Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಒಂದೂವರೆ ತಿಂಗಳಲ್ಲಿ...

ಮಂಗಳೂರು: ಒಂದೂವರೆ ತಿಂಗಳಲ್ಲಿ ಕಳೆದುಹೋಗಿದ್ದ 233 ಮೊಬೈಲ್ ಪತ್ತೆ

ವಾರ್ತಾಭಾರತಿವಾರ್ತಾಭಾರತಿ31 Oct 2025 3:07 PM IST
share
ಮಂಗಳೂರು: ಒಂದೂವರೆ ತಿಂಗಳಲ್ಲಿ ಕಳೆದುಹೋಗಿದ್ದ 233 ಮೊಬೈಲ್ ಪತ್ತೆ

ಮಂಗಳೂರು, ಅ. 31: ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಸೆ.15ರಿಂದ ಅ.30ರವರೆಗೆ ಸಾರ್ವಜನಿಕರು ಕಳೆದುಕೊಂಡ ಮೊಬೈಲ್ ಫೋನ್‌ಗಳಲ್ಲಿ ಒಟ್ಟು 233 ಫೋನ್‌ಗಳನ್ನು ಸಿಇಐಆರ್ ಪೋರ್ಟಲ್ ಮುಖಾಂತರ ಪತ್ತೆ ಮಾಡಲಾಗಿದ್ದು, ಈ ಫೋನ್‌ಗಳನ್ನು ಶುಕ್ರವಾರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಾರ್ವಜನಿಕರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿಸಿಪಿ ಮಿಥುನ್ ಎಚ್.ಎನ್., ಸಾರ್ವಜನಿಕರು ಕಳೆದುಕೊಂಡ ಅಥವಾ ಕಳುವಾದ ಮೊಬೈಲ್ ಫೋನ್‌ಗಳನ್ನು ಪತ್ತೆ ಮಾಡಲು ತಂಡವೊಂದನ್ನು ರಚಿಸಲಾಗಿತ್ತು. ನಿರಂತರವಾಗಿ ಈ ಪ್ರಕರಣಗಳನ್ನು ಬೆನ್ನತ್ತಿ ಫೋನ್‌ಗಳನ್ನು ಮರಳಿ ಪಡೆಯಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರು ಮೊಬೈಲ್ ಫೋನ್ ಕಳೆದುಕೊಂಡರೆ 2022ರಲ್ಲಿ ಆರಂಭಿಸಲಾದ ಸಂಚಾರ ಸಾಥಿ ಪೋರ್ಟಲ್‌ನ ಸಿಇಐಆರ್ ಮೊಡ್ಯೂಲ್ ಮೂಲಕ ಬ್ಲಾಕ್ ಮಾಡಬಹುದು. ಇದಕ್ಕಾಗಿ ಮೊಬೈಲ್ ಫೋನ್‌ನ IMEI ಸಂಖ್ಯೆ, ಅಸಲಿ ಇನ್‌ವಾಯ್ಸ್, ಮೊಬೈಲ್ ಮಾಡೆಲ್, ಮೊಬೈಲ್ ಸಂಖ್ಯೆ ಇವಿಷ್ಟು ದಾಖಲೆಗಳಿದ್ದರೆ ಬ್ಲಾಕ್ ಮಾಡಲು ಅನುಕೂಲ ಆಗಲಿದೆ ಎಂದರು.

ಸಂಚಾರ ಸಾಥಿ ಪೋರ್ಟಲ್ ಮೂಲಕ ಸಂಶಯಾಸ್ಪದ ಕರೆಗಳನ್ನು (ಅಂತಾರಾಷ್ಟ್ರೀಯ ಕರೆ ಸೇರಿ) ರಿಪೋರ್ಟ್ ಮಾಡಬಹುದು, ಮೊಬೈಲ್ ಹ್ಯಾಂಡ್‌ಸೆಟ್ ಅಸಲಿಯೋ ನಕಲಿಯೋ ತಿಳಿಯಬಹುದು. ತಮ್ಮ ಆಧಾರ್ ನಂಬರ್‌ನಿಂದ ಎಷ್ಟು ಸಿಮ್ ಕಾರ್ಯ ನಿರ್ವಹಿಸುತ್ತಿವೆ ಎನ್ನುವುದನ್ನು ಪರಿಶೀಲಿಸಿ, ಅನಧಿಕೃತ ಸಿಮ್ ಇದ್ದರೆ ಅದನ್ನು ನಿಷ್ಕ್ರಿಯಗೊಳಿಸುವುದು ಇತ್ಯಾದಿ ಕೆಲಸಗಳನ್ನು ನಿರ್ವಹಿಸಬಹುದು. ಅಲ್ಲದೆ ಕಾಲಕಾಲಕ್ಕೆ ಸೈಬರ್ ಅಪರಾಧಗಳ ಬಗ್ಗೆ ಅರಿವು ಪಡೆದುಕೊಳ್ಳಬಹುದು. ಸಾರ್ವಜನಿಕರು ಈ ಅವಕಾಶ ಸದ್ಬಳಕೆ ಮಾಡಬೇಕು ಎಂದು ಮಿಥುನ್ ಎಚ್.ಎನ್. ತಿಳಿಸಿದರು.

ಡಿಸಿಪಿ ರವಿಶಂಕರ್, ಹಿರಿಯ ಪೊಲೀಸ್ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

ಯಾವ ಠಾಣೆಯಲ್ಲಿ ಎಷ್ಟು ಮೊಬೈಲ್ ಪತ್ತೆ?

ಮಂಗಳೂರು ಉತ್ತರ ಠಾಣೆ- 9, ಮಂಗಳೂರು ದಕ್ಷಿಣ- 16, ಉರ್ವ ಠಾಣೆ- 19, ಬರ್ಕೆ- 20, ಮಂಗಳೂರು ಪೂರ್ವ ಠಾಣೆ- 18, ಉಳ್ಳಾಲ- 17, ಕೊಣಾಜೆ- 10, ಮಂಗಳೂರು ಗ್ರಾಮಾಂತರ- 7, ಕಂಕನಾಡಿ- 20, ಪಣಂಬೂರು- 23, ಸುರತ್ಕಲ್- 14,

ಮೂಲ್ಕಿ- 11, ಮೂಡುಬಿದಿರೆ- 14, ಕಾವೂರು- 14, ಬಜ್ಪೆ ಠಾಣೆ- 9, ಸೆನ್ ಠಾಣೆ- 12 ಫೋನ್‌ಗಳನ್ನು ಪತ್ತೆ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X