Mangaluru | ಗುರುಪುರ ಬಿಲ್ಲವ ಸಂಘದಿಂದ ಉಚಿತ ವೈದ್ಯಕೀಯ ಶಿಬಿರ

ಗುರುಪುರ, ಡಿ.7: ಬಿಲ್ಲವ ಸಮಾಜ ಸೇವಾ ಸಂಘ (ರಿ), ಸ್ಫೂರ್ತಿ ಬಿಲ್ಲವ ಮಹಿಳಾ ಘಟಕ ಗುರುನಗರ, ಸನ್ಮತಿ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರು ಮತ್ತು ಯೆನಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ಸಹಯೋಗದಲ್ಲಿ ಗುರುಪುರದ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಉಚಿತ ವೈದ್ಯಕೀಯ ಮಹಿಳಾ ಯೋಗಕ್ಷೇಮ, ದಂತ ಮತ್ತು ನೇತ್ರ ತಪಾಸಣಾ ಶಿಬಿರ ರವಿವಾರ ನಡೆಯಿತು.
ಡಾ. ಯೋಗೀಶ್ ತಂತ್ರಿ ಶಿಬಿರ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಮಹಾಬಲ ಅಮೀನ್ ಅಧ್ಯಕ್ಷತೆ ವಹಿಸಿದ್ದರು. ಶಿಬಿರದ ಆಯೋಜಕ ಶಮೀರ್ ಮಾಹಿತಿ ನೀಡಿದರು.
ಸನ್ಮತಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಕುಶಲಾ ಐ., ಸ್ಫೂರ್ತಿ ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ ವಿನೋದಾ ಡಿ.ಅಂಚನ್, ಯೇನಪೋಯ ಆಸ್ಪತ್ರೆಯ ಡಾ.ಆರ್ಯನ್, ಡಾ.ಆಲ್ಫಿಯಾ, ಡಾ.ಸಿರಸ್ ಉಪಸ್ಥಿತರಿದ್ದರು.
ಸಂಘದ ಸದಸ್ಯ ಯಶವಂತ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.
Next Story





