ಮಂಗಳೂರು | ಕರಂಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

ಮಂಗಳೂರು, ಡಿ. 22: ಕರಂಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿ ಕ ಕ್ರೀಡಾಕೂಟ ಶನಿವಾರ ಮಳವೂರು ಮ್ಯಾಪ್ಸ್ ಕಾಲೇಜು ಮೈದಾನದಲ್ಲಿ ನಡೆಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗುಣಪಾಲ ದೇವಾಡಿಗ ಮತ್ತು ಕಾಲೇಜು ಪ್ರಾಂಶುಪಾಲ ದಿನೇಶ್ ಆಳ್ವ ಉದ್ಘಾಟಿಸಿದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಾಣಾಧಿಕಾರಿ ಟಿಆರ್‌ಪಿ ಭರತ್ ಶಾಲಾ ಧ್ವಜಾರೋಹಣವನ್ನು ನೆರವೇರಿಸಿದರು. ಕರಂಬಾರು ಸಮೂಹ ಸಂಪನ್ಮೂಲ ವ್ಯಕ್ತಿ ಹೇಮಂತ್ ಕ್ರೀಡಾ ಜ್ಯೋತಿ ಹಸ್ತಾಂತರ ನೆರವೇರಿಸಿದರು.
ಪಿ ಟಿ ಕೃಷ್ಣಪ್ಪ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕರಂಬಾರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ನವೀನ ಕುಮಾರಿ, ದಿನೇಶ್,ವಿನೋದ್, ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಪವಿತ್ರ ಸ್ವಾಗತಿಸಿ, ಶಾಲಾ ಶಿಕ್ಷಕಿ ಸುಷ್ಮಿತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಅರುಣ್ ಕರಂಬಾರು ಮತ್ತು ಶಾಲಾ ಶಿಕ್ಷಕಿ ಮಾಲಾಶ್ರೀ ಕಾರ್ಯಕ್ರಮ ನಿರೂಪಿಸಿ, ಶಾಲಾ ಶಿಕ್ಷಕಿ ಅಮೃತ ವಂದಿಸಿದರು.
Next Story





