ಮಂಗಳೂರು | ಕಾರುಣ್ಯ ಟ್ರೋಫಿ ಕ್ರಿಕೆಟ್ ಟೂರ್ನಿ : ಸನ್ನಿ ಕ್ರಿಕೆಟರ್ಸ್ ಪಂಜಿಮೊಗರು ಚಾಂಪಿಯನ್

ಮಂಗಳೂರು,ನ.30: ನಗರದ ಬಂಗ್ರಕೂಳೂರು ಗೋಲ್ಡ್‌ಫಿಂಚ್ ಮೈದಾನದಲ್ಲಿ ರವಿವಾರ ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ಸನ್ನಿ ಕ್ರಿಕೆಟರ್ಸ್ ಪಂಜಿಮೊಗರು ತಂಡ ಪ್ರಥಮ ಸ್ಥಾನದೊಂದಿಗೆ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.
ಸಂಗಮ್ ಯಂಗ್ ಬಾಯ್ಸ್ ಕೃಷ್ಣಾಪುರ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು
ಎಜು ಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ವಿದ್ಯಾನಿಧಿಯ ಸಹಾಯಾರ್ಥ ದಿ.ವಿಶ್ವನಾಥ ಭಂಡಾರಿ ಕಾವೂರು ಸ್ಮರಣಾರ್ಥ ಆಹ್ವಾನಿತ 32 ತಂಡಗಳ ಅಂಡರ್ ಆರ್ಮ್ ಕ್ರಿಕೆಟ್ ‘ಕಾರುಣ್ಯ ಟ್ರೋಫಿ 2025’ ಟೂರ್ನಮೆಂಟನ್ನು ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರೀಡೆ ಎಲ್ಲರನ್ನು ಒಗ್ಗೂಡಿಸುವುದರೊಂದಿಗೆ ಸಂಘಟಾನತ್ಮಕವಾಗಿ ಬೆಳೆಯಲು ಸಹಕಾರಿಯಾಗಿದೆ. ದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕ್ರೀಡೆ ವಿಶೇಷ ಪ್ರೋತ್ಸಾಹ ನೀಡಲಾಗುತ್ತಿದೆ. ಇದರಿಂದಾಗಿ ಒಲಿಂಪಿಕ್ಸ್‌ನಲ್ಲಿ ಭಾರತ ಹೆಚ್ಚು ಪದಕಗಳನ್ನು ಗಳಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ ಅರ್ಜುನ್ ಭಂಡಾರ್ಕರ್ ಅವರನ್ನು ಗೌರವಿಸಲಾಯಿತು.
ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಲೋಕೇಶ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಡಾ.ವೈ.ಭರತ್ ಶೆಟ್ಟಿ, ಉದ್ಯಮಿ ಅಲೋಶಿಯಸ್ ಲಾಯ್ಸನ್ ಡಿಸೋಜ, ಕೋಟಿ ಚೆನ್ನಯ್ಯ ಸೇವಾ ಬ್ರಿಗೇಡ್ ಅಧ್ಯಕ್ಷ ಕಿರಣ್ ಕುಮಾರ್ ಕೋಡಿಕಲ್, ಉದ್ಯಮಿ ಅಲೋಶಿಯಸ್ ಲಾಯ್ಸನ್ ಡಿಸೋಜ, ಕೀರ್ತಿಶೇಷ ದಿ. ವಿಶ್ವನಾಥ ಆಳ್ವ ದತ್ತಿನಿಧಿಯ ಸಂಚಾಲಕ ಸುಧೀರ್ ಆಳ್ವ, ಮರಕಡ ಸಾರ್ವಜನಿಕ ಶ್ರೀಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಮರಕಡ, ಯುವವಾಹಿನಿ ಕೇಂದ್ರೀಯ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಬಜರಂಗದಳ ಮಂಗಳೂರು ಜಿಲ್ಲಾ ಸುರಕ್ಷಾ ಪ್ರಮುಖ್ ಮನೋಜ್ ವೀರನಗರ, ಕೋಟಿ ಚೆನ್ನಯ್ಯ ಸೇವಾ ಬ್ರಿಗೇಡ್ ಪ್ರಧಾನ ಕಾರ್ಯದರ್ಶಿ ಉಮೇಶ್ ಮಲರಾಯಸಾನ, ಶಾಂತಿನಗರ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ನವೀನ್ ಮಲ್ಲರಬೆಟ್ಟು, ಉದಯ ಯುವಕ ಮಂಡಲ ಅಬ್ಬೆಟ್ಟು ಇದರ ಅಧ್ಯಕ್ಷ ಪ್ರದೀಪ್ ಕುಮಾರ್, ಯುವವಾಹಿನಿ ಕೂಳೂರು ಘಟಕದ ಮಾಜಿ ಅಧ್ಯಕ್ಷೆ ನಯನಾ ರಮೇಶ್, ಪ್ರಮುಖರಾದ ಸಂದೀಪ್ ಪೂಜಾರಿ ವಿದ್ಯಾನಗರ, ಪ್ರಶಾಂತ್ ಭಟ್, ರೆಹಮಾನ್ ದತ್ತನಗರ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭ ಎಜುಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ದ.ಕ. ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ಕಲಿಯುತ್ತಿರುವ ಆಯ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಿಸಲಾಯಿತು.
ಎಜು ಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಮೋಹನದಾಸ್ ಮರಕಡ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶುಕುಮಾರ್ ಪಂಜಿಮೊಗರು ಕಾರ್ಯಕ್ರಮ ನಿರೂಪಿಸಿದರು.







