Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.9ರಿಂದ ಮಂಗಳೂರು ಟ್ರಯತ್ಲಾನ್

ಜ.9ರಿಂದ ಮಂಗಳೂರು ಟ್ರಯತ್ಲಾನ್

ವಾರ್ತಾಭಾರತಿವಾರ್ತಾಭಾರತಿ17 Dec 2025 7:28 PM IST
share
ಜ.9ರಿಂದ ಮಂಗಳೂರು ಟ್ರಯತ್ಲಾನ್

ಮಂಗಳೂರು: ಕರಾವಳಿ ಉತ್ಸವ 2025ರ ಆಯೋಜನೆ ಅಂಗವಾಗಿ ತಣ್ಣೀರುಬಾವಿ ಕಡಲ ತೀರದಲ್ಲಿ ಜನವರಿ 9 ರಿಂದ 11 ರವರೆಗೆ ತಪಸ್ಯಾ ಫೌಂಡೇಶನ್ ಸಹಯೋಗದಲ್ಲಿ ಟ್ರಯತ್ಲಾನ್ ಚಟುಚಟಿಕೆಗಳು ನಡೆಯಲಿದ್ದು, ಈ ಸಂದರ್ಭದಲ್ಲಿ ಎಲ್ಲಾ ಇಲಾಖೆಗಳು ಸೂಕ್ತ ರೀತಿ ಕಾರ್ಯನಿರ್ವಹಿಸುವಂತೆ ಸಹಕರಿಸಬೇಕು ಎಂದು ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಹೇಳಿದ್ದಾರೆ.

ಬುಧವಾರ ಸಹಾಯಕ ಆಯುಕ್ತರ ಕಚೇರಿಯಲ್ಲಿ ನಡೆದ ಟ್ರಯತ್ಲಾನ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸೈಕ್ಲಿಂಗ್, ಮ್ಯಾರಥಾನ್‌ನಲ್ಲಿ ಅನೇಕ ಮಂದಿ ಕ್ರೀಡಾಪಟುಗಳು ಭಾಗವಹಿಸಲಿದ್ದು, ಕ್ರೀಡಾಪಟುಗಳಿಗೆ ಯಾವುದೇ ತೊಂದರೆಯಾಗದಂತೆ ರಸ್ತೆಗಳಲ್ಲಿರುವ ಹೊಂಡ ಗುಂಡಿಗಳನ್ನು ಮುಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಸೂಕ್ತ ರೀತಿಯಲ್ಲಿ ಬೀದಿ ದೀಪದ ವ್ಯವಸ್ಥೆಯನ್ನು ಮಾಡಬೇಕು ಸ್ಪರ್ಧಾತ್ಮಕ ಕ್ರೀಡೆ, ಗ್ರಾಮೀಣ ಮತ್ತು ಕೃಷಿ-ತಂತ್ರಜ್ಞಾನ ನಾವೀನ್ಯತೆ, ಸಾಂಸ್ಕತಿಕ ಕಲೆಗಳು, ಯುವ ಪ್ರತಿಭಾ ವೇದಿಕೆಗಳು ಮತ್ತು ಸಮುದಾಯ-ಚಾಲಿತ ಅನುಭವಗಳನ್ನು ಸಂಯೋಜಿಸುವ ಈ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳಿಗೆ, ಕಲಾವಿದರಿಗೆ ಯಾವುದೇ ರೀತಿಯ ಸಮಸ್ಯೆಗಳಾ ಗದಂತೆ ಕ್ರಮವಹಿಸಬೇಕು ಎಂದು ತಿಳಿಸಿದರು.

ಜನವರಿ 9 ರಂದು ರಾಷ್ಟ್ರೀಯ ಓಪನ್ ವಾಟರ್ ಈಜು ಚಾಂಪಿಯನ್‌ಶಿಪ್‌ನೊಂದಿಗೆ ಉತ್ಸವವು ಪ್ರಾರಂಭವಾಗು ತ್ತದೆ. ಮೊದಲ ದಿನವು ರಾಜ್ಯ ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ, 20-30 ಮಳಿಗೆಗಳನ್ನು ಹೊಂದಿರುವ ಕೃಷಿ ತಂತ್ರಜ್ಞಾನ ಪ್ರದರ್ಶನ ಮತ್ತು ಬೀಚ್ ಕುಸ್ತಿ ಸ್ಪರ್ಧೆಗಳನ್ನು ಒಳಗೊಂಡಿದೆ. ಜನವರಿ 10 ರಂದು ಸೈಕ್ಲಿಂಗ್, ಡ್ಯುಯಥ್ಲಾನ್, ಬೀಚ್ ಕುಸ್ತಿ ಮತ್ತು ಬೈಕ್ ಸ್ಟಂಟ್ ಶೋ ಮತ್ತು ನೃತ್ಯ ಸ್ಪರ್ಧೆಗಳು ನಡೆಯಲಿದೆ. ಜನವರಿ 11 ರಂದು ಮಂಗಳೂರು ಟ್ರಯಥ್ಲಾನ್ ಮತ್ತು ಮ್ಯಾರಥಾನ್ ಸ್ಪರ್ಧೆಗಳ ನಂತರ ಕಲಾ ಸ್ಪರ್ಧೆ ಮತ್ತು ಬ್ಯಾಟಲ್ ಆಫ್ ಬ್ಯಾಂಡ್ಸ್, ಫ್ಯಾಷನ್ ಶೋ ಪ್ರದರ್ಶನ ನಡೆಯಲಿದೆ ಎಂದು ತಪಸ್ಯಾ ಫೌಂಡೇಶನ್ ಪ್ರತಿನಿಧಿ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X