Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಅಂತರ್ ರಾಜ್ಯ ವಾಹನ,...

ಮಂಗಳೂರು | ಅಂತರ್ ರಾಜ್ಯ ವಾಹನ, ಸರಗಳ್ಳತನ ಆರೋಪಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ5 Dec 2025 6:24 PM IST
share
ಮಂಗಳೂರು | ಅಂತರ್ ರಾಜ್ಯ ವಾಹನ, ಸರಗಳ್ಳತನ ಆರೋಪಿಯ ಬಂಧನ
ನಾಲ್ಕು ದ್ವಿಚಕ್ರ ವಾಹನ, ಎರಡು ಚಿನ್ನದ ಸರ ವಶ

ಮಂಗಳೂರು, ಡಿ.5 : ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನದ ಆರೋಪಿಯನ್ನು ಗುರುವಾರ ಬಂಧಿಸಿರುವ ಕದ್ರಿ ಪೊಲೀಸರು ನಾಲ್ಕು ದ್ವಿಚಕ್ರ ವಾಹನ ಮತ್ತು ಎರಡು ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.

ಕೇರಳದ ತಿರುವನಂತಪುರಂನ ಆದಿತ್ ಗೋಪಾನ್ ಯಾನೆ ಮುತ್ತು ಕೃಷ್ಣ (32)ಬಂಧಿತ ಆರೋಪಿಯಾಗಿದ್ದಾನೆ.

ನ.21ರಂದು ನಗರದ ಕದ್ರಿ ಬಟ್ಟಗುಡ್ಡೆ ಬಳಿ 83 ವರ್ಷ ಪ್ರಾಯದ ವಯೋವೃದ್ಧೆಯೊಬ್ಬರು ತನ್ನ ಮನೆಯ ಬಳಿ ಓಣಿಯಲ್ಲಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಚಿನ್ನದ ಸರವನ್ನು ಕಸಿದುಕೊಂಡು ಹೋಗಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಆರೋಪಿಯ ಪತ್ತೆಗಾಗಿ ಕದ್ರಿ ಠಾಣೆಯ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಲಾಗಿತ್ತು. ಗುರುವಾರ ನಗರದ ಕದ್ರಿ ಜೋಗಿ ಮಠದ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ದ್ವಿಚಕ್ರ ವಾಹನ ಸವಾರನೊಬ್ಬ ಸಂಶಯಾಸ್ಪದವಾಗಿ ವರ್ತಿಸತೊಡಗಿದ. ವಿಚಾರಿಸಿದಾಗ ಈ ವಾಹನವು ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿರುವುದಾಗಿ ತಿಳಿದು ಬಂತು. ಅದರಂತೆ ಅರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆರೋಪಿಯು ವಯೋವೃದ್ದರು, ಒಂಟಿ ಮಹಿಳೆಯರನ್ನು ಗುರುತಿಸಿ ಸರಗಳ್ಳತನ ಮಾಡಿರುವುದನ್ನು ಒಪ್ಪಿಕೊಂಡ.

ಆರೋಪಿಯನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಮುಂದಿನ ತನಿಖೆಗಾಗಿ ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ.

ನ.21ರಂದು ಕದ್ರಿ ಬಟ್ಟಗುಡ್ಡೆ ಬಳಿ ವಯೋವೃದ್ಧೆಯ 1.5 ಪವನ್ ಚಿನ್ನದ ಸರವನ್ನು ಸುಲಿಗೆ ಮಾಡಿದ್ದ. ಸೆ.29ರಂದು ಮುಲ್ಕಿ ಠಾಣಾ ವ್ಯಾಪ್ತಿಯ ಕೋಟೆಕೇರಿ ಬಳಿ ಒಂಟಿ ಮಹಿಳೆಗೆ ಚೂರಿ ತೋರಿಸಿ ಬೆದರಿಸಿ 2 ಪವನ್ ಚಿನ್ನದ ಸರವನ್ನು ಸುಲಿಗೆ ಮಾಡಿದ್ದ. ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ದ್ವಿ ಚಕ್ರ ವಾಹನ ಕಳವು ಮಾಡಿದ್ದ. ಕುಂದಾಪುರ ಠಾಣಾ ವ್ಯಾಪ್ತಿಯಲ್ಲಿ ದ್ವಿ ಚಕ್ರ ವಾಹನ ಕಳವು ಮಾಡಿದ್ದ. ಸುರತ್ಕಲ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಮತ್ತು ಅಗರಮೇಲು ಎಂಬಲ್ಲಿ ಎರಡು ದ್ವಿಚಕ್ರ ವಾಹನ ಕಳವು ಮಾಡಿದ್ದ. ಹೀಗೆ ಆರೋಪಿಯಿಂದ 4 ದ್ವಿಚಕ್ರ ವಾಹನ ಮತ್ತು ಚಿನ್ನಾಭರಣ ಸಮೇತ ಸಹಿತ 5 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಯ ಮೇಲೆ ಈಗಾಗಲೇ ತಮಿಳುನಾಡಿನಲ್ಲಿ ಮನೆಗಳಿಗೆ ಹೊಂಚು ಹಾಕಿ 4 ಚಿನ್ನಾಭರಣ ಕಳ್ಳತನ ಪ್ರಕರಣ ದಾಖಲಾಗಿದ್ದು, ನಾಗರಕೋಯಿಲ್ ಜೈಲಿನಲ್ಲಿ ಸೆರೆವಾಸವನ್ನು ಅನುಭವಿಸಿ ಬಿಡುಗಡೆಗೊಂಡಿದ್ದ. ಈತನು ಅಂತರ್‌ರಾಜ್ಯ ಕಳವು ಅರೋಪಿಯಾಗಿದ್ದು, ಜೈಲಿನಿಂದ ಬಿಡುಗಡೆಯಾದ ನಂತರ ರೈಲಿನಲ್ಲಿ ಭಾರತದ ಎಲ್ಲಾ ಕಡೆ ಸುತ್ತಾಡಿಕೊಂಡು ರೈಲ್ವೆ ನಿಲ್ದಾಣದ ಬಳಿ ಆಸು ಪಾಸಿನಲ್ಲಿ ಇರುವ ದ್ವಿಚಕ್ರ ವಾಹನ ಕಳ್ಳತನ ಮಾಡಿ ಸುಲಿಗೆ ಮಾಡುತ್ತಿದ್ದ. ನಂತರ ರೈಲಿನಲ್ಲಿ ವಿವಿಧ ಕಡೆ ಪ್ರಯಾಣ ಮಾಡಿ ತಲೆಮರೆಸಿಕೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಠಾಣೆಗಳಲ್ಲಿ 2025ನೇ ಸಾಲಿನಲ್ಲಿ ಈವರೆಗೆ 72 ದ್ವಿಚಕ್ರ ವಾಹನಗಳು ಕಳವಾಗಿದ್ದು, ಆ ಪೈಕಿ 57 ದ್ವಿಚಕ್ರ ವಾಹನಗಳನ್ನು ಪತ್ತೆ ಮಾಡಲಾಗಿದೆ. 15 ದ್ವಿಚಕ್ರ ವಾಹನಗಳು ಮಾತ್ರ ಪತ್ತೆಗೆ ಬಾಕಿ ಇದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X