ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಂಗಳೂರು: ಕಾವೂರು ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಸಬಾ ಬೆಂಗರೆಯ ನೌಮಾನ್ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದಿಂದ ಹಲವು ಬಾರಿ ವಾರೆಂಟ್ ಹೊರಡಿಸಿದರೂ ಹಾಜರಾಗದೆ ಕಳೆದ 5 ವರ್ಷದಿಂದ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಕಾವೂರು ಠಾಣೆಯ ಇನ್‌ಸ್ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಸೈ ಮಲ್ಲಿಕಾರ್ಜುನ ಬಿರಾದಾರ್‌ರ ಮಾರ್ಗದರ್ಶನಂತೆ ಹೆಡ್‌ಕಾನ್‌ಸ್ಟೇಬಲ್ ಬಾಲಕೃಷ್ಣ, ಕಾನ್‌ಸ್ಟೇಬಲ್‌ಗಳಾದ ಚಂದ್ರಶೇಖರ, ರಾಘವೇಂದ್ರ ಎಚ್.ಎಂ. ಮಂಗಳವಾರ ಉಪ್ಪಳ ಸಮೀಪದ ಕೈಕಂಬ ಎಂಬಲ್ಲಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Next Story





