ಮಂಗಳೂರು | ಮಹಿಳೆಗೆ ಲೈಂಗಿಕ ಕಿರುಕುಳಕ್ಕೆ ಯತ್ನ : ಆರೋಪಿ ಸೆರೆ

ಮಂಗಳೂರು, ನ.16: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕಡಬ ನಿವಾಸಿ ಉಮೇಶ್ ಗೌಡ ಬಂಧಿತ ಆರೋಪಿ. ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಆರೋಪಿಯು ಅಲ್ಲಿಗೆ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ
ಈ ವೇಳೆ ಸಂತ್ರಸ್ತೆ ಸಹಾಯಕ್ಕಾಗಿ ಬೊಬ್ಬೆ ಹೊಡೆದಿದ್ದು, ಮನೆಯೊಳಗಿದ್ದ ಆಕೆಯ ಪತಿ, ಮಕ್ಕಳು ಬಂದು ಆರೋಪಿಯನ್ನು ಹಿಡಿಯಲು ಯತ್ನಿಸಿದಾಗ, ಆರೋಪಿಯು ಹಲ್ಲೆ ನಡೆಸಿ, ಮಹಿಳೆಗೆ ಜಾತಿ ನಿಂದನೆ ಮಾಡಿರುವುದಾಗಿ ದೂರಿನಲ್ಲಿ ತಿಳಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
Next Story





