ಮಂಗಳೂರು | ಡಿ.18: ಎಂಎಸ್ಎಂಇ ಕಾರ್ಯಾಗಾರ

ಮಂಗಳೂರು,ಡಿ.11ಎಂಎಸ್ಎಂಇ ಇದರ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮತ್ತು ವೇಗಗೊಳಿಸುವ ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ ಬೆಂಗಳೂರು ಹಾಗೂ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಹಯೋಗದಲ್ಲಿ ಕೈಗಾರಿಕೋದ್ಯಮಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ಡಿ.18ರಂದು ಬೆಳಗ್ಗೆ 10ಕ್ಕೆ ಝೆಡ್ಇಡಿ ಮತ್ತು ಎಲ್ಇಎಎನ್ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಯೆಯ್ಯಾಡಿ ಕೈಗಾರಿಕಾ ವಲಯದಲ್ಲಿರುವ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲೆಯ ನೋಂದಾಯಿತ ಎಂಎಸ್ಎಂಇ-ಗಳು ಇದರಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ (ದೂ.ಸಂ: 0824-2214021)ವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





