ಮಂಗಳೂರು | ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು, ನ.12: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಲ್ಲೆ ಪ್ರಕರಣದ ಆರೋಪಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕನ್ಯಾನ ನಿವಾಸಿ ಮೊಯಿದ್ದೀನ್ ಶಾಕೀರ್ ಯಾನೆ ಮೊಯ್ದು ಶಾಕೀರ್ (27) ಬಂಧಿತ ಆರೋಪಿ. ಈತ ಕನ್ಯಾನ ನಿವಾಸಿ ಆನಂದ ಎಂಬವರಿಗೆ 2020ರ, ಸೆ.9ರಂದು ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದನು. ಈತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಯು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ಹಿನ್ನೆಲೆಯಲ್ಲಿ ಆರೋಪಿ ಮೇಲೆ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಜಾರಿಗೊಳಿಸಿತ್ತು.
ಆರೋಪಿಯನ್ನು ನ.13ರಂದು ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸ್ತಗಿರಿ ಮಾಡಿ, ನ.14ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು ಸೂಕ್ತ ಜಾಮೀನಿನೊಂದಿಗೆ ಬಿಡುಗಡೆ ಮಾಡಿದೆ.
Next Story





