ಮಂಗಳೂರು | ತಾಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು,ಡಿ.4: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಅಧೀನದ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ದಿ ಯೋಜನೆಗೆ ಪೋಷಣ ಅಭಿಯಾನ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇರೆಗೆ ತಾಲೂಕು ಸಂಯೋಜಕರ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಯಾವುದೇ ಪದವೀಧರರಾಗಿದ್ದು, ಕನ್ನಡ ಹಾಗೂ ಆಂಗ್ಲ ಭಾಷೆ (ಮಾತು ಹಾಗೂ ಬರವಣಿಗೆ)ಯಲ್ಲಿ ಪ್ರಾವಿಣ್ಯತೆ ಹೊಂದಿರಬೇಕು. ಟೆಕ್ನಾಲಜಿ ಹಾಗೂ ಸಾಫ್ಟ್ವೇರ್ ಅಪ್ಲಿಕೇಷನ್ನಲ್ಲಿ ಕನಿಷ್ಠ 2 ವರ್ಷಗಳ ಸೇವಾ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ವಯೋಮಿತಿ 21ರಿಂದ 35 ವರ್ಷದೊಳಗಿನವರಾಗಿರಬೇಕು. ಮಾಸಿಕ 20,000 ರೂ. ಗೌರವಧನ ನೀಡಲಾಗುತ್ತದೆ.
ಆಸಕ್ತರು ಡಿ.15ರೊಳಗೆ ಸೂಕ್ತ ದಾಖಲೆಗಳೊಂದಿಗೆ ನಗರದ ಉರ್ವ ಮಾರ್ಕೆಟ್ ಕಟ್ಟಡದ 3ನೇ ಮಹಡಿಯಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story





