Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ನೈಸರ್ಗಿಕ ಕೃಷಿಯಿಂದ...

ಮಂಗಳೂರು | ನೈಸರ್ಗಿಕ ಕೃಷಿಯಿಂದ ಆರೋಗ್ಯಯುತ ಸಮಾಜ ಸೃಷ್ಟಿ: ಹೊನ್ನಪ್ಪ ಗೌಡ

ವಾರ್ತಾಭಾರತಿವಾರ್ತಾಭಾರತಿ9 Dec 2025 7:21 PM IST
share
ಮಂಗಳೂರು | ನೈಸರ್ಗಿಕ ಕೃಷಿಯಿಂದ ಆರೋಗ್ಯಯುತ ಸಮಾಜ ಸೃಷ್ಟಿ: ಹೊನ್ನಪ್ಪ ಗೌಡ

ಮಂಗಳೂರು, ಡಿ.9: ನೈಸರ್ಗಿಕವಾಗಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದರಿಂದ ರಾಸಾಯನಿಕ ಮುಕ್ತ ತರಕಾರಿ ಹಾಗೂ ಬೆಳೆಗಳು ದೊರಕಿ ಜನರು ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಜಂಟಿ ಕೃಷಿ ನಿರ್ದೇಶಕ ಹೊನ್ನಪ್ಪಗೌಡ ತಿಳಿಸಿದ್ದಾರೆ.

ಕೃಷಿ ವಿಜ್ಞಾನ ಕೇಂದ್ರ, ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್, ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಕೇಂದ್ರ ಸರಕಾರ, ಕೃಷಿ ಇಲಾಖೆ, ದ.ಕ. ಜಿಪಂ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ನಡೆದ ದ.ಕ. ಜಿಲ್ಲೆಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ನೈಸರ್ಗಿಕ ಕೃಷಿ ಕುರಿತು ಐದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸರಕಾರದ ನೀತಿಯಂತೆ ನೈಸರ್ಗಿಕ ಕೃಷಿಗೆ ಒತ್ತು ನೀಡಲಾಗುತ್ತಿದ್ದು, ಸಾಂಪ್ರದಾಯಿಕವಾಗಿ ಪದ್ಧತಿ ಹಾಗೂ ಜಾನುವಾರು ಆಧಾರಿತ ಕೃಷಿ ಚಟುವಟಿಕೆಗಳನ್ನು ನಡೆಸಲು ಪ್ರೇರೇಪಿಸಲಾಗುತ್ತಿದೆ. ಇದಕ್ಕಾಗಿ 2025ರ ಫೆಬ್ರವರಿಯಲ್ಲಿ ಸರಕಾರ ಮಾರ್ಗಸೂಚಿ ಹೊರಡಿಸಿದೆ. ಮಣ್ಣಿನ ಆರೋಗ್ಯ ಕಾಪಾಡುವುದು, ನೀರಿನ ಗುಣಮಟ್ಟ ಪರಿಶೀಲಿಸುವುದು ಮತ್ತು ಪ್ರಾಕೃತಿಕವಾಗಿ ದೊರಕುವ ವಸ್ತುಗಳನ್ನು ಬಳಸಿಕೊಂಡು ಕೃಷಿ ಚಟುವಟಿಕೆಗಳನ್ನು ನಡೆಸುವುದು ಇದರ ಉದ್ದೇಶವಾಗಿದೆ ಎಂದರು.

ಮುಂದಿನ ಮೂರು ವರ್ಷದವರೆಗೆ ಈ ಯೋಜನೆ ಜಾರಿಯಲ್ಲಿದ್ದು, ರೈತರಿಗೆ ಕೃಷಿ ಪರಿಕರಗಳ ವೆಚ್ಚ ತಗ್ಗಿಸಿ, ಯಾವುದೇ ಕ್ರಿಮಿನಾಶಕ ಮತ್ತು ರಸಗೊಬ್ಬರಗಳ ಬಳಕೆ ಇಲ್ಲದೆ ಸಾವಯವ ಪದ್ಧತಿಯಲ್ಲಿ ಕೃಷಿ ನಡೆಸಲು ಪ್ರೋತ್ಸಾಹಿಸಲಾಗುತ್ತದೆ ಎಂದು ಹೊನ್ನಪ್ಪ ಗೌಡ ತಿಳಿಸಿದರು.

ಉಪ ಕೃಷಿ ನಿರ್ದೇಶಕ ಅಶೋಕ್ ಮಾತನಾಡಿ, ಮಣ್ಣು, ನೀರು, ಗಾಳಿ ಇವುಗಳು ಕೃಗೆ ಪೂರಕವಾದ ನೈಸರ್ಗಿಕ ಅಂಶಗಳಾಗಿವೆ. ಪರಿಸರಕ್ಕೆ ಪೂರಕವಾದ ಕೃಷಿ ಚಟುವಟಿಕೆಗಳನ್ನು ನಡೆಸುವುದು, ಮಣ್ಣಿನಲ್ಲಿ ಸಾವಯವ ಇಂಗಾಲ ಜಾಸ್ತಿ ಮಾಡುವುದು ಮತ್ತು ರಾಸಾಯನಿಕ ಬಳಕೆ ತಗ್ಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದರು.

ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಟಿ.ಜೆ. ರಮೇಶ್ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲೆಯಲ್ಲಿ ಸ್ಥಳೀಯವಾಗಿ ಬೆಳೆದ ತರಕಾರಿಗಳಿಗೆ ಹೆಚ್ಚು ಬೇಡಿಕೆ ಇದೆ. ಇದನ್ನು ನೈಸರ್ಗಿಕ ಕೃಷಿ ಪದ್ಧತಿಯಲ್ಲಿ ಬೆಳೆಸಲು ಮತ್ತು ಕೃಷಿಕರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಕೃಷಿ ವಿಜ್ಞಾನ ಕೇಂದ್ರವು ಶ್ರಮಿಸುತ್ತಿದೆ ಎಂದರು.

ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಶಾ ತರಬೇತಿ ಕೈಪಿಡಿ ಬಿಡುಗಡೆ ಮಾಡಿದರು. ಕೃಷಿ ವಿಜ್ಞಾನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ಹರೀಶ್ ಶೆಣೈ ಸ್ವಾಗತಿಸಿದರು. ತೋಟಗಾರಿಕೆ ವಿಜ್ಞಾನಿ ಡಾ. ರಶ್ಮಿ ಆರ್. ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X