ಮಂಗಳೂರು | ಅಲ್ಪಸಂಖ್ಯಾತರ ಬಿಎಡ್ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಮಂಗಳೂರು, ಡಿ.12: ಪ್ರಸಕ್ತ (2025-26ನೇ) ಸಾಲಿನಲ್ಲಿ National Council for Teacher Education ನಿಂದ ಮಾನ್ಯತೆ ಪಡೆದ ಸರಕಾರಿ/ಅರೆ ಸರಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳಿಂದ 25,000 ರೂ. ವಿಶೇಷ ಪ್ರೋತ್ಸಾಹಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಲ್ಪಸಂಖ್ಯಾತರ ಸಮುದಾಯದ ಬಿಎಡ್ ಕಲಿಯುವ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ಸೇವಾಸಿಂಧು ಪೋರ್ಟಲ್ (https://sevasindhuservices.karnataka.gov.in) ಮೂಲಕ ಡಿ.31ರ ಸಂಜೆ 5:30ರೊಳಗೆ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಮೂಲಕ ಪ್ರೋತ್ಸಾಹಧನವನ್ನು ಜಮೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮಂಗಳೂರು(0824-2433078), ಬಂಟ್ವಾಳ(0825-5232470), ಬೆಳ್ತಂಗಡಿ (0826-295335), ಪುತ್ತೂರು (08251-237078), ಸುಳ್ಯ(0825-7230666) ಅಥವಾ ಇಲಾಖೆಯ ವೆಬ್ಸೈಟ್ https://dom.karnataka.gov.in ಅಥವಾ ಸಹಾಯವಾಣಿ: 8277799990ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





