ಮಂಗಳೂರು: ನಗರದ ಕ್ಲಾಕ್ ಟವರ್ ಬಳಿಯ ಅಂಗಡಿಯಲ್ಲಿ ಇಂದು ಮುಂಜಾವ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಆವರಿಸಿದೆ ಎಂದು ಹೇಳಲಾಗುತ್ತಿದೆ. ಪಾಂಡೇಶ್ವರ, ಕದ್ರಿ ಹಾಗೂ ಬಂಟ್ವಾಳ ಅಗ್ನಿಶಾಮಕ ದಳದ ಅಧಿಕಾರಿ, ಸಿಬ್ಬಂದಿ ವರ್ಗವು ಬೆಂಕಿ ನಂದಿಸಲು ಶ್ರಮಿಸುತ್ತಿರುವುದಾಗಿ ತಿಳಿದು ಬಂದಿದೆ.