Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಕಾಂಗ್ರೆಸ್ ಸತ್ಯಶೋಧನಾ...

ಮಂಗಳೂರು: ಕಾಂಗ್ರೆಸ್ ಸತ್ಯಶೋಧನಾ ಸಮಿತಿಯಿಂದ ಸಿಎಂಗೆ ವರದಿ ಸಲ್ಲಿಕೆ

ಮನಪಾ: ಕಲುಷಿತ ನೀರು ಪೂರೈಕೆ ಆರೋಪ

ವಾರ್ತಾಭಾರತಿವಾರ್ತಾಭಾರತಿ17 Jan 2025 7:37 PM IST
share
ಮಂಗಳೂರು: ಕಾಂಗ್ರೆಸ್ ಸತ್ಯಶೋಧನಾ ಸಮಿತಿಯಿಂದ ಸಿಎಂಗೆ ವರದಿ ಸಲ್ಲಿಕೆ

ಮಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಶುದ್ಧೀಕರಿಸದ ನೀರನ್ನು ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ ಎಂದು ಆರೋಪಿಸಿ ಸತ್ಯಶೋಧನಾ ಸಮಿತಿ ರಚಿಸಿರುವ ಕಾಂಗ್ರೆಸ್ ಸದಸ್ಯರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಅವಲೋಕನದ ವರದಿಯನ್ನು ಒಪ್ಪಿಸಿದ್ದಾರೆ.

ಶುಕ್ರವಾರ ಮಂಗಳೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ ವೇಳೆ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ನೇತೃತ್ವದಲ್ಲಿ ಪಾಲಿಕೆಯ ಕಾಂಗ್ರೆಸ್ ಸದಸ್ಯರ ಸತ್ಯಶೋಧನಾ ಸಮಿತಿಯ ವರದಿಯನ್ನು ಸಲ್ಲಿಸಲಾಯಿತು.

ಸತ್ಯಶೋಧನಾ ಸಮಿತಿಯು ಪಚ್ಚನಾಡಿ ಎಸ್‌ಟಿಪಿ, ಬೆಂದೂರ್‌ವೆಲ್‌ನ ನೀರು ಸರಬರಾಜು ಘಟಕ, ಮುಚ್ಚೂರು ವೆಟ್‌ವೆಲ್‌ಗೆ ಭೇಟಿ ನೀಡಿರುವ ಸಂದರ್ಭ ಅಲ್ಲಿ ಕಂಡು ಬಂದಿರುವ ನ್ಯೂನ್ಯತೆಗಳು ಹಾಗೂ ಅದಕ್ಕೆ ಅಗತ್ಯ ಪರಿಹಾರೋಪಾಯಗಳ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ದೇಶದಲ್ಲಿ ಕಲುಷಿತಗೊಂಡಿರುವ ನದಿಗಳಲ್ಲಿ ಜಿಲ್ಲೆಯ ಜೀವನದಿಯಾದ ನೇತ್ರಾವತಿಯೂ ಸೇರಿರುವ ಬಗ್ಗೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ)ಯು ತಿಳಿಸಿರುವ ಬಗ್ಗೆ ಸಂಸತ್ ಅಧಿವೇಶನದಲ್ಲಿ ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಶುದ್ಧೀಕರಿಸದೆ ಕುಡಿಯುವ ನೀರು ನೀಡಲಾಗುತ್ತಿರುವ ಬಗ್ಗೆ ಈಗಾಗಲೇ ಮನಪಾ ಸಾಮಾನ್ಯ ಸಭೆಯಲ್ಲಿ ಪಾಲಿಕೆಯ ವಿಪಕ್ಷ ನಾಯಕರ ಸಹಿತ ಸದಸ್ಯರು ಆಕ್ಷೇಪಿಸಿ, ಸತ್ಯಶೋಧನಾ ಸಮಿತಿ ರಚನೆಗೆ ಆಗ್ರಹಿಸಿದ್ದರು. ಆದರೆ ಪಾಲಿಕೆ ಆಡಳಿತ ಈ ಬಗ್ಗೆ ನಿರಾಕರಣೆ ತೋರಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯರ ಸಮಿತಿ ರಚಿಸಿ ಪರಿಶೀಲನೆ ನಡೆಸಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಜಲಸಿರಿ ಯೋಜನೆ ಕಾಮಗಾರಿ ಶೀಘ್ರವಾಗಿ ಮುಗಿಸಬೇಕು. ಪಾಲಿಕೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಕ್ರಮ ವಹಿಸಬೇಕು. ಜನಸಂಖ್ಯೆಗೆ ಅನುಗುಣವಾಗಿ ಅರೇಕಳದಲ್ಲಿ ಮತ್ತೊಂದು ನೀರಿನ ರೇಚಕ ನಿರ್ಮಾಣಕ್ಕೆ ಕ್ರಮ ವಹಿಸಬೇಕು. ಮಾಲಿನ್ಯ ನಿಯಂತ್ರಣ ಮಂಡಳಿ ಸಮಂಜಸ ಮಾಹಿತಿಯನ್ನು ಒದಗಿಸುವ ಜತೆಗೆ ಎಲ್ಲಾ ಎಸ್‌ಟಿಪಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ, ಅದನ್ನು ಪಾಲಿಕೆಯ ಕಂಟ್ರೋಲ್‌ಗೆ ಒಳಪಡಿಸುವ ಕ್ರಮಕ್ಕೆ ಸಮಿತಿಯು ಆಗ್ರಹಿಸಿದೆ.

ಬೆಂದೂರ್‌ವೆಲ್‌ನಲ್ಲಿ ನೀರು ಸರಬರಾಜು ಘಟಕದಲ್ಲಿ ತುಂಬೆಯ ಒಂದು ನೀರಿನ ಪೈಪ್‌ಲೈನ್ ನೇರವಾಗಿ ಪಣಂಬೂರು ಕಡೆಗೆ ಪ್ರಾಥಮಿಕ ಶುದ್ಧೀಕರಿಸಿದ ನೀರು ಸರಬರಾಜು ಮಾಡುತ್ತಿರುವುದು ಕಂಡು ಬಂದಿದೆ. ಜಪ್ಪಿನಮೊಗರು ವೆಟ್‌ವೆಲ್‌ಗೆ ಭೇಟಿ ನೀಡಿದ ವೇಳೆ ಸ್ಥಳೀಯ ಪಂಪ್‌ಹೌಸ್ ಸ್ಥಗಿತಗೊಂಡು ಕೊಳಚೆ ನೀರು ರಾಜಕಾಲುವೆ, ತೋಡುಗಳಲ್ಲಿ ಹರಿಯುತ್ತಿರುವುದರ ಪರಿಣಾಮ ಸಮೀಪದ ಬಾವಿಗಳು ಕಲುಷಿತಗೊಂಡಿರುವುದು ಕಂಡುಬಂದಿದೆ. ಸುರತ್ಕಲ್ ಮಧ್ಯ ಎಸ್‌ಟಿಪಿಯಲ್ಲಿ ಸಿಬ್ಬಂದಿಯೇ ಇಲ್ಲವಾಗಿದ್ದು, ಕಳೆದೊಂದು ತಿಂಗಳನಿಂದ ಜನರೇಟರ್ ವ್ಯವಸ್ಥೆಯಿಲ್ಲದೆ ಘಟಕ ನಿಷ್ಕ್ರಿಯವಾಗಿದೆ. ವಾರ್ಷಿಕ 1.5 ಕೋಟಿ ರೂ. ನಿರ್ವಹಣಾ ವೆಚ್ಚವಾಗಿ ನೀಡಲಾಗುತ್ತಿದ್ದರೂ ಎಸ್‌ಟಿಪಿಗಳನ್ನು ನಿರ್ವಹಣೆ ಮಾಡಲಾಗುತ್ತಿಲ್ಲ ಎಂದು ವರದಿಯಲ್ಲಿ ದೂರಲಾಗಿದೆ.

ಕಾವೂರು ಮಾದರಿಯಲ್ಲಿ ಪಚ್ಚನಾಡಿ ಮತ್ತು ಬಜಾಲ್‌ನ ಎಸ್‌ಟಿಪಿಗಳನ್ನು ಎಂಆರ್‌ಪಿಎಲ್‌ಗೆ ಹಸ್ತಾಂತರಿಸುವ ಹಾಗೂ ಅವರ ಮೂಲಕ ಅಭಿವೃದ್ಧಿ ಮಾಡುವ ಕ್ರಮ ಆಗಬೇಕು ಎಂದೂ ವರದಿಯಲ್ಲಿ ಸಲಹೆ ನೀಡಲಾಗಿದೆ.

ಮುಖ್ಯಮಂತ್ರಿಗೆ ವರದಿ ಸಲ್ಲಿಕೆ ಸಂದರ್ಭ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ಪಾಲಿಕೆಯ ವಿಪಕ್ಷ ನಾಯಕ ಅನಿಲ್ ಕುಮಾರ್, ಸದಸ್ಯರಾದ ಶಶಿಧರ ಹೆಗ್ಡೆ, ಪ್ರವೀಣ್ ಚಂದ್ರ ಆಳ್ವ, ವಿನಯ ರಾಜ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X