ಮಂಗಳೂರು | ಡಿ.7ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ; ನಿಷೇಧಾಜ್ಞೆ ಜಾರಿ

ಮಂಗಳೂರು,ಡಿ.5: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗಳು ನಡೆಯಲಿರುವ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ ಮತ್ತು ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪರೀಕ್ಷೆಗಳನ್ನು ಸುಸೂತ್ರವಾಗಿ, ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಡಿ.7ರಂದು ಎಲ್ಲಾ 19 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ.ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಿ ಉಪ ಪೊಲೀಸ್ ಆಯುಕ್ತ ಮಿಥುನ್ ಎಚ್.ಎನ್. ಆದೇಶಿಸಿದ್ದಾರೆ.
ಪರೀಕ್ಷೆ ಪ್ರಾರಂಭವಾಗುವ 1 ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಪ್ರದೇಶದಲ್ಲಿ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳು ಹಾಗೂ ಸೈಬರ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ನಿಷೇಧಿಸಿದೆ ಎಂದು ಆದೇಶಿಸಲಾಗಿದೆ.
Next Story





