ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತ ದೇಹ ಪತ್ತೆ

ಮಂಗಳೂರು: ಬಂಗ್ರಕೂಳೂರಿನ ಫಲ್ಗುಣಿ ನದಿ ತಟದಲ್ಲಿ ಸುಮಾರು 40-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತ ದೇಹ ಸೋಮವಾರ ಸಂಜೆ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸುಮಾರು 5.3 ಅಡಿ ಎತ್ತರ, ದುಂಡು ಮುಖ, ಮಧ್ಯಮ ಶರೀರ, ತಿಳಿ ಹಳದಿ ಬಣ್ಣದ ಅರ್ಧ ತೋಳಿನ ಶರ್ಟ್ ಧರಿಸಿದ್ದ ವ್ಯಕ್ತಿಯ ಶವ ಪತ್ತೆಯಾಗಿದ್ದು, ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶವವನ್ನು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈ ಚಹರೆಯ ವ್ಯಕ್ತಿಯ ಮಾಹಿತಿ ಇದ್ದಲ್ಲಿ ಕಾವೂರು ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
Next Story





