ಮಂಗಳೂರು | ಉತ್ತಮ ನೈರ್ಮಲ್ಯ ಅಭ್ಯಾಸ ಮೈಗೂಡಿಸಿಕೊಳ್ಳಿ : ಜಯಪ್ರಕಾಶ್

ಮಂಗಳೂರು,ನ.26: ವಿಶಿಷ್ಟ ಕಲಿಕೆಯೊಂದಿಗೆ ಉತ್ತಮ ನೈರ್ಮಲ್ಯ ಅಭ್ಯಾಸಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಾಗಿದೆ. ಪರಿಸರ ಕಾಳಜಿಯೊಂದಿಗೆ ಓದು ಉತ್ತಮಗೊಳ್ಳುತ್ತದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಜಯಪ್ರಕಾಶ್ ಹೇಳಿದರು.
ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಡಿ ಜಿಪಂ ಹಾಗೂ ಕಳೆಂಜ ಗ್ರಾಪಂ ಸಹಭಾಗಿತ್ವದಲ್ಲಿ ಕಾಯತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಏರ್ಪಡಿಸಲಾದ ಚಿತ್ರಕಲೆ ಬಿಡಿಸುವ ಸ್ಪರ್ಧೆ ಮತ್ತು ಮಾಹಿತಿ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಪಂ ಪಿಡಿಒ ಹೊನ್ನಮ್ಮ, ಜಿಪಂ ಡಿಪಿಎಂ ವಿಜ್ಞೇಶ್ ರಾಜ್ ಮತ್ತಿತರರು ಉಪಸ್ಥಿತರಿದ್ದರು. ಸಂಯೋಜಕ ಶಿವರಾಂ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಆನಂದ್ ಕಾರ್ಯಕ್ರಮ ನಿರೂಪಿಸಿದರು.
Next Story





