Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಡಿ.20 ರಂದು ಡಾ.ಕೆ.ಚಿನ್ನಪ್ಪ...

ಮಂಗಳೂರು | ಡಿ.20 ರಂದು ಡಾ.ಕೆ.ಚಿನ್ನಪ್ಪ ಗೌಡರ ʼಭೂತಾರಾಧನೆ‌- ಮಾಯದ ನಡೆ ಜೋಗದ ನುಡಿʼ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ15 Dec 2025 5:26 PM IST
share
ಮಂಗಳೂರು | ಡಿ.20 ರಂದು ಡಾ.ಕೆ.ಚಿನ್ನಪ್ಪ ಗೌಡರ ʼಭೂತಾರಾಧನೆ‌- ಮಾಯದ ನಡೆ ಜೋಗದ ನುಡಿʼ ಲೋಕಾರ್ಪಣೆ

ಮಂಗಳೂರು: ಕ್ರಿಯೆಟಿವ್ ಪುಸ್ತಕ ಮನೆ ಕಾರ್ಕಳ ಮತ್ತು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಕ್ರಿಯೆಟಿವ್ ಪುಸ್ತಕ ಮನೆ ಪ್ರಕಾಶನದ ವಿಶೇಷ ಪ್ರಕಟನೆ, ಜಾನಪದ ವಿದ್ವಾಂಸರಾದ ಡಾ.ಕೆ.ಚಿನ್ನಪ್ಪ ಗೌಡ ಅವರ ಸಂಶೋಧನಾ ಕೃತಿ "ಭೂತಾರಾಧನೆ‌- ಮಾಯದ ನಡೆ ಜೋಗದ ನುಡಿ" ಲೋಕಾರ್ಪಣೆ ಕಾರ್ಯಕ್ರಮವು ಮಂಗಳೂರು ಸಂತ ಅಲೋಶಿಯಸ್ ಪರಿಗಣಿತ ವಿವಿಯ ಎಲ್ ಎಫ್ ರಸ್ಕಿನ್ಹ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

ವಿಶ್ರಾಂತ ಕುಲಪತಿಗಳು, ಜಾನಪದ ವಿದ್ವಾಂಸರಾದ ಪ್ರೊ.ಬಿ.ಎ.ವಿವೇಕ್ ರೈ ಅವರು ಕೃತಿ ಲೋಕಾರ್ಪಣೆಗೊಳಿಸಲಿದ್ದು, ಸಾಹಿತಿ ಡಾ.ರಾಜಶೇಖರ್ ಹಳೆಮನೆ ಕೃತಿಯ ಕುರಿತು ಅವಲೋಕನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಲೋಶಿಯಸ್ ಪರಿಗಣಿತ ವಿವಿಯ ಕುಲಪತಿ ಡಾ.ಪ್ರವೀಣ್ ಮಾರ್ಟಿಸ್ ಎಸ್.ಜೆ., ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ‌ ಡಾ.ನಾಗಪ್ಪ ಗೌಡ, ಲೇಖಕರು, ಜಾನಪದ ವಿದ್ವಾಂಸರಾದ ಡಾ.ಕೆ.ಚಿನ್ನಪ್ಪ ಗೌಡ ಅವರು ಭಾಗವಹಿಸಲಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಕಾರ್ಕಳ ಕ್ರಿಯೆಟಿವ್ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕರಾದ ಅಶ್ವಥ್ ಎಸ್ ಎಲ್ ಅವರು ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ದೈವನರ್ತಕರಾದ ಶೇಖರ ಪರವ ಅವರಿಗೆ ಗೌರವ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.‌

ಡಾ.ಕೆ.ಚಿನ್ನಪ್ಪ ಗೌಡರ ಸಂಶೋಧನಾ ಕೃತಿ :

ವಿಶ್ರಾಂತ ಕುಲಪತಿಗಳು, ಜಾನಪದ ವಿದ್ವಾಂಸರಾದ ಡಾ.ಕೆ.ಚಿನ್ನಪ್ಪ ಗೌಡ ಅವರ " ಭೂತಾರಾಧನೆ - ಜಾನಪದೀಯ ಅಧ್ಯಯನ " ಗ್ರಂಥವು ಮೂವತ್ತೈದು ವರ್ಷಗಳ ಹಿಂದೆ ಪ್ರಕಟವಾಗಿದ್ದು, ಈ ಗ್ರಂಥದ ವಿಸ್ತೃತ ಆವೃತ್ತಿಯೇ " ಭೂತಾರಾಧನೆ - ಮಾಯದ ನಡೆ ಜೋಗದ ನುಡಿ" ಸಂಪುಟ. ನೂತನ ಆವೃತ್ತಿಯಲ್ಲಿ ಹನ್ನೆರಡು ಅಧ್ಯಾಯಗಳಿವೆ. ಭೂತಾರಾಧನೆಯ ಪರಿವರ್ತನೆಯ ನೆಲೆಗಳು, ಸಾಮಾಜಿಕ ಧ್ವನಿಗಳು, ಸಾಂಸ್ಕೃತಿಕ ಅನನ್ಯತೆ, ಭೂತಾರಾಧನೆಯ ಅಧ್ಯಯನ ವಿಸ್ತಾರಗೊಂಡ ಸೂಕ್ಷ್ಮತೆಯ ಆಯಾಮಗಳು, ಪಾಡ್ದನ ಪಠ್ಯಗಳು ಆರಾಧನೆಯ ರಂಗಪಠ್ಯಗಳಾಗುವ ಪ್ರಕ್ರಿಯೆ ಇವುಗಳಿಗೆ ಸಂಬಂಧಿಸಿದ ಹೊಸ ಅಧ್ಯಾಯಗಳು ಈ ವಿಸ್ತೃತ ಆವೃತ್ತಿಯಲ್ಲಿವೆ. ಕಪ್ಪು ಬಿಳುಪು ಮತ್ತು ವರ್ಣಚಿತ್ರಗಳು, ರೇಖಾಚಿತ್ರಗಳು, ತಖ್ತೆಗಳು, ನಕ್ಷೆಗಳು ಹಾಗೂ ಐದು ದಶಕಗಳ ಹಿಂದಿನ ಭೂತಾರಾಧನೆಯ ಅಧಿಕೃತ ಮಾಹಿತಿಗಳು ಈ ಆವೃತ್ತಿಯ ಸಾಂಸ್ಕೃತಿಕ ಮಹತ್ವವನ್ನು ಹೆಚ್ಚಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X