Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಬಡವರ ಕೆಲಸದ ಹಕ್ಕನ್ನು ಮೋದಿ...

ಮಂಗಳೂರು | ಬಡವರ ಕೆಲಸದ ಹಕ್ಕನ್ನು ಮೋದಿ ಸರಕಾರ ಕಿತ್ತುಕೊಂಡಿದೆ: ವಿಜಯ್ ಇಂದರ್ ಸಿಂಗ್ಲಾ

ವಾರ್ತಾಭಾರತಿವಾರ್ತಾಭಾರತಿ22 Dec 2025 2:22 PM IST
share
ಮಂಗಳೂರು | ಬಡವರ ಕೆಲಸದ ಹಕ್ಕನ್ನು ಮೋದಿ ಸರಕಾರ ಕಿತ್ತುಕೊಂಡಿದೆ: ವಿಜಯ್ ಇಂದರ್ ಸಿಂಗ್ಲಾ

ಮಂಗಳೂರು, ಡಿ.22: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಸುಧಾರಣೆ ಹೆಸರಲ್ಲಿ ವಿಶ್ವದ ಅತಿ ದೊಡ್ಡ ಉದ್ಯೋಗ ಖಾತರಿ ಯೋಜನೆಯಾಗಿರುವ ಮನ್‌ರೇಗಾವನ್ನು ಕೊಲೆ ಮಾಡಿದೆ. ಬಡವರನ್ನು ಕೆಲಸದ ಹಕ್ಕನ್ನು ಕಸಿದುಕೊಂಡಿದೆ ಎಂದು ಎಐಸಿಸಿ ಜಂಟಿ ಖಜಾಂಚಿ, ಮಾಜಿ ಸಂಸದ ವಿಜಯ್ ಇಂದರ್ ಸಿಂಗ್ಲಾ ಹೇಳಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಮನ್‌ರೇಗಾ ಗಾಂಧೀಜಿಯವರ ಗ್ರಾಮ ಸ್ವರಾಜ್ಯ, ಕಾರ್ಮಿಕರ ಘನತೆ ಮತ್ತು ವಿಕೇಂದ್ರಿಕೃತ ಅಭಿವೃದ್ಧಿಯ ದೃಷ್ಟಿಕೋನದ ಜೀವಂತ ಸಾಕಾರವಾಗಿದೆ. ಆದರೆ ಗಾಂಧೀಜಿ ಹೆಸರನ್ನು ಮೋದಿ ಸರಕಾರವು ಅಳಿಸಿ ಹಾಕಿದೆ ಎಂದರು.

ಮನ್‌ರೇಗಾ ಕೇಂದ್ರ ಸರಕಾರದ ಯೋಜನೆಯಾಗಿರುವುದರಿಂದ ಶೇ.100ರಷ್ಟು ಅನುದಾನವನ್ನು ಕೇಂದ್ರ ಸರಕಾರವೇ ನೀಡುತ್ತಿದೆ. ಆದರೆ ಇದೀಗ ಕೇಂದ್ರ ಸರಕಾರವು ಈ ಯೋಜನೆಯಲ್ಲಿ ಶೇ.40ರಷ್ಟು ಹಣವನ್ನು ರಾಜ್ಯ ಸರಕಾರ ಭರಿಸುವಂತೆ ಒತ್ತಡ ಹಾಕಲು ಪ್ರಯತ್ನಿಸುತ್ತಿದೆ ಎಂದು ಆಪಾದಿಸಿದರು.

ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನದಿಂದಲೂ ಮನ್‌ರೇಗಾ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಲು ಆರಂಭಿಸಿದ ಅವರು, ತಮ್ಮ ಅಧಿಕಾರದ ಅವಧಿಯಲ್ಲಿ ಮನ್‌ರೇಗಾವನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುವ ಮೂಲಕ ಬಡವರಿಗೆ ತೊಂದರೆ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಮನ್‌ರೇಗಾವನ್ನು ಮುಗಿಸಲು ಮೋದಿ ಸರಕಾರ ನಡೆಸಿರುವ ಯತ್ನದ ವಿರುದ್ಧ ವಿಪಕ್ಷಗಳು ಲೋಕಸಭೆಯಲ್ಲಿ ಧ್ವನಿ ಎತ್ತಿದರೂ ಫಲಕಾರಿಯಾಗಲಿಲ್ಲ ಎಂದರು

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ., ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ ಮತ್ತು ಐವನ್ ಡಿ ಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಶಾಸಕ ಜೆ. ಆರ್.ಲೋಬೊ, ಪ್ರಮುಖರಾದ ಎಂ.ಎ.ಗಪೂರ್, ಪದ್ಮರಾಜ್ ಆರ್ ಪೂಜಾರಿ, ಇನಾಯತ್ ಅಲಿ, ಶಶೀಧರ ಹೆಗ್ಡೆ, ಸದಾಶಿವ ಉಳ್ಳಾಲ, ಸುರೇಂದ್ರ ಕಂಬಳಿ, ಎಸ್.ಅಪ್ಪಿ , ವಿಶ್ವಾಸ್ ಕುಮಾರ್ ದಾಸ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X