ಮಂಗಳೂರು: ಮಾದಕ ವಸ್ತು ಮಿಶ್ರಿತ ಚಾಕಲೇಟ್ ಮಾರಾಟ; ಆರೋಪಿಗಳ ಬಂಧನ

ಮಂಗಳೂರು, ಜು.19: ಮಾದಕ ವಸ್ತು ಮಿಶ್ರಿತ ಚಾಕಲೇಟ್ ಗಳನ್ನು ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗೆ ಬಂದರು ಮತ್ತು ಪಾಂಡೇಶ್ವರ ಪೊಲೀಸರು ಬುಧವಾರ ಪ್ರತ್ಯೇಕವಾಗಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ನಗರದ ರಥಬೀದಿಯಲ್ಲಿ ಮನೋಹರ್ ಶೇಟ್ ಮತ್ತು ಫಳ್ನೀರ್‌ನ ಗೂಡಂಗಡಿಯಲ್ಲಿ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ ಎಂಬವರು ಮಾದಕ ವಸ್ತು ಮಿಶ್ರಿತ ಚಾಕಲೇಟ್ ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story