Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಅ.2ರಂದು ಬೃಹತ್ ಇಲಲ್ ಹಬೀಬ್...

ಮಂಗಳೂರು: ಅ.2ರಂದು ಬೃಹತ್ ಇಲಲ್ ಹಬೀಬ್ ಮೀಲಾದ್ ರ‍್ಯಾಲಿ

ವಾರ್ತಾಭಾರತಿವಾರ್ತಾಭಾರತಿ29 Sept 2023 2:40 PM IST
share
ಮಂಗಳೂರು: ಅ.2ರಂದು ಬೃಹತ್ ಇಲಲ್ ಹಬೀಬ್ ಮೀಲಾದ್ ರ‍್ಯಾಲಿ

ಮಂಗಳೂರು, ಸೆ.29: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ದ. ಕ ಜಿಲ್ಲೆ ವೆಸ್ಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಪ್ರವಾದಿ ಮುಹಮ್ಮದ್ (ಸ) ರವರ ಜನ್ಮ ದಿನಾಚರಣೆ ಅಂಗವಾಗಿ ನಡೆಸಲಾಗುವ ಇಲಲ್ ಹಬೀಬ್ ಬೃಹತ್ ಮೀಲಾದ್ ರ‍್ಯಾಲಿಯು ಅ. 2ರಂದು ಆಯೋಜಿಸಲಾಗಿದೆ.

ಅಂದು ಮಧ್ಯಾಹ್ನ 2 ಗಂಟೆಗೆ ಮಂಗಳೂರಿನ ಅಂಬೇಡ್ಕರ್ ವೃತ್ತ(ಜ್ಯೋತಿ ಸರ್ಕಲ್)ದಿಂದ ರ‍್ಯಾಲಿ ಆರಂಭಗೊಂಡು ಮಿನಿ ವಿಧಾನಸೌಧ ಎದುರು ಸಮಾರೋಪಗೊಳ್ಳಲಿದೆ ಎಂದು ಇಲಲ್ ಹಬೀಬ್ ಮೀಲಾದ್ ಸಮಿತಿಯ ಅಧ್ಯಕ್ಷ ಹಾಫಿಳ್ ಯಾಕೂಬ್ ಸಅದಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ದ. ಕ ಜಿಲ್ಲೆ ವಕ್ಫ್ ಬೋರ್ಡ್ ಅಧ್ಯಕ್ಷ ಬಿ.ಎ. ನಾಸಿರ್ ಲಕ್ಕಿಸ್ಟಾರ್ ಜಾಥಾ ನಾಯಕರಿಗೆ ಧ್ವಜ ಹಸ್ತಾಂತರಿಸುವ ಮೂಲಕ ರ‍್ಯಾಲಿಗೆ ಚಾಲನೆ ನೀಡಲಿದ್ದಾರೆ. ರ‍್ಯಾಲಿಯಲ್ಲಿ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆಯ ಸುರತ್ಕಲ್, ಮಂಗಳೂರು, ಮೂಡುಬಿದಿರೆ, ಬಂಟ್ವಾಳ, ಮುಡಿಪು, ದೇರಳಕಟ್ಟೆ, ಉಳ್ಳಾಲ ಮುಂತಾದ ಏಳು ಝೋನ್ ಹಾಗೂ ಡಿವಿಷನ್ ಗಳ ನೇತೃತ್ವದಲ್ಲಿ ಪ್ರತ್ಯೇಕ ರೀತಿಯಲ್ಲಿ ರ‍್ಯಾಲಿ ನಡೆಯಲಿದೆ. ದಫ್, ಸ್ಕೌಟ್ ತಂಡಗಳು ಪಾಲ್ಗೊಳ್ಳಲಿದ್ದು, ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ರ‍್ಯಾಲಿ ನಡೆಸಲಾಗುವುದು. ಸಮಾರೋಪ ಸಮಾರಂಭದಲ್ಲಿ ದ.ಕ ಜಿಲ್ಲಾ ಮುಸ್ಲಿಂ ಜಮಾಅತ್ ಅಧ್ಯಕ್ಷ ಬಿ.ಎಂ.ಮುಮ್ತಾಝ್ ಅಲಿ ಅಧ್ಯಕ್ಷತೆ ವಹಿಸಲಿದ್ದು, ವಾಗ್ಮಿ ಡಾ. ಎಂ.ಎಸ್.ಎಂ. ಝೈನಿ ಕಾಮಿಲ್ ಮುಖ್ಯ ಭಾಷಣ ಮಾಡಲಿದ್ದಾರೆ.

ಎಸ್‌ವೈಎಸ್ ಜಿಲ್ಲಾಧ್ಯಕ್ಷ ವಿ.ಯು. ಇಸ್ಹಾಕ್ ಝುಹ್ರಿ, ಎಸ್ಸೆಸ್ಸೆಫ್ ಜಿಲ್ಲಾ ಅಧ್ಯಕ್ಷ ಮನ್ಸೂರ್ ಹಿಮಮಿ ಮೊಂಟೆಪದವು, ಎಸ್ ಜೆ ಎಂ ಜಿಲ್ಲಾ ಅಧ್ಯಕ್ಷ ಮುಹಮ್ಮದ್ ಮದನಿ ಕೆ.ಸಿರೋಡ್, ಎಸ್ ಎಂ ಎ ಜಿಲ್ಲಾಧ್ಯಕ್ಷ ಎ.ಪಿ ಇಸ್ಮಾಯಿಲ್ ಅಡ್ಯಾರ್ ಮತ್ತಿತರರು ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್, ಸುನ್ನೀ ಮ್ಯಾನೇಜ್'ಮೆಂಟ್ ಅಸೋಸಿಯೇಷನ್ ಸೇರಿದಂತೆ ಹಲವು ಸಂಘಟನೆಗಳ ನಾಯಕರು ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಇಲಲ್ ಹಬೀಬ್ ಮೀಲಾದ್ ಸಮಿತಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ, ಕರ್ನಾಟಕ ಮುಸ್ಲಿಂ ಜಮಾಅತ್‌ನ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹೀಂ ಸಅದಿ, ಎಸ್‌ವೈಎಸ್ ದ.ಕ. ಜಿಲ್ಲಾ ವೆಸ್ಟ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪ್ರಿಂಟೆಕ್, ಎಸ್ಸೆಸ್ಸೆಫ್ ಕೋಶಾಧಿಕಾರಿ ಇರ್ಷಾದ್ ಹಾಜಿ ಗೂಡಿನಬಳಿ, ಇಲಲ್ ಹಬೀಬ್ ಮೀಲಾದ್ ಸಮಿತಿಯ ಕೋಶಾಧಿಕಾರಿ ಮುಹ್ಮಮದ್ ಅಝ್ಮಲ್ ಕಾವೂರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X