Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸಮಾಜ ಸೇವಾ ಸಹಕಾರಿ ಸಂಘದಲ್ಲಿ...

ಮಂಗಳೂರು: ಸಮಾಜ ಸೇವಾ ಸಹಕಾರಿ ಸಂಘದಲ್ಲಿ ನಕಲಿ ಚಿನ್ನ ಅಡವಿರಿಸಿ 2.11 ಕೋ.ರೂ. ಸಾಲ ಪಡೆದು ವಂಚನೆ

ಬ್ಯಾಂಕ್ ಆಡಳಿತ ಮಂಡಳಿ, ಚಿನ್ನ ಪರೀಕ್ಷಕ ಸಹಿತ 28 ಮಂದಿಯ ವಿರುದ್ಧ ಪ್ರಕರಣ ದಾಖಲು, ಓರ್ವನ ಬಂಧನ

ವಾರ್ತಾಭಾರತಿವಾರ್ತಾಭಾರತಿ25 Dec 2024 12:32 PM IST
share
ಮಂಗಳೂರು: ಸಮಾಜ ಸೇವಾ ಸಹಕಾರಿ ಸಂಘದಲ್ಲಿ ನಕಲಿ ಚಿನ್ನ ಅಡವಿರಿಸಿ 2.11 ಕೋ.ರೂ. ಸಾಲ ಪಡೆದು ವಂಚನೆ

ಮಂಗಳೂರು: ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘದ ಮಂಗಳೂರಿನ ಪಡೀಲ್ ಶಾಖೆಯಲ್ಲಿ ವ್ಯಕ್ತಿಯೊಬ್ಬರಿಗೆ ಆಭರಣ ಈಡಿನ ಆಧಾರದಲ್ಲಿ 2,11,89,800 ರೂ. ಸಾಲ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಈ ಸಹಕಾರಿ ಸಂಘದ ಅಧ್ಯಕ್ಷ, ನಿರ್ದೇಶಕ, ಶಾಖೆಯ ಪ್ರಭಾರ ವ್ಯವಸ್ಥಾಪಕ ಸಹಿತ 28 ಮಂದಿಯ ವಿರುದ್ಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಆರೋಪಿ, ಸಹಕಾರಿ ಸಂಘದ ಸರಪ್ (ಚಿನ್ನ ಪರೀಕ್ಷಕ) ವಿವೇಕ್ ಆಚಾರ್ಯರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ದೂರುದಾರರಾದ ಸಂಘದ ಮಾಜಿ ನಿರ್ದೇಶಕ ಲೋಕನಾಥ ಡಿ. ತಿಳಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ಬಗ್ಗೆ ಅವರು ಮಾಹಿತಿ ನೀಡಿದರು.

ಪುತ್ತೂರು ಈಶ್ವರಮಂಗಳ ನಿವಾಸಿ, ಪ್ರಕರಣದ ಪ್ರಮುಖ ಆರೋಪಿ ಅಬೂಬಕರ್ ಸಿದ್ದೀಕ್ ಎಂಬಾತ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು 2,22,89,800 ರೂ. ಸಾಲ ಪಡೆದಿದ್ದಾನೆ. ಈ ಚಿನ್ನಾಭರಣವನ್ನು ಪರಿಶೀಲಿಸಿದ ಸಂಘದ ಸರಪ್ ವಿವೇಕ್ ಆಚಾರ್ಯ ಅದು ನೈಜ ಚಿನ್ನವೆಂದು ದೃಢೀಕರಿಸಿದ್ದಾರೆ. ಸಂಘದ ಆಡಳಿತ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಪ್ರಧಾನ ವ್ಯವಸ್ಥಾಪಕರ ನಿರ್ದೇಶನದಂತೆ ಶಾಖೆಯ ಪ್ರಭಾರ ವ್ಯವಸ್ಥಾಪಕ ಪ್ರಶಾಂತ್ ಈ ಭಾರೀ ಮೊತ್ತದ ಸಾಲವನ್ನು ನೀಡಿದ್ದರು ಎಂದು ಆರೋಪಿಸಿದರು.

ಈ ಸಾಲವನ್ನು 2023ರ ನವೆಂಬರ್ 13ರಿಂದ 2024ರ ಫೆಬ್ರವರಿ 3ರ ಅವಧಿಯಲ್ಲಿ ನೀಡಲಾಗಿತ್ತು. ಈ ವರ್ಷದ ಫೆಬ್ರವರಿ ಮೊದಲ ವಾರದಲ್ಲಿ ಈ ವಿಚಾರ ಬೆಳಕಿಗೆ ಬಂದಿದ್ದು, ಸಂಘದ ಹಿರಿಯ ಸದಸ್ಯರು ಮೈಸೂರಿನ ನಿಬಂಧಕರಿಗೆ ಎಪ್ರಿಲ್ 10ರಂದು ದೂರು ಅರ್ಜಿಯನ್ನು ಸಲ್ಲಿಸಿದ್ದರು. ಬಳಿಕ ಜುಲೈ 1ರಂದು ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗೂ ದೂರು ಸಲ್ಲಿಸಲಾಗಿತ್ತು. ಮೈಸೂರು ನಿಬಂಧಕರು, ದ.ಕ. ಉಸ್ತುವಾರಿ ಸಚಿವರು ಹಾಗೂ ದ.ಕ.ಜಿಲ್ಲಾಧಿಕಾರಿಯವರು ಮಂಗಳೂರು ಉಪ ನಿಬಂಧಕರಿಗೆ ನೋಟಿಸ್ ಜಾರಿ ಮಾಡಿ ತನಿಖೆಗೆ ಆದೇಶಿಸಿದ್ದರು. ಆದರೆ ಮಂಗಳೂರು ಉಪ ನಿಬಂಧಕರು ನಮಗೆ ಹೇಳಿಕೆ ದಾಖಲಿಸಲು ಅವಕಾಶ ನೀಡದೆ ಶಾಸನಬದ್ಧ ತನಿಖೆಗೆ ಶಿಫಾರಸು ಮಾಡಿ ತನಿಖೆ ಮುಕ್ತಾಯಗೊಳಿಸಿ ಹಿಂಬರಹ ನೀಡಿದ್ದರು. ಪೊಲೀಸ್ ವರಿಷ್ಠಾಧಿಕಾರಿಯವರು ಆರೋಪಿಗಳ ವಿಚಾರಣೆ ನಡೆಸಿದ ವೇಳೆ ಆರೋಪಿಗಳು ಆರೋಪ ನಿರಾಕರಿಸಿ ಸುಳ್ಳು ಹೇಳಿಕೆ ನೀಡಿದ್ದರು. ಬಳಿಕ ಪ್ರಕರಣ ಕಮಿಷನರೇಟ್ ವ್ಯಾಪ್ತಿಗೆ ಬರುವುದಾಗಿ ಹೇಳಿ ನ್ಯಾಯಾಲಯದಲ್ಲಿ ಸಮಸ್ಯೆ ಬಗೆಹರಿಸುವಂತೆ ತಿಳಿಸಲಾಗಿತ್ತು. ಈ ನಡುವೆ ನಕಲಿ ಚಿನ್ನಾಭರಣದ ಹರಾಜು ಪ್ರಕ್ರಿಯೆ ಗುಪ್ತ ಸ್ಥಳದಲ್ಲಿ ನಡೆಸಲಾಗಿತ್ತು. ಒಟ್ಟು ಸಾಲದಲ್ಲಿ 1.31 ಕೋಟಿ ರೂ. ಬಾಕಿ ಇದ್ದು, ಸಂಘದ ನಿಯಮದ ಪ್ರಕಾರ ಸಾಲಗಾರರೊಬ್ಬರಿಗೆ ಒಂದು ದಿನದಲ್ಲಿ 20 ಲಕ ರೂ. ಮಾತ್ರ ಚಿನ್ನಾಭರಣ ಸಾಲ ನೀಡಬಹುದಾಗಿದ್ದರೂ ನಿಯಮ ಉಲ್ಲಂಘಿಸಲಾಗಿದೆ. ಪ್ರಕರಣದ ಬಗ್ಗೆ ಕಮಿಷನರ್ ರನ್ನು ಭೇಟಿಯಾಗಿ ವಿವರಿಸಿದ ಬಳಿಕ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

ಪ್ರಕರಣಕ್ಕೆ ಸಂಬಂಧಿಸಿ 2ನೇ ಆರೋಪಿ ವಿವೇಕ್ ಆಚಾರ್ಯರ ಬಂಧನವಾಗಿದೆ ಎಂದವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಂಘದ ಹಿರಿಯ ಸದಸ್ಯರಾದ ಸೇಸಪ್ಪ ಟಿ. ಸೋಮಯ್ಯ ಎಚ್., ಸುಂದರ ಬಿ., ರಮೇಶ್ ಬಿ., ಮಾಜಿ ನಿರ್ದೇಶಕ ಹೇಮಂತ ಸಾಲ್ಯಾನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X