ಪದ್ಮಶ್ರೀ ಪುರಸ್ಕೃತೆ, ರಾಜ್ಯಸಭಾ ಸದಸ್ಯೆ ಡಾ.ಮೀನಾಕ್ಷಿ ಜೈನ್ಗೆ ಮಂಗಳೂರು ಲಿಟ್ ಫೆಸ್ಟ್ ಪ್ರಶಸ್ತಿ ಘೋಷಣೆ

ಡಾ.ಮೀನಾಕ್ಷಿ ಜೈನ್
ಮಂಗಳೂರು, ಜ.6: ನಗರದ ಡಾ.ಟಿ.ಎಂ.ಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಜ.10 ಮತ್ತು ಜ.11ರಂದು 8ನೇ ಆವೃತ್ತಿಯ ಮಂಗಳೂರು ಲಿಟ್ ಫೆಸ್ಟ್ ನಡೆಯಲಿದೆ. ಈ ಲಿಟ್ ಫೆಸ್ಟ್ನ 2026ನೇ ಆವೃತ್ತಿಯ ಪ್ರಶಸ್ತಿಗೆ ಪದ್ಮಶ್ರೀ ಪುರಸ್ಕೃತೆ, ರಾಜ್ಯಸಭಾ ಸದಸ್ಯೆ ಡಾ. ಮೀನಾಕ್ಷಿ ಜೈನ್ ಆಯ್ಕೆಯಾಗಿದ್ದಾರೆ ಎಂದು ಆಯೋಜಕ ಸಂಸ್ಥೆ ಭಾರತ್ ಫೌಂಡೇಷನ್ ತಿಳಿಸಿದೆ.
ಪ್ರಮುಖರಾದ ಶತಾವಧಾನಿ ಡಾ. ಆರ್. ಗಣೇಶ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ರವಿ ಎಸ್. (ಮಿಥಿಕ್ ಸೊಸೈಟಿ), ಡಾ. ಅಜಕ್ಕಳ ಗಿರೀಶ್ ಭಟ್ ಮತ್ತಿತರರು ಭಾಗವಹಿಸಲಿದ್ದಾರೆ. ಈ ಸಂದರ್ಭ ಡಾ.ಮೀನಾಕ್ಷಿ ಜೈನ್ ಜೊತೆಗೆ ವಿಶೇಷ ಸಂವಾದ ನಡೆಯಲಿದೆ. ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ’ರಾ’ದ ಮಾಜಿ ಮುಖ್ಯಸ್ಥ ವಿಕ್ರಂ ಸೂದ್, ವಿಶ್ವಸಂಸ್ಥೆಯಲ್ಲಿ ಭಾರತದ ಮೊದಲ ಮಹಿಳಾ ಖಾಯಂ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ ಅಂಬಾಸಿಡರ್ ರುಚಿರಾ ಕಾಂಬೋಜ್, ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ ಅಂಬಾಸಿಡರ್ ಟಿ.ಎಸ್. ತಿರುಮೂರ್ತಿ ಸಹಿತ 65ಕ್ಕೂ ಹೆಚ್ಚು ಚಿಂತಕರು ಲಿಟ್ ಫೆಸ್ಟ್ನಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.





