Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಬಿಲ್‌ ಮೊತ್ತ ಪಾವತಿಸದೆ...

ಮಂಗಳೂರು: ಬಿಲ್‌ ಮೊತ್ತ ಪಾವತಿಸದೆ ಮೃತದೇಹ ಬಿಟ್ಟುಕೊಡಲೊಪ್ಪದ ಆಸ್ಪತ್ರೆ; ಆರೋಪ

ಡಿವೈಎಫ್‌ಐ ಮಧ್ಯಪ್ರವೇಶದ ಬಳಿಕ ಮೃತದೇಹ ಬಿಟ್ಟುಕೊಟ್ಟ ಆಸ್ಪತ್ರೆ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ1 Oct 2023 4:01 PM IST
share
ಮಂಗಳೂರು: ಬಿಲ್‌ ಮೊತ್ತ ಪಾವತಿಸದೆ ಮೃತದೇಹ ಬಿಟ್ಟುಕೊಡಲೊಪ್ಪದ ಆಸ್ಪತ್ರೆ; ಆರೋಪ

ಮಂಗಳೂರು, ಅ.1: ಬಿಲ್‌ ಮೊತ್ತ ಪಾವತಿಸದ ಪರಿಶಿಷ್ಟ ಜಾತಿಗೆ ಸೇರಿದ ಮಹಾಬಲ ಎಂಬವರ ಮೃತದೇಹವನ್ನು ನಗರದ ಖಾಸಗಿ ಆಸ್ಪತ್ರೆಯೊಂದು ಬಿಟ್ಟುಕೊಡಲು ನಿರಾಕರಿಸಿರುವುದಾಗಿ ಅರೋಪಿಸಿರುವ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯು ಬಳಿಕ ತಮ್ಮ ಮಧ್ಯಪ್ರವೇಶದಿಂದ ಆಸ್ಪತ್ರೆಯವರು ಮೃತದೇಹ ಬಿಟ್ಟುಕೊಟ್ಟಿದ್ದಾರೆ.

ಉಸಿರಾಟದ ಸಮಸ್ಯೆಯ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಹಾಬಲ ಒಳರೋಗಿಯಾಗಿ ಮೂರು ದಿನದ ಹಿಂದೆ ದಾಖಲಾಗಿದ್ದರು. ಆಸ್ಪತ್ರೆ ವೈದ್ಯರ ತಂಡ ಹೃದಯದಲ್ಲಿ ಸಮಸ್ಯೆಯಿದೆ ಎಂದು ಬೈಪಾಸ್ ಸರ್ಜರಿಯನ್ನೂ ನಡೆಸಿತ್ತು. ಆ ಬಳಿಕ ಆರೋಗ್ಯದಲ್ಲಿ ಏರುಪೇರಾಗಿ ಶನಿವಾರ ಸಂಜೆ 6 ಗಂಟೆಗೆ ಮಹಾಬಲ ಕೊನೆಯುಸಿರೆಳೆದಿದ್ದಾರೆ. ಮಹಾಬಲರಿಗೆ ವಿಮೆ ಎಂದು ತಿಳಿದಿಕೊಂಡ ಆಸ್ಪತ್ರೆಯವರು 5.5 ಲಕ್ಷ ರೂ.ಮೊತ್ತ ಪಾವತಿಸಲು ಒತ್ತಡ ಹಾಕಿದ್ದರು. ವಿಮೆ ಮೊತ್ತದಲ್ಲಿ ಕೇವಲ 1.5 ಲಕ್ಷ ರೂ. ಮಾತ್ರ ಇದ್ದ ಕಾರಣ ಬಾಕಿ ಮೊತ್ತವನ್ನು ಕಟ್ಟದೆ ಮೃತದೇಹ ಬಿಟ್ಟುಕೊಡಲು ನಿರಾಕರಿಸಿದ್ದರು ಎಂದು ಡಿವೈಎಫ್‌ಐ ದ.ಕ.ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಮತ್ತು ಕಾರ್ಯದರ್ಶಿ ಸಂತೋಷ್ ಬಜಾಲ್ ಆರೋಪಿಸಿದ್ದಾರೆ.

ಶನಿವಾರ ಸಂಜೆಯಿಂದ ಮೃತದೇಹ ಕೊಡಲು ನಿರಾಕರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ನಿಯೋಗವು ರವಿವಾರ ಬೆಳಗ್ಗೆ ಹೆತ್ತವರೊಂದಿಗೆ ಸೇರಿಕೊಂಡು ಆಸ್ಪತ್ರೆಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚೆ ನಡೆಸಿತು. ಕೆಪಿಎಮ್ಇ ಕಾಯ್ದೆಯ ಪ್ರಕಾರ ಯಾವುದೇ ಕಾರಣಕ್ಕೂ ಮೃತದೇಹವನ್ನು ಅಕ್ರಮವಾಗಿ ಬಂಧನದಲ್ಲಿಡಲು ಅವಕಾಶವಿಲ್ಲ. ಸರಕಾರದ ನಿಯಮವನ್ನು ಉಲ್ಲಂಘಿಸಿದರೆ ಹೋರಾಟ ಮಾಡುವುದಾಗಿ ಎಚ್ಚರಿಸಿತ್ತು. ಬಳಿಕ ಮಹಾಬಲರ ಮೃತದೇಹವನ್ನು ಆಸ್ಪತ್ರೆಯವರು ಹಣ ಪಡೆಯದೆ ವಾರಸುದಾರರಿಗೆ ಬಿಟ್ಟು ಕೊಟ್ಟಿದೆ. ಅದರಂತೆ ಪಕ್ಕಲಡ್ಕ ಯುವಕ ಮಂಡಲದ ಯುವಕರು ತಮ್ಮೂರಿನ ಆಂಬ್ಯುಲೆನ್ಸ್ ನಲ್ಲಿ ಮೃತದೇಹವನ್ನು ಅವರ ಮನೆಗೆ ತಲುಪಿಸುವ ವ್ಯವಸ್ಥೆ ಕಲ್ಪಿಸಿದರು ಎಂದು ಡಿವೈಎಫ್‌ಐ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X