ಮಂಗಳೂರು : ಜಮೀಯ್ಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ, ತರಬೇತಿ ಕಾರ್ಯಕ್ರಮ

ಮಂಗಳೂರು : ಜಮೀಯ್ಯತುಲ್ ಫಲಾಹ್ ಮಂಗಳೂರು ತಾಲೂಕು ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ಹಾಗೂ ತರಬೇತಿ ಕಾರ್ಯಕ್ರಮ ಬುಧವಾರ ಕಂಕನಾಡಿಯ ಜಮೀಯ್ಯತುಲ್ ಫಲಾಹ್ ಸಭಾಭವನದಲ್ಲಿ ನಡೆಯಿತು.
ಜಮೀಯ್ಯತುಲ್ ಫಲಾಹ್ ದ.ಕ ಮತ್ತು ಉಡುಪಿ ಜಿಲ್ಲಾಧ್ಯಕ್ಷ ಅಶ್ಫಾಕ್ ಅಹ್ಮದ್ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದರು. ಮಂಗಳೂರು ತಾಲೂಕು ಘಟಕಾದ್ಯಕ್ಷ ಅಬ್ದುಲ್ ವಹಾಬ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್, ಕೋಶಾಧಿಕಾರಿ ಅಬ್ದುಲ್ ನಾಸಿರ್ ಕೆ.ಕೆ. ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಜಿಲ್ಲಾ ಪತ್ರಿಕಾ ಕಾರ್ಯದರ್ಶಿ ಲತೀಫ್ ನೇರಳಕಟ್ಟೆ, ನಿಕಟಪೂರ್ವ ಅಧ್ಯಕ್ಷ ಸಾಹುಲ್ ಹಮೀದ್ ಕೆ.ಕೆ., ಘಟಕದ ಕಾರ್ಯದರ್ಶಿ ಅಬೂಬಕ್ಕರ್ ಐಡಿಯಲ್, ಕೋಶಾಧಿಕಾರಿ ಸಯ್ಯದ್ ಜುಬೇರ್ ಷಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಜ್ಯ ತರಬೇತುದಾರ, ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು. ಇದೇ ವೇಳೆ 60 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ವೈದ್ಯಕೀಯ ವಿದ್ಯಾರ್ಥಿನಿಯೋರ್ವಳಿಗೆ ಘಟಕದ ಕೋಶಾಧಿಕಾರಿ ಸಯ್ಯದ್ ಜುಬೇರ್ ಷಾ ಅವರ ವೈಯಕ್ತಿಕ ನೆಲೆಯಲ್ಲಿ 60 ಸಾವಿರ ರೂಪಾಯಿ ಸಹಾಯ ಧನ ವಿತರಿಸಲಾಯಿತು.
ಅಬ್ದುಲ್ ವಹಾಬ್ ಸ್ವಾಗತಿಸಿ, ಅಕ್ಬರ್ ಅಲಿ ವಂದಿಸಿದರು.







