ಮಂಗಳೂರು ನಗರ ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ: ಪ್ರಕರಣ ದಾಖಲು

ಮಂಗಳೂರು, ನ.26: ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿರುವ ಬಗ್ಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಸುನಿಲ್ ಕುಮಾರ್ ಎನ್. ನ.25ರಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಗಳನ್ನು ಪರಿಶೀಲಿಸುತ್ತಿದ್ದ ಫೇಸ್ ಬುಕ್ ನಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನ ಖಾತೆ ಕಂಡು ಬಂದಿದೆ. ಈ ಖಾತೆಯ ಬಗ್ಗೆ ಸಂಶಯಗೊಂಡು ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ನಲ್ಲಿ ವಿಚಾರಿಸಿದಾಗ ನಕಲಿ ಖಾತೆ ಎಂಬುದಾಗಿ ದೃಢಪಟ್ಟಿದೆ. ಅದರಂತೆ ನಕಲಿ ಖಾತೆ ತೆರೆದು ವಂಚಿಸುವ ಹಾಗೂ ಸುಳ್ಳು ಸಂದೇಶ ಹರಡುವ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
Next Story





