ಶಿಕ್ಷಕರ ಸಂಘದ ವತಿಯಿಂದ ತುಂಬೆ ಪದವಿಪೂರ್ವ ಕಾಲೇಜಿನಲ್ಲಿ ರವಿವಾರ ನಡೆಯಿತು.

ಸಮಾರಂಭದಲ್ಲಿ ಪ್ರಧಾನ ಭಾಷಣಗಾರರಾಗಿ ಭಾಗವಹಿಸಿದ್ದ ಅಡ್ಯಾರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರೊ. ಡಾ.ಮುಸ್ತಫಾ ಬಸ್ತಿಕೋಡಿ, ಮೌಲಾನಾ ಅಬುಲ್ ಕಲಾಂ ಆಝಾದ್‌ ಅವರು ಪ್ರಾಥಮಿಕ ಶಿಕ್ಷಣವು ಮಗುವಿನ ಹಕ್ಕಾಗಿದ್ದು ಅದು ಎಲ್ಲೆಡೆ ಮತ್ತು ಎಲ್ಲರಿಗೂ ಸಿಗುವಂತಾಗಬೇಕು ಎಂದು ಸ್ವಾತಂತ್ರ್ಯ ಪೂರ್ವದಲ್ಲೇ ಪ್ರತಿಪಾದನೆ ಮಾಡಿ ಅದಕ್ಕಾಗಿ ದೇಶದಲ್ಲಿ ಬುನಾದಿ ಹಾಕಿದ ಮಹಾನ್ ಮೇಧಾವಿಯಾಗಿದ್ದರು ಎಂದು ಹೇಳಿದರು.

ಸಮಾರಂಭವನ್ನು ಉದ್ಘಾಟಿಸಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್ ಮಾತನಾಡಿ ಅಕಾಡೆಮಿಯು ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಪೂರಕವಾದ ಅರ್ಥಪೂರ್ಣ ಕಾರ್ಯಕ್ರಮ ಆಯೋಜನೆಗೆ ಬದ್ಧವಾಗಿದ್ದು ಶಾಶ್ವತವಾದ ಕಚೇರಿ ಮತ್ತು ವಸ್ತು ಸಂಗ್ರಹಾಲಯ ಸ್ಥಾಪನೆಯ ಉದ್ದೇಶವನ್ನು ಹೊಂದಿದೆ. ಇದರ ಸಾಕಾರಕ್ಕಾಗಿ ಶಿಕ್ಷಕ ಸಮುದಾಯದ ಸಹಕಾರ ಅಗತ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಮನ್ವಯ ಶಿಕ್ಷಕ ಪ್ರಶಸ್ತಿಯನ್ನು ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ಅಸ್ಮಾ ಗಡಿಯಾರ್ ಅವರಿಗೆ ಪ್ರದಾನ‌ ಮಾಡಲಾಯಿತು.


ಶಿಕ್ಷಕಿ ಹಸೀನಾ ಮಲ್ನಾಡ್ ಅವರು ಬರೆದಿರುವ ಹನಿಗಡಲು ಶೀರ್ಷಿಕೆಯ ಹನಿಗವನ ಸಂಕಲನವನ್ನು ತುಂಬೆ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ವಿ.ಸುಬ್ರಮಣ್ಯ ಭಟ್ ಬಿಡುಗಡೆ ಮಾಡಿದರು. ಬ್ಯಾರಿ ಸಾಹಿತ್ಯ ಅಕಾಡೆಮಿಯ ತ್ರೈಮಾಸಿಕ ಪತ್ರಿಕೆಯನ್ನು ಹಿರಿಯ ಸಾಹಿತಿ ಅಬ್ದುಲ್ ರೆಹಮಾನ್ ಕುತ್ತೆತ್ತೂರು ಬಿಡುಗಡೆ ಮಾಡಿದರು.

ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಮನ್ವಯ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್ ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ಏರ್ಪಡಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ಸಮಾರಂಭದಲ್ಲಿ ವಿತರಿಸಲಾಯಿತು.

ಸಂಘದ ಕೋಶಾಧಿಕಾರಿ ಮೊಹಮ್ಮದ್ ತೌಸೀಫ್, ಬಂಟ್ವಾಳ ಘಟಕದ ಅಧ್ಯಕ್ಷ ಮೊಹಮ್ಮದ್ ಮನಾಝಿರ್, ಅಕಾಡೆಮಿಯ ಸದಸ್ಯೆ ಸಾರಾ ಅಲಿ ಪರ್ಲಡ್ಕ ಉಪಸ್ಥಿತರಿದ್ದರು. ಕಾರ್ಯದರ್ಶಿ ಹಾರಿಶ್ ಬಾಂಬಿಲ ಸ್ವಾಗತಿಸಿದರು. ಬ್ಯಾರಿ ಅಕಾಡೆಮಿಯ ಸದಸ್ಯ ಅಬೂಬಕ್ಕರ್ ಅನಿಲಕಟ್ಟೆ ಧನ್ಯವಾದಗೈದರು.

ಶಿಕ್ಷಕ ಅಕ್ಬರ್ ಅಲಿ, ನೂರುದ್ದೀನ್ ಜಿ.ಎಂ, ಶಿಕ್ಷಕಿ ಫಝೀಲಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X