Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ವಿದ್ಯಾರ್ಥಿನಿಯ ಕೊಲೆ ಯತ್ನ...

ಮಂಗಳೂರು: ವಿದ್ಯಾರ್ಥಿನಿಯ ಕೊಲೆ ಯತ್ನ ಪ್ರಕರಣ; ಆರೋಪಿಗೆ ಜೈಲು ಶಿಕ್ಷೆ, ದಂಡ

ವಾರ್ತಾಭಾರತಿವಾರ್ತಾಭಾರತಿ12 Jan 2024 8:21 PM IST
share
ಮಂಗಳೂರು: ವಿದ್ಯಾರ್ಥಿನಿಯ ಕೊಲೆ ಯತ್ನ ಪ್ರಕರಣ; ಆರೋಪಿಗೆ ಜೈಲು ಶಿಕ್ಷೆ, ದಂಡ

ಮಂಗಳೂರು, ಜ.12: ಕಾರ್ಕಳದ ನಿಟ್ಟೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದ ಆರೋಪಿ ಸುಶಾಂತ್ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯವು ಶುಕ್ರವಾರ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಕಲಂ 341ರಡಿ 1 ತಿಂಗಳ ಸಾದಾ ಸಜೆ, ಕಲಂ 326ರಡಿ 7 ವರ್ಷಗಳ ಕಠಿಣ ಸಜೆ ಹಾಗೂ 1 ಲಕ್ಷ ರೂ. ದಂಡ, ದಂಡ ಪಾವತಿಸಲು ವಿಫಲವಾದಲ್ಲಿ 1 ವರ್ಷಗಳ ಕಠಿಣ ಸಜೆ, ಕಲಂ 307ರಡಿ 10 ವರ್ಷಗಳ ಕಠಿಣ ಸಜೆ ಹಾಗೂ 1 ಲಕ್ಷ ರೂ. ದಂಡ, ದಂಡ ಪಾವತಿಸಲು ವಿಫಲವಾದಲ್ಲಿ 1 ವರ್ಷಗಳ ಕಠಿಣ ಸಜೆ, ಕಲಂ 354ರಡಿ 1 ವರ್ಷಗಳ ಕಠಿಣ ಸಜೆ ಹಾಗೂ 10,000 ರೂ. ದಂಡ, ದಂಡ ಪಾವತಿಸಲು ವಿಫಲವಾದಲ್ಲಿ 2 ತಿಂಗಳ ಕಠಿಣ ಸಜೆ, ಕಲಂ 309ರಡಿ 1,000 ರೂ. ದಂಡ ಪಾವತಿಸಲು ನ್ಯಾಯಾಲಯವು ಆರೋಪಿಗೆ ಆದೇಶಿಸಿದೆ. ಮೇಲಿನ ಎಲ್ಲಾ ಶಿಕ್ಷೆಗಳನ್ನು ಒಂದಾದ ನಂತರ ಒಂದರಂತೆ (Consecutively) ಅಂದರೆ ಒಟ್ಟು 18 ವರ್ಷ 1 ತಿಂಗಳು ಅನುಭವಿಸುವಂತೆ ತೀರ್ಪು ನೀಡಿವೆ.

ನೃತ್ಯ ತರಬೇತಿ ನೀಡುತ್ತಿದ್ದ ಆರೋಪಿ ಸುಶಾಂತ್ ವಿದ್ಯಾರ್ಥಿನಿಗೆ ಪದೇ ಪದೇ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ವಿದ್ಯಾರ್ಥಿನಿಯು ಕಾರ್ಕಳ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿದ್ದ ಪೊಲೀಸರು ಆರೋಪಿ‌ ಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

ಇದರಿಂದ ತೀವ್ರ ಹತಾಶೆಗೊಂಡ ಆರೋಪಿಯು 2019ರ ಜೂನ್ 28ರಂದು ಸಂಜೆ 4:30ಕ್ಕೆ ವಿದ್ಯಾರ್ಥಿನಿಯನ್ನು ಕೊಲೆಗೈಯ್ಯುವ ಉದ್ದೇಶದಿಂದ ಸ್ಕೂಟರಿನಲ್ಲಿ ಹಿಂಬಾಲಿಸಿಕೊಂಡು ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಹಿಂಬದಿಯ ಶಾಂತಿಧಾಮದ ಬಳಿ ತಡೆದು ನಿಲ್ಲಿಸಿ ಆಕೆಯ ಮೈ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿ ಚೂರಿಯಿಂದ ತಿವಿದು ಗಂಭೀರ ಸ್ವರೂಪದ ಗಾಯಗೊಳಿಸಿದ್ದ. ಅಲ್ಲದೆ ತಾನು ಕೂಡ ಚೂರಿಯಿಂದ ತನ್ನ ಕುತ್ತಿಗೆಗೆ ತಿವಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಶಕ್ತಿನಗರ ನಿವಾಸಿಯಾಗಿದ್ದ ಆರೋಪಿ ಸುಶಾಂತ್ (28)ನನ್ನು ಜು.4ರಂದು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಎಸ್ಸೈ ಗುರಪ್ಪಕಾಂತಿ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಆರೋಪಿಗೆ ಶಿಕ್ಷೆ ವಿಧಿಸಿದೆ.

ದಂಡದ ಮೊತ್ತ 2 ಲಕ್ಷ ರೂ.ವನ್ನು ಸಂತ್ರಸ್ಥೆಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಧೀಶೆ ಪ್ರೀತಿ ಕೆಪಿ ಆದೇಶಿಸಿದ್ದಾರೆ. ಸಂತ್ರಸ್ಥೆಯ ಪರವಾಗಿ ಸರಕಾರಿ ಅಭಿಯೋಜಕಿ ಜ್ಯೋತಿ ನಾಯಕ್ ವಾದ ಮಂಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X