ಮಂಗಳೂರು | ಡಿ.6ರಂದು ಮೀನುಗಾರಿಕೆ ಬಂದರಿನ ಆಧುನೀಕರಣ ಕಾಮಗಾರಿಯ ಶಂಕುಸ್ಥಾಪನೆ

ಸಾಂದರ್ಭಿಕ ಚಿತ್ರ
ಮಂಗಳೂರು,ಡಿ.5 : ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಮಂಗಳೂರು ಮೀನುಗಾರಿಕೆ ಬಂದರಿನ ಆಧುನೀಕರಣ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮವು ಡಿ.6ರಂದು ಪೂ.11ಕ್ಕೆ ನಗರದ ಸೌತ್ ವಾರ್ಫ್ ಮೀನುಗಾರಿಕೆ ಬಂದರಿನಲ್ಲಿ ನಡೆಯಲಿದೆ.
ಸ್ಪೀಕರ್ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





