ಮಂಗಳೂರು | ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರಕ್ಕೆ ಟಿವಿ ಕೊಡುಗೆ

ಮಂಗಳೂರು, ನ.23: ನಗರದ ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರಕ್ಕೆ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯ ಮಹಾ ಪ್ರಬಂಧಕ ಅರುಣ್ ಪ್ರಭ ಕೊಡುಗೆಯಾಗಿ ನೀಡಿರುವ ಟಿವಿಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಅವರು ಈ ಅಂಗನವಾಡಿ ಕೇಂದ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ತಿಳಿಸಿದರು.
ಆನೆಗುಂಡಿ ಅಂಗನವಾಡಿ ಕೇಂದ್ರ ಬಾಡಿಗೆ ಕೊಠಡಿಯಲ್ಲಿದ್ದು, ಅದಕ್ಕೂ ಸ್ವಂತ ಕಟ್ಟಡ ನಿರ್ಮಾಣಕ್ಕೆ ಸರಕಾರದಿಂದ ಜಮೀನು ಒದಗಿಸುವ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಬಾಲಭವನ ಸೊಸೈಟಿ ಅಧ್ಯಕ್ಷ ಬಿ ಆರ್ ನಾಯ್ಡು, ಕರ್ನಾಟಕ ಸೆಣಬು ಅಭಿವೃದ್ಧಿ ನಿಗಮದ ಅಧ್ಯಕ್ಷ ನಟರಾಜ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪೆನಿ ಜನರಲ್ ಮ್ಯಾನೇಜರ್ ಅರುಣ್ ಪ್ರಭಾ, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ, ಎಂ ಸಿ ಸಿ ಬ್ಯಾಂಕ್ ನಿರ್ದೇಶಕ ಅಲ್ವಿನ್ ಮೊಂತೆರೋ, ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಸಿಂಧೂ, ಶಿಕ್ಷಕಿ ಲಕ್ಷ್ಮೀ , ಕೆ ವಿ ಪ್ರಭಾಕರ್ ಕುಟುಂಬದ ಸದಸ್ಯರು, ವಿವಿಧ ಅಂಗನವಾಡಿ ಕೇಂದ್ರದ ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳ ಹೆತ್ತವರು ಉಪಸ್ಥಿತರಿದ್ದರು.







