ಮಂಗಳೂರು | ಕೇಂದ್ರ ಸರಕಾರದ ವಿರುದ್ಧ ಡಿ.22ರಂದು ಕಾಂಗ್ರೆಸ್ ಪಾದಯಾತ್ರೆ: ಧರಣಿ

ಸಾಂದರ್ಭಿಕ ಚಿತ್ರ | Photo Credit : PTI
ಮಂಗಳೂರು : ಡಿ.22ರ, ಸೋಮವಾರದಂದು ಬೆಳಿಗ್ಗೆ 10.45 ಗಂಟೆಗೆ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಿಂದ ಪಾದಯಾತ್ರೆ ಆರಂಭವಾಗಿದ್ದು, ಜಿಲ್ಲಾ ಬಿಜೆಪಿ ಕಚೇರಿಗೆ ಘೇರಾವ್ ಹಾಕಿ ಧರಣಿ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ತಿಳಿಸಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರು ಹಾಗೂ ಸ್ವರೂಪ ಬದಲಾವಣೆಗೆ ವಿರೋಧ ವ್ಯಕ್ತಪಡಿಸಿ, ಜೊತೆಗೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ಸ್ವಾಯತ್ತ ಸಂಸ್ಥೆಯಾದ ಜಾರಿ ನಿರ್ದೇಶನಾಲಯವನ್ನು (ಈ.ಡಿ.) ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಡಿ.22ರಂದು ಪ್ರತಿಭಟನೆ ನಡೆಸಲಾಗುವುದು.
ಡಿ.ರ (ಸೋಮವಾರ) ಬೆಳಿಗ್ಗೆ 10.45 ಗಂಟೆಗೆ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಿಂದ ಪಾದಯಾತ್ರೆ ಆರಂಭವಾಗಿದ್ದು, ಜಿಲ್ಲಾ ಬಿಜೆಪಿ ಕಚೇರಿಗೆ ಘೇರಾವ್ ಹಾಕಿ ಧರಣಿ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.





