ಮಂಗಳೂರು | ಗದಗ ಮೂಲದ ಕಾರ್ಮಿಕನ ಮೃತದೇಹ ಪತ್ತೆ

ಸಾಂದರ್ಭಿಕ ಚಿತ್ರ
ಮಂಗಳೂರು,ಡಿ.22: ನಗರದ ಕಂಕನಾಡಿ-ಪಂಪ್ವೆಲ್ ಹಳೆಯ ರಸ್ತೆಯ ಚರಂಡಿಯಲ್ಲಿ ಗದಗ ಮೂಲದ ಕಾರ್ಮಿಕನ ಮೃತದೇಹ ಸೋಮವಾರ ಪತ್ತೆಯಾಗಿದೆ.
ಮೃತರನ್ನು ಗದಗ ಜಿಲ್ಲೆಯ ಪಡಿಯಪ್ಪ ಎಂದು ಗುರುತಿಸಲಾಗಿದೆ. ಮೃತದೇಹದ ಮೇಲೆ ಗಾಯಗಳು ಕಂಡು ಬಂದಿದ್ದು, ಸೂಕ್ತ ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿರುವ ಇವರು ಶನಿವಾರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟಿದ್ದರು. ಬಳಿಕ ನಾಪತ್ತೆಯಾಗಿದ್ದರು. ಅದರಂತೆ ಮನೆಮಂದಿ, ಕುಟುಂಬದ ಇತರ ಸದಸ್ಯರು ಪಡಿಯಪ್ಪರಿಗಾಗಿ ಹುಡುಕಾಟ ನಡೆಸಿದ್ದರು. ಸೋಮವಾರ ಸಂಜೆಯ ವೇಳೆಗೆ ಚರಂಡಿಯಲ್ಲಿ ಪಡಿಯಪ್ಪರ ಮೃತದೇಹ ಪತ್ತೆಯಾಗಿದೆ.
ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





