ಮಂಗಳೂರು| ಪಿಲಿಕುಳದಲ್ಲಿ ಶುಭಾಂಶು ಶುಕ್ಲಾ ಸಂವಾದ ನೇರಪ್ರಸಾರ

ಮಂಗಳೂರು,ನ.26 : ರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಏರ್ಪಡಿಸಿದ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳ ನೇರ ಸಂವಾದದ ಪ್ರಸಾರ ಕಾರ್ಯಕ್ರಮವನ್ನು ಮಂಗಳವಾರ ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ಏರ್ಪಡಿಸಲಾಗಿತ್ತು.
ಬೆಂಗಳೂರಿನ ಜವಹರಲಾಲ್ ನೆಹರೂ ತಾರಾಲಯದಲ್ಲಿ ಆಯೋಜಿಸಿದ ಈ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸುವ ಅವಕಾಶವನ್ನು ರಾಜ್ಯದ ಎಲ್ಲಾ ವಿಜ್ಞಾನ ಕೇಂದ್ರಗಳು ತಮ್ಮ ಸುತ್ತಮುತ್ತಲಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಒದಗಿಸಿತ್ತು.
ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ. ಕೆ.ವಿ.ರಾವ್ ಮಾತನಾಡಿದು.
Next Story





