Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಮದರಸಗಳ ಗೌಪ್ಯ ಮಾಹಿತಿ ಸಂಗ್ರಹ...

ಮಂಗಳೂರು| ಮದರಸಗಳ ಗೌಪ್ಯ ಮಾಹಿತಿ ಸಂಗ್ರಹ ವಿರುದ್ಧ ಆಕ್ಷೇಪ: ಸ್ಥಗಿತಗೊಳಿಸಲು ಪೊಲೀಸ್ ಕಮಿಷನರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ11 Nov 2024 5:25 PM IST
share
ಮಂಗಳೂರು| ಮದರಸಗಳ ಗೌಪ್ಯ ಮಾಹಿತಿ ಸಂಗ್ರಹ ವಿರುದ್ಧ ಆಕ್ಷೇಪ: ಸ್ಥಗಿತಗೊಳಿಸಲು ಪೊಲೀಸ್ ಕಮಿಷನರ್ ಸೂಚನೆ

ಮಂಗಳೂರು: ನೋಂದಾಯಿತ ಮದರಸಗಳ ಬಗ್ಗೆ ವಕ್ಫ್ ಇಲಾಖೆಯಲ್ಲಿ ಸಂಪೂರ್ಣ ಮಾಹಿತಿಗಳಿದ್ದರೂ, ಪೊಲೀಸರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮದರಸಗಳಲ್ಲಿ ಗೌಪ್ಯವಾಗಿ ಮಾಹಿತಿ ಸಂಗ್ರಹ ಮಾಡುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತವಾದ ಹಿ‌ನ್ನೆಲೆಯಲ್ಲಿ ಈ ಕಾರ್ಯವನ್ನು ಸ್ಥಗಿತಗೊಳಿಸಲಾಗುವುದು ಎಂದು ಪೊಲೀಸ್ ಆಯುಕ್ತ ಅನುಪಮ್‌ ಅಗರ್ವಾಲ್ ರನ್ನು ಭೇಟಿ ಮಾಡಿದ ಮುಸ್ಲಿಂ ಮುಖಂಡರ ನಿಯೋಗಕ್ಕೆ ಸೋಮವಾರ ಭರವಸೆ ನೀಡಿದರು.

ಕೇಂದ್ರ ಗುಪ್ತಚರ ಇಲಾಖೆಯ ಸೂಚನೆಯಂತೆ ರಾಜ್ಯ ಗುಪ್ತಚರ ಇಲಾಖೆಯು ಪೊಲೀಸರ ಮೂಲಕ ಗೌಪ್ಯವಾಗಿ ಮದರಸ ಗಳ ಮಾಹಿತಿ ಪಡೆಯಲು ಮುಂದಾಗಿದ್ದೇ ಮುಸ್ಲಿಮರಲ್ಲಿ ಆತಂಕ ಮತ್ತು ಗೊಂದಲ‌ ಸೃಷ್ಟಿಯಾಗಲು ಕಾರಣ. ಮದರಸಗಳ ಬಗ್ಗೆ ಮಾಹಿತಿ ಬೇಕಿದ್ದರೆ ಸರ್ಕಾರ ಅಧಿಕೃತವಾಗಿ ವಕ್ಫ್ ಇಲಾಖೆಯಿಂದ ನೇರವಾಗಿ ಪಡೆದುಕೊಳ್ಳಬಹುದು, ನೋಂದಾಯಿತ ಮದರಸಗಳ ಬಗ್ಗೆ ವಕ್ಫ್ ಇಲಾಖೆಯಲ್ಲಿ ಸಂಪೂರ್ಣ ಮಾಹಿತಿಗಳಿವೆ. ಮಾಹಿತಿ ನೀಡಲು ಮಸೀದಿ, ಮದರಸ ಆಡಳಿತ ಸಮಿತಿ ಬದ್ಧವಿದೆ ಎಂದು ದ.ಕ‌ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ‌ ಶಾಹುಲ್‌ ಹಮೀದ್ ತಿಳಿಸಿದ್ದಾರೆ.

ಮದರಸಗಳ ಗೌಪ್ಯ ಮಾಹಿತಿ ಸಂಗ್ರಹದ ಬಗ್ಗೆ ಆಕ್ಷೇಪ ಮತ್ತು ದೂರುಗಳು ಬಂದ ಹಿನ್ನೆಲೆಯಲ್ಲಿ ಪ್ರಕ್ರಿಯೆ ಸ್ಥಗಿತಗೊಳಿಸು ವಂತೆ ರಾಜ್ಯ ಗುಪ್ತಚರ ಇಲಾಖೆಯ ನಿರ್ದೇಶಕರು ಸೂಚನೆ ಕೊಟ್ಟಿದ್ದು, ರಾಜ್ಯದಲ್ಲಿ ಈ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಯಾರಿಗೂ ಯಾವುದೇ ಆತಂಕ, ಗೊಂದಲ ಬೇಡ ನಾವು ಕೂಡ ಈ ಪ್ರಕ್ರಿಯೆ ಮುಂದುವರಿಸುವುದಿಲ್ಲ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ರಾಜ್ಯ ಗುಪ್ತಚರ ಸಂಸ್ಥೆಯ ಸೂಚನೆಯಂತೆ ರಾಜ್ಯದಾದ್ಯಂತ ಗೌಪ್ಯವಾಗಿ ಮದರಸಗಳ ಮಾಹಿತಿ ಸಂಗ್ರಹ ಕಾರ್ಯಕ್ಕೆ ಪೊಲೀಸ್ ಇಲಾಖೆ ಮುಂದಾಗಿರುವುದು ಬೆಳಕಿಗೆ ಬಂದಿತ್ತು. ಮಂಗಳೂರು ಕಮಿಷನರೇಟ್ ಪೊಲೀಸರು ಕೂಡ ಮದರಸ ಗಳ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದು ತಿಳಿದುಬಂದಿತ್ತು. ಇದರಿಂದ ಮುಸ್ಲಿಂ‌ ಸಮುದಾಯದಲ್ಲಿ ಆತಂಕ ಮತ್ತು ಗೊಂದಲ ಮನೆ ಮಾಡಿತ್ತು. ಈ ಬಗ್ಗೆ ಮಾಹಿತಿ ಪಡೆಯಲು ಕೆ.ಕೆ‌ ಶಾಹುಲ್ ಹಮೀದ್ ನೇತೃತ್ವದ ಮುಸ್ಲಿಂ ಮುಖಂಡರ ನಿಯೋಗ ಇಂದು ಬೆಳಗ್ಗೆ ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಚರ್ಚೆ ನಡೆಸಿದೆ.

ಈ ವೇಳೆ ನಿಯೋಗಕ್ಕೆ ಮಾಹಿತಿ ನೀಡಿರುವ ಪೊಲೀಸ್ ಆಯುಕ್ತರು, ಮದರಸಗಳ ಮಾಹಿತಿ ಸಂಗ್ರಹ ಪ್ರಕ್ರಿಯೆ ಸ್ಥಗಿತ ಗೊಳಿಸುವಂತೆ ರಾಜ್ಯ ಗುಪ್ತಚರ ನಿರ್ದೇಶಕರಿಂದ ನಮಗೆ ಸೂಚನೆ ಬಂದಿದೆ, ಪೂರ್ತಿ ರಾಜ್ಯದಲ್ಲಿ ಈ ಪ್ರಕ್ರಿಯೆ ಸ್ಥಗಿತ ಗೊಳಿಸಲಾಗಿದೆ ಎಂದರು. ಈ ಕಾರ್ಯದಲ್ಲಿ ನಾವು ಮುಂದುವರಿಯುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಹೀಗಾಗಿ ಯಾರಿಗೂ ಯಾವುದೇ ಗೊಂದಲವಾಗಲಿ ಆತಂಕವಾಗಲಿ ಬೇಡ ಎಂದು ಭರವಸೆ ನೀಡಿದ್ದಾರೆ.

ನಿಯೋಗದಲ್ಲಿ ಪಾಲಿಕೆ ಸದಸ್ಯರಾದ ಅಬ್ದುಲ್‌ ರವೂಫ್ ಮತ್ತು ಲತೀಫ್ ಕಂದಕ್, ಮುಖಂಡರಾದ ಹನೀಫ್ ಹಾಜಿ ಗೋಳ್ತಮಜಲು, ಮುಹಮ್ಮದ್ ಬಪ್ಪಳಿಗೆ, ರಫೀಕ್ ಕಣ್ಣೂರು, ಹೈದರ್ ಬೋಳಾರ, ಹಬೀಬುಲ್ಲಾ ಕಣ್ಣೂರು ಮತ್ತು ಸಮೀರ್ ಕಾಟಿಪಳ್ಳ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X