Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಲೈಂಗಿಕ ದೌರ್ಜನ್ಯ ಎಸಗಿ...

ಮಂಗಳೂರು| ಲೈಂಗಿಕ ದೌರ್ಜನ್ಯ ಎಸಗಿ ಅಪ್ರಾಪ್ತೆಯ ಕೊಲೆಗೈದ ಪ್ರಕರಣ: ಆರೋಪಿಗೆ ಮರಣ ದಂಡನೆ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ12 Sept 2025 8:19 PM IST
share
ಮಂಗಳೂರು| ಲೈಂಗಿಕ ದೌರ್ಜನ್ಯ ಎಸಗಿ ಅಪ್ರಾಪ್ತೆಯ ಕೊಲೆಗೈದ ಪ್ರಕರಣ: ಆರೋಪಿಗೆ ಮರಣ ದಂಡನೆ ಶಿಕ್ಷೆ

ಮಂಗಳೂರು, ಸೆ.12: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿ, ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಫ್‌ಸಿ-2 (ಪೊಕ್ಸೊ) ನ್ಯಾಯಾಲಯವು ಶುಕ್ರವಾರ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಬೆಳಗಾವಿ ಸವದತ್ತಿ ತಾಲೂಕು ಹಂಚಿನಾಳ ಗ್ರಾಮ ಮಾದರ ನಿವಾಸಿ ಫಕೀರಪ್ಪ ಹಣಮಪ್ಪ ಮಾದರ (58) ಶಿಕ್ಷೆಗೊಳಗಾದ ಆರೋಪಿ.

ಅಪ್ರಾಪ್ತೆಯು ಮೂಲತಃ ಬೆಳಗಾವಿ ಜಿಲ್ಲೆಯ ಚುಂಚನೂರು ಗ್ರಾಮದ ನಿವಾಸಿಯಾಗಿದ್ದು, ಕೊಣಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದಳು. ಬಾಲಕಿಯ ತಾಯಿ ತನ್ನ ಮಗಳನ್ನು ತನ್ನ ಸೋದರ ಸಂಬಂಧಿಯ ಮನೆಯಲ್ಲಿ ಬಿಟ್ಟು ವಸತಿ ಶಾಲೆಗೆ ಕರೆದುಕೊಂಡು ಹೋಗುವಂತೆ ಹೇಳಿ ಊರಿಗೆ ತೆರಳಿದ್ದರು.

2024ರ ಆ.6ರಂದು ಬೆಳಗ್ಗೆ ಬಾಲಕಿಯ ಮಾವ ಗಾರೆ ಕೆಲಸಕ್ಕೆ ಹೊರಟಿದ್ದರೆ, ಅವರ ಹೆಂಡತಿ ಊರಿಗೆ ಹೋಗಿ ದ್ದರು. ಹಾಗಾಗಿ ಆ ಮನೆಯಲ್ಲಿ ಬಾಲಕಿ ಒಬ್ಬಳೇ ಇರುವುದನ್ನು ಖಚಿತಪಡಿಸಿಕೊಂಡ ಪಕ್ಕದ ಬಾಡಿಗೆ ಮನೆಯಲ್ಲಿದ್ದ ಆರೋಪಿ ಫಕೀರಪ್ಪ ಹಣಮಪ್ಪ ಮಾದರ ಬಾಲಕಿಯಿದ್ದ ಮನೆಗೆ ಅಕ್ರಮ ಪ್ರವೇಶ ಮಾಡಿ ಲೈಂಗಿಕ ದೌರ್ಜನ್ಯ ಎಸಗಿ ಆಕೆಗೆ ಮುಖಕ್ಕೆ ಕಚ್ಚಿ ಗಾಯಗೊಳಿಸಿದ್ದ. ಬಳಿಕ ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದ ಎಂದು ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಫ್‌ಸಿ-2 (ಪೊಕ್ಸೊ) ನ್ಯಾಯಾಲಯದ ನ್ಯಾಯಾಧೀಶ ಕೆ.ಎಸ್.ಮಾನು ಆರೋಪಿಗೆ ಬಿಎನ್‌ಎಸ್ 103(1) ಕೊಲೆ ಪ್ರಕರಣಕ್ಕೆ ಮರಣದಂಡನೆ ಶಿಕ್ಷೆ ವಿಧಿಸಿದ್ದಾರೆ. ಪೊಕ್ಸೊ 4(2)ರ ಪ್ರಕರಣಕ್ಕೆ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 4 ತಿಂಗಳು ಸಾದಾ ಶಿಕ್ಷೆ, ಬಿಎನ್‌ಎಸ್ 332(ಎ) ಅಕ್ರಮ ಪ್ರವೇಶಗೈದ ಅಪರಾಧದಡಿ ಜೀವಾವಧಿ ಶಿಕ್ಷೆ ಮತ್ತು 5 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 4 ತಿಂಗಳು ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

*5 ಲಕ್ಷ ರೂ. ಪರಿಹಾರ: ದಂಡದ ಮೊತ್ತ 1 ಲಕ್ಷ ರೂವನ್ನು ಬಾಲಕಿಯ ತಂದೆ-ತಾಯಿಗೆ ನೀಡಬೇಕು. ಅಲ್ಲದೆ ತಂದೆ-ತಾಯಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶ ನೀಡಿದೆ.

ಪಣಂಬೂರು ಇನ್‌ಸ್ಪೆಕ್ಟರ್ ಮುಹಮ್ಮದ್ ಸಲೀಂ ಅಬ್ಬಾಸ್ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಸಿದ್ದರು. ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ಬೋಳೂರು ಸರಕಾರದ ಪರವಾಗಿ ವಾದಿಸಿದ್ದರು.

*ಪ್ರತ್ಯಕ್ಷ ಸಾಕ್ಷಿ : ಅಪ್ರಾಪ್ತೆಯು ಕೊಲೆಗೆ ಮುನ್ನಾ ದಿನ ನೆರೆಮನೆಯ ಮಹಿಳೆಯೊಬ್ಬರ ಫೋನ್ ಮೂಲಕ ತನ್ನ ತಾಯಿಗೆ ಕರೆ ಮಾಡಿ ಜ್ವರವಿರುವ ಬಗ್ಗೆ ಹೇಳಿದ್ದಳು. ಹಾಗಾಗಿ ಮರುದಿನ ಅದೇ ಮಹಿಳೆಯ ಫೋನ್‌ಗೆ ಕರೆ ಮಾಡಿ ಬಾಲಕಿ ಜತೆ ಮಾತನಾಡಲು ಫೋನ್ ಕೊಡುವಂತೆ ತಾಯಿ ಹೇಳಿದ್ದರು. ಅದರಂತೆ ಫೋನ್ ಕೊಡಲು ಬಾಲಕಿಯಿದ್ದ ಮನೆಯೊಳಗೆ ಮಹಿಳೆಯು ಪಕ್ಕದ ಮನೆಯ ಮತ್ತೊಬ್ಬ ಮಹಿಳೆಯ ಜೊತೆ ಹೋದಾಗ ಆರೋಪಿ ಫಕೀರಪ್ಪ ಅಲ್ಲಿರವುದನ್ನು ಕಂಡಿದ್ದರು.

ಕೋರ್ಟ್ ವಿಚಾರಣೆ ವೇಳೆ ಈ ಇಬ್ಬರು ಮಹಿಳೆಯರು ಘಟನೆಯ ಪ್ರತ್ಯಕ್ಷ ಸಾಕ್ಷಿ ಹೇಳಿದರೆ ಉಳಿದ 16 ಮಂದಿ ಮಂದಿ ಸಾಂದರ್ಭಿಕ ಸಾಕ್ಷಿಗಳನ್ನು ಹೇಳಿದ್ದರು. 38 ದಾಖಲೆಗಳನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಉಳಿದಂತೆ ಆರೋಪಿಯ ಬಟ್ಟೆಯಲ್ಲಿದ್ದ ರಕ್ತ ಹಾಗೂ ಬಾಲಕಿ ರಕ್ತದ ಸ್ಯಾಂಪಲ್ ಹೋಲಿಕೆಯಾಗಿತ್ತು. ಬಾಲಕಿಯ ಮುಖದಲ್ಲಿದ್ದ ಗಾಯದ ಗುರುತು ಮತ್ತು ಆರೋಪಿಯ ಹಲ್ಲಿನ ಚಹರೆ ಹೋಲಿಕೆಯಾಗಿತ್ತು. ಪ್ರತ್ಯಕ್ಷ ಸಾಕ್ಷಿ, ಸಾಂದರ್ಭಿಕ ಸಾಕ್ಷಿ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯ ವರದಿಯು ಕಠಿಣ ಶಿಕ್ಷೆಗೆ ವಿಧಿಸಲು ಸಾಧ್ಯವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X