ಮಂಗಳೂರು | ಗಾಂಜಾ ಸಹಿತ ಆರೋಪಿ ಸೆರೆ

ಸಾಂದರ್ಭಿಕ ಚಿತ್ರ
ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಂಟ್ವಾಳ ತಾಲೂಕಿನ ಬಿಳಿಯೂರಿನ ಸಮೀರ್ ಯಾನೆ ಕರುವೇಲ್ ಸಮೀರ್(23) ಎಂಬಾತನನ್ನು ಬಂದರು ಠಾಣೆಯ ಪೊಲೀಸರು ರವಿವಾರ ಬಂಧಿಸಿದ್ದಾರೆ.
ನಗರದ ಕೊಡಿಯಾಲ್ಬೈಲ್ನ ಪಿವಿಎಸ್ ಜಂಕ್ಷನ್ ರಸ್ತೆಯಿಂದ ಕೆ.ಎಸ್.ರಾವ್ ರಸ್ತೆಗೆ ಸಂಪರ್ಕಿಸುವ ಕಚ್ಚಾ ರಸ್ತೆ ಬದಿಯ ಸಾರ್ವಜನಿಕ ಸ್ಥಳದಲ್ಲಿ ಈತ ಬ್ಯಾಗ್ ಹಿಡಿದುಕೊಂಡು ಮಾದಕ ವಸ್ತು ಗಾಂಜಾ ಮಾರಾಟ ಮಾಡಲು ಬಂದಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದರು.
ಆರೋಪಿಯು ಪೊಲೀಸರನ್ನು ಕಂಡು ಓಡಲು ಯತ್ನಿಸಿದಾಗ ಬೆನ್ನಟ್ಟಿದ ಪೊಲೀಸರು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ 46 ಗ್ರಾಂನ 2 ಪ್ಯಾಕೆಟ್, 42 ಗ್ರಾಂನ 1 ಪ್ಯಾಕೆಟ್, 1.64 ಕೆಜಿಯ 1 ಪ್ಯಾಕೆಟ್ ಸಹಿತ ಅಂದಾಜು 56,700 ರೂ. ಮೌಲ್ಯದ ಗಾಂಜಾ, ಐ ಪೋನ್, ಡಿಜಿಟಲ್ ತೂಕ ಮಾಪನವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
Next Story





