Mangaluru | ಅಕ್ರಮವಾಗಿ ದನದ ಮಾಂಸ ಸಾಗಾಟ ಪ್ರಕರಣ: ಆರೋಪಿಗೆ ಜಾಮೀನು ಮಂಜೂರು

ಸಾಂದರ್ಭಿಕ ಚಿತ್ರ
ಮಂಗಳೂರು: ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡಿದ ಆರೋಪದಲ್ಲಿ ಬಂಧಿತನಾಗಿದ್ದ ಆರೋಪಿಗೆ ಮಂಗಳೂರಿನ 6ನೇ ಜೆಎಂಎಫ್ಸಿ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಮೂಲರಪಟ್ನ ನಿವಾಸಿ ಅಬ್ದುಲ್ ಸತ್ತಾರ್ ಬೈಕ್ನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿರುವ ಕುರಿತು ಬಜ್ಪೆಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು.
ಬಳಿಕ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಮಂಗಳೂರಿನ 6ನೇ ಜೆಎಂಎಫ್ಸಿ ನ್ಯಾಯಾಲಯವು ಆರೋಪಿಗೆ ಮಧ್ಯಂತರ ಜಾಮೀನು ನೀಡಿ ಆದೇಶಿಸಿದೆ.
ಆರೋಪಿಯ ಪರವಾಗಿ ಮಂಗಳೂರಿನ ಯುವ ನ್ಯಾಯವಾದಿ ಅನ್ಸಾರ್ ಮೂಲರಪಟ್ಣ, ಅಬ್ದುಲ್ ಶಾಲಿಕ್ ಹಾಗೂ ಅನಸ್ ದಿಲ್ದಾರ್ ವಾದ ಮಂಡಿಸಿದ್ದರು.
ಅಬ್ದುಲ್ ಸತ್ತಾರ್ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಮಳಲಿ- ನಾರ್ಲಪದವು ಎಂಬಲ್ಲಿ ಸಂಘಪರಿವಾರದ ಕಾರ್ಯಕರ್ತರು ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.
ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಪರಿಶೀಲನೆಯ ವೇಳೆ ದ್ವಿಚಕ್ರ ವಾಹನದಲ್ಲಿ ದನದ ಮಾಂಸ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಪ್ರಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.







