Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿಮಾನ ನಿಲ್ದಾಣ ರನ್ ವೇ...

ಮಂಗಳೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ : ಭೂಮಿ ಕಳೆದುಕೊಳ್ಳುವವರಿಗೆ ಉದ್ಯೋಗ ವಸತಿಗೆ ಐವನ್ ಡಿಸೋಜಾ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ4 Sept 2025 4:06 PM IST
share
ಮಂಗಳೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ : ಭೂಮಿ ಕಳೆದುಕೊಳ್ಳುವವರಿಗೆ ಉದ್ಯೋಗ ವಸತಿಗೆ ಐವನ್ ಡಿಸೋಜಾ ಒತ್ತಾಯ

ಮಂಗಳೂರು, ಸೆ.4: ಮಂಗಳೂರು ವಿಮಾನ ನಿಲ್ದಾಣದಲ್ಲಿ ರನ್ ವೇಯನ್ನು150 ಮೀ. ವಿಸ್ತರಿಸಬೇಕೆಂಬ ನಿರ್ಧಾರ ಕೈಗೊಳ್ಳಲಾಗಿದ್ದು, ಇದಕ್ಕೆ 32.97 ಎಕರೆ ಜಾಗ ಒದಗಿಸುವಂತೆ ರಾಜ್ಯ ಸರಕಾರಕ್ಕೆ ವಿಮಾನ ನಿಲ್ದಾಣ ಪ್ರಾಧಿಕಾರ ಮನವಿ ಮಾಡಿದೆ. ವಿಮಾನ ನಿಲ್ದಾಣದಿಂದ ರಾಜ್ಯ ಸರಕಾರಕ್ಕೆ ಯಾವುದೇ ಪಾಲು ಸಿಗದ ಹಿನ್ನೆಲೆ ಪ್ರಾಧಿಕಾರ ಹಾಗೂ ಗುತ್ತಿಗೆ ವಹಿಸಿಕೊಂಡಿರುವ ಅದಾನಿ ಕಂಪೆನಿ ಭೂ ಸ್ವಾಧೀನ ವೆಚ್ಚವನ್ನು ಭರಿಸಬೇಕು ಎಂದು ಸರಕಾರ ತಿಳಿಸಿದ್ದು, ಪ್ರಾಧಿಕಾರ ಅದಾನಿ ಸಂಸ್ಥೆಗೆ ಭೂ ಸ್ವಾಧೀನ ವೆಚ್ಚ ಭರಿಸಲು ತಿಳಿಸಿದೆ. ಭೂಮಿ ಕಳೆದುಕೊಳ್ಳುವವರಿಗೆ ಸೂಕ್ತ ಪರಿಹಾರ, ಉದ್ಯೋಗ ಹಾಗೂ ವಸತಿ ವ್ಯವಸ್ಥೆಯನ್ನುಕಂಪೆನಿ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.

ಮಂಗಳೂರಿನ ಪಾಲಿಕೆಯ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ನಲ್ಲಿ ರನ್ವೇ ವಿಸ್ತರಣೆಗೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿದ್ದು, ರನ್ ವೇ ವಿಸ್ತರಣೆ ಸಂಬಂಧಿಸಿದಂತೆ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಸರಕಾರ ಪತ್ರ ಬರೆದು ಮನವಿ ಮಾಡಿದೆ ಎಂಬ ಉತ್ತರ ಲಭಿಸಿದೆ ಎಂದರು.

ರಾಜ್ಯದ ಎರಡನೇ ದೊಡ್ಡ ಅಂತರರಾಷ್ಟೀಯ ವಿಮಾನ ನಿಲ್ದಾಣವಾಗಿದ್ದರೂ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಮರ್ಪಕ ಬೆಳಕಿನ ಕೊರತೆ ಇದೆ. ಪ್ರತಿಕೂಲ ಹವಾಮಾನ ಇದ್ದಲ್ಲಿ ವಿಮಾನಗಳನ್ನು ಇಳಿಸಲು ಸಾಧ್ಯವಾಗುತ್ತಿಲ್ಲ. ದೊಡ್ಡ ಗಾತ್ರದ ಬೋಯಿಂಗ್ ವಿಮಾನಗಳು ಮಂಗಳೂರಿಗೆ ಆಗಮಿಸುತ್ತಿಲ್ಲ. ಈ ಸಮಸ್ಯೆಗೆ ಪ್ರಾಧಿಕಾರ ಹಾಗೂ ಕಂಪೆನಿ ಪರಿಹಾರ ಕೈಗೊಳ್ಳಬೇಕು ಎಂದರು.

ಮಂಗಳೂರು ಟೇಬಲ್ ಟಾಪ್ ವಿಮಾನ ನಿಲ್ದಾಣವಾಗಿರುವ ಕಾರಣದಿಂದ ವಿವಿಧ ಸಮಸ್ಯೆಗಳಾಗುತ್ತಿದ್ದು, ಹಿಂದಿನ ಬೇಡಿಕೆಯಂತೆ ಪಡುಬಿದ್ರೆ, ಪಲಿಮಾರು ಭಾಗದಲ್ಲಿರುವ ಸರಕಾರಿ ಜಾಗದಲ್ಲಿ ಉಭಯ ಜಿಲ್ಲೆಗೆ ಆನುಕೂಲವಾಗುವಂತೆ ವಿಮಾನ ನಿಲ್ದಾಣ ನಿರ್ಮಿಸುವ ಅಗತ್ಯವಿದೆ. ಇದಕ್ಕಾಗಿ ಉಭಯ ಜಿಲ್ಲೆಯ ಸಂಸದರು ಕೇಂದ್ರಕ್ಕೆ ಒತ್ತಡ ಹಾಕಬೇಕಿದೆ ಎಂದರು.

ಕುಡುಬಿ ಸಮುದಾಯವನ್ನು ಪ. ಪಂಗಡಕ್ಕೆ ಸೇರಿಸಲು ರಾಜ್ಯದಿಂದ ಸಮ್ಮತಿ :

ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗದಲ್ಲಿ ಅಧಿಕವಾಗಿರುವ ಕುಡುಬಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹಲವು ವರ್ಷಗಳಿಂದ ಒತ್ತಾಯಗಳು ಕೇಳಿ ಬರುತ್ತಿದ್ದು, ಇದೀಗ ಸರಕಾರ ಪ್ರವರ್ಗ-1ರಿಂದ ಕುಡುಬಿ ಸಮುದಾಯವನ್ನು ಪ. ಪಂಗಡಕ್ಕೆ ಸೇರಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅನುಮತಿ ಸಿಕ್ಕಿದ್ದು, ಕೇಂದ್ರ ಸರಕಾರ ಈ ಬಗ್ಗೆ ಕ್ರಮ ಕೈಗೊಳ್ಳಲು ಸಂಸದ ಕ್ಯಾ.ಬ್ರಿಜೇಶ್ ಚೌಟ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಎಂದರು.

ಕುಡುಬಿ ಸಮುದಾಯವನ್ನು ಕರ್ನಾಟಕ ರಾಜ್ಯದ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವ ಬಗ್ಗೆ 2015ರಲ್ಲಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಮೂಲಕ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಎಕೊನಾಮಿಕ್ ಆ್ಯಂಡ್ ಚೇಂಜ್ ಮೂಲಕ ಕುಲಶಾಸ್ತ್ರಿಗಳ ಅಧ್ಯಯನ ನಡೆಸಲು ಆದೇಶವಾಗಿತ್ತು. ಅಧ್ಯಯನ ನಡೆಸಿ 2021ರಲ್ಲಿ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು. ವರದಿಯಲ್ಲಿ ಕುಡುಬಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಶಿಫಾರಸ್ಸು ಮಾಡಲಾಗಿದೆ. ಆದರಂತೆ ಸರಕಾರ ಕ್ರಮ ವಹಿಸಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X