Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ. 18 ರಿಂದ ಮೂರನೇ ಆವೃತ್ತಿ ಯ ಮಂಗಳೂರು...

ಜ. 18 ರಿಂದ ಮೂರನೇ ಆವೃತ್ತಿ ಯ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ

ವಾರ್ತಾಭಾರತಿವಾರ್ತಾಭಾರತಿ31 Dec 2024 2:24 PM IST
share
ಜ. 18 ರಿಂದ ಮೂರನೇ ಆವೃತ್ತಿ ಯ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ

ಮಂಗಳೂರು:ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಮೂರನೇ ಆವೃತ್ತಿ ಯ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಇದೇ 2025ರ ಜನವರಿ 18 ರಿಂದ 22 ರ ವರೆಗೆ ಐದು ದಿನಗಳ ಕಾಲ ನಡೆಯಲಿದೆ ಎಂದು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರೀಧರ್ ಶೆಟ್ಟಿ ತಿಳಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಯಲ್ಲಿ ಫುಡ್ ಫೆಯೆಸ್ಟದ ಮಾಹಿತಿ ನೀಡಿದ ಅವರು ಜನವರಿ 18ರ ಸಂಜೆ ಜಿಲ್ಲೆಯ ಹಲವು ಗಣ್ಯ ಅತಿಥಿಗಳಿಂದ ಮೂರನೇ ಆವೃತ್ತಿಗೆ ಅಧಿಕೃತ ಚಾಲನೆ ದೊರೆಯಲಿದ್ದು ಕರಾವಳಿ ಉತ್ಸವ ಮೈದಾನದಿಂದ ನಾರಾಯಣ ಗುರು ವೃತ್ತ, ಮಣ್ಣಗುಡ್ಡ ಗುರ್ಜಿ ವೃತ್ತ, ಕೆನರಾ ಉರ್ವ ದವರೆಗೆ ಪ್ರತಿ ನಿತ್ಯ ಸಂಜೆ 4ರಿಂದ ರಾತ್ರಿ 10 ರವರೆಗೆ ಈ "ಅಹಾರೋತ್ಸವ ನಡೆಯಲಿದೆ.

ಈ ಹಿಂದೆ ಜನವರಿ 15 ರಿಂದ 19 ರ ವರೆಗೆ ನಿಗದಿಯಾಗಿದ್ದ ಸ್ಟ್ರೀಟ್ ಫುಡ್ ಫಿಯೆಸ್ಪದ ದಿನಾಂಕದಲ್ಲಿ ಅಲ್ಪ ಬದಲಾವಣೆಯನ್ನು ಮಾಡಲಾಗಿದ್ದು ಜ. 17ರ ಸಂಜೆ ಮಂಗಳೂರು ನಗರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವಕ್ಕೆ 'ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಭದ್ರತೆ ಹಾಗೂ ಇನ್ನಿತರ ಕಾರಣಗಳಿಗೆ ಸ್ಟ್ರೀಟ್ ಫುಡ್ ಫಿಯೆಸ್ಪದ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ ಎಂದರು.

ಸ್ಟ್ರೀಟ್ ಫುಡ್ ಫಿಯೆಸ್ಟಗೆ ಎಲ್ಲಾ ತಯಾರಿಗಳು ಭರದಿಂದ ಸಾಗಿದ್ದು ಈಗಾಗಲೇ ಆನ್ ಲೈನ್ ಮೂಲಕ ನೂರಕ್ಕೂ ಅಧಿಕ ಸಂಖ್ಯೆಯ ಆಹಾರ ಮಳಿಗೆಗಳು ನೋಂದಾಯಿಕೊಂಡಿದ್ದು, ಕೆಲವೇ ಕೆಲವು ಮಳಿಗೆಗಳು ಮಾತ್ರ ಬಾಕಿ ಉಳಿದಿವೆ. ಆಸಕ್ತರು ಕೂಡಲೇ ಆನ್ ಲೈನ್ ಮೂಲಕವೇ ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು.

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆದ ಕಳೆದ ಎರಡು ಆವೃತ್ತಿಗಳ ಆಹಾರೋತ್ಸವ ಲಕ್ಷಾಂತರ ಜನರನ್ನು ಆಕರ್ಷಿಸಿ ಭಾರೀ ಜನಮನ್ನಣೆ ಪಡೆದು ಅತ್ಯಂತ ಯಶಸ್ವಿಯಾಗಿತ್ತು. ಈ ಹಿಂದಿನಂತೆಯೇ ಗ್ರಾಹಕರಿಗೆ ತುಳುನಾಡಿನ ಸಾಂಪ್ರದಾಯಿಕ ಆಹಾರ ಶೈಲಿ ಮಾತ್ರವಲ್ಲದೇ, ವಿಶಿಷ್ಟವಾದ ಕರಾವಳಿ ಖಾದ್ಯ ಉತ್ತರ ಕರ್ನಾಟಕ, ಗುಜರಾತಿ, ಅಂಧ್ರ ಪಂಜಾಬಿ ಸೇರಿದಂತೆ ದಕ್ಷಿಣ ಭಾರತೀಯ, ಉತ್ತರ ಭಾರತೀಯ, ಸನ್ಯಾಹಾರಿ ಮಾಂಸಾಹಾರಿ ಹೀಗೆ ಬಹು ಬೇಡಿಕೆಯ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಮಳಿಗೆಗಳು ಆಹಾರೋತ್ಸವದಲ್ಲಿ ಇರಲಿವೆ. ಅದರಲ್ಲೂ ಈ ಬಾರಿ ಸಾರ್ವಜನಿಕರ ಬೇಡಿಕೆಯ ಮೇರೆಗೆ ಸಸ್ಯಾಹಾರಿ ಮತ್ತು ಮಾಂಸಹಾರಿಗಳಿಗೆ ಪ್ರತ್ಯೇಕ ಕೌಂಟರ್ ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ವಿವರಿಸಿದರು.

ಈ ಹಿಂದೆ ಇದ್ದಂತಹ ಹತ್ತು ಹಲವು ಮನರಂಜನಾ ಕಾರ್ಯಕ್ರಮಗಳು ಇರಲಿವೆ. ಮಕ್ಕಳ ಆಟದ ಜೋನ್ ಗೆ ವಿಶೇಷ ಪ್ರಾಧಾನ್ಯತೆ ನೀಡಲಾಗಿದ್ದು, ಐದು ದಿನಗಳಲ್ಲಿ ಏಕಕಾಲಕ್ಕೆ ಹಲವು

ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾನ್ವಿತರಿಗಾಗಿ ನಮ್ಮ ವೇದಿಕೆ- ನಿಮ್ಮ ಪ್ರತಿಭೆ, ಸೆಲ್ಫಿ ಕೌಂಟರ್, ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವವನ್ನು ಆಚರಿಸಲು ಅವಕಾಶ, ಹೀಗೆ ಹತ್ತು ಹಲವು ಮನರಂಜನಾ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.

ಸಾರ್ವಜನಿಕರ ಸುರಕ್ಷತೆಗೆ ವಿಶೇಷ ಆದ್ಯತೆಯ ಜೊತೆಗೆ ಆಹಾರೋತ್ಸವ ನಡೆಯುವಲ್ಲಿ ಸ್ವಚ್ಚತೆಯ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಈ ಬಾರಿಯೂ ಕ್ರಮಬದ್ಧವಾದ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಫುಡ್ ಫೆಯೆಸ್ಟದ ಎರಡೂ ಆವೃತ್ತಿ ಗಳಲ್ಲೂ ಸಂಘಟಕರು ನಷ್ಟ ಅನುಭವಿಸಿದ್ದಾರೆ. ಹೀಗಾಗಿ ಈ ಬಾರಿ ಕರಾವಳಿ ಉತ್ಸವದೊಂದಿಗೆ ಆಹಾರೋತ್ಸವವನ್ನು ಜೋಡಿಸಲು, ಸರಕಾರದ ಸಹಕಾರೊಂದಿಗೆ ಆಹಾರೋತ್ಸವನ್ನು ಮುಂದುವರಿಸಲು ಚಿಂತನೆ ನಡೆಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ದಿವಾಕರ ಪಾಂಡೇಶ್ವರ,ಪದಾಧಿಕಾರಿಗಳಾದ ಯತೀಶ್ ಬೈಕಂಪಾಡಿ,ಲಲಿತ್ ಮೆಂಡನ್,ಅಶ್ವಿತ್ ಕೊಟ್ಟಾರಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X