ಸುರತ್ಕಲ್: ರಸ್ತೆಯಲ್ಲಿ ಹೊತ್ತಿ ಉರಿದ ಕಾರು

ಸುರತ್ಕಲ್: ಸುರತ್ಕಲ್ ಜಂಕ್ಷನ್ ಬಳಿಯ ಫ್ಲೈ ಓವರ್ ನ ಸರ್ವಿಸ್ ರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ಬುಧವಾರ ವರದಿಯಾಗಿದೆ.
ಉಡುಪಿ ನಿವಾಸಿ ಉಷಾ ಎಂಬವರು ಕೆಲಸ ನಿಮಿತ್ತ ಮಂಗಳೂರಿಗೆ ಹೋಗಲು ಸುರತ್ಕಲ್ ಗೋವಿಂದ ದಾಸ ಕಾಲೇಜು ಬಳಿಯ ಸರ್ವಿಸ್ ರಸ್ತೆಯಾಗಿ ಸುರತ್ಕಲ್ ಜಂಕ್ಷನ್ ಗೆ ಬರುತ್ತಿದ್ದರು ಎನ್ನಲಾಗಿದೆ.
ಈ ವೇಳೆ ಕಾರಿನ ಡ್ಯಾಶ್ ಬೋರ್ಡ್ ನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ಉಷಾ ಅವರು ತಕ್ಷಣ ಕಾರನ್ನು ರಸ್ತೆಯಲ್ಲೇ ಬಿಟ್ಟು ಹೊರ ಬಂದಿದ್ದಾರೆ ಎಂದು ತಿಳಿದು ಬಂದಿದೆ.
ತಕ್ಷಣ ಕಾರಿನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಭಸ್ಮವಾಯಿತು ಎನ್ನಲಾಗಿದೆ. ಸಾರ್ವಜನಿಕರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ ಕಾರಣ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಯಾವುದೇ ಸಾವು- ನೋವು ಸಂಭವಿಸಿಲ್ಲ ಎಂದು ಸುರತ್ಕಲ್ ಪೊಲೀಸರು ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
Next Story