Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇ-ಆಟೋ ಸಂಚಾರ ಸಮಸ್ಯೆ ಬಗೆಹರಿಸಲು...

ಇ-ಆಟೋ ಸಂಚಾರ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತಕ್ಕೆ ಮನವಿ: ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್

ವಾರ್ತಾಭಾರತಿವಾರ್ತಾಭಾರತಿ24 May 2024 7:20 PM IST
share
ಇ-ಆಟೋ ಸಂಚಾರ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತಕ್ಕೆ ಮನವಿ: ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್

ಮಂಗಳೂರು: ಮಂಗಳೂರು ನಗರದಲ್ಲಿ ಇ ಆಟೋರಿಕ್ಷಾ ಸಾಕಷ್ಟು ಸಂಖ್ಯೆಯಲ್ಲಿದ್ದು, ಇದರಿಂದಾಗಿ ಹಾಲಿ ಆಟೋರಿಕ್ಷಾಗಳ ಬಾಡಿಗೆಗೆ ತೊಂದರೆಯಾಗುತ್ತಿದೆ ಎಂಬ ಕೂಗು ಕೇಳಿಬರುತ್ತಿದೆ. ಮಾತ್ರವಲ್ಲ ಇ ಆಟೋಗಳ ಓಡಾಟಕ್ಕೆ ಹಾಲಿ ಆಟೋ ರಿಕ್ಷಾ ಚಾಲಕರು ಅವಕಾಶ ನೀಡುವುದಿಲ್ಲ ಎಂಬ ದೂರೂ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಉಭಯ ಆಟೋರಿಕ್ಷಾಗಳ ಬಿಕ್ಕಟ್ಟು ಶಮನಕ್ಕೆ ಸಭೆ ಕರೆದು ಇತ್ಯರ್ಥಪಡಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹೇಳಿದರು.

ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಬ್ಬರ ದೂರಿಗೆ ಸ್ಪಂದಿಸಿ ಅವರು ಮಾತನಾಡಿದರು.

ಫೋನ್-ಇನ್ ಕಾರ್ಯಕ್ರಮದಲ್ಲೂ ಈ ಬಗ್ಗೆ ಪ್ರತ್ಯೇಕ ದೂರು ಕೇಳಿಬಂದಿದೆ. 1997ರಲ್ಲಿ ಆರ್‌ಟಿಎ ಸಭೆ ನಡೆಸಿದಾಗ ಮಂಗಳೂರಿನ ಜನಸಂಖ್ಯೆ 1.97 ಲಕ್ಷ ಇತ್ತು. ಈಗ ಇದು 7-8 ಲಕ್ಷ ತಲುಪಿದೆ. ಹಾಗಾಗಿ ಆಟೋರಿಕ್ಷಾಗಳ ಸಂಖ್ಯೆಯೂ ಜಾಸ್ತಿಯಾಗಿದೆ. ಕೇಂದ್ರ ಸರಕಾರ ಹಾಗೂ ಹಸಿರುಪೀಠದ ಪರಿಸರ ಮಾಲಿನ್ಯ ತಡೆಗಟ್ಟುವ ಆದೇಶ ಹಿನ್ನೆಲೆಯಲ್ಲಿ ಇ ಆಟೋಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಹಿಂದಿನ ಜಿಲ್ಲಾಧಿಕಾರಿಗಳು ಹೆಚ್ಚಿನ ಇ ಆಟೋಗಳ ಸಂಚಾರಕ್ಕೆ ಮಿತಿ ವಿಧಿಸಿದ್ದರು. ಆದರೆ ಬದಲಾದ ಕಾಲಘಟ್ಟದಲ್ಲಿ ಪರಿಸರಸ್ನೇಹಿ ಆಟೋಗಳಿಗೆ ನಿರ್ಬಂಧ ವಿಧಿಸುವುದು ಬರುವುದಿಲ್ಲ. ಹಾಗಾಗಿ ಹೊಂದಾಣಿಕೆಯಿಂದ ಈ ಸಮಸ್ಯೆ ನಿವಾರಣೆಗೆ ಪ್ರಯತ್ನಿಸಬೇಕಾಗಿದೆ. ಈ ಕುರಿತು ಶೀಘ್ರವೇ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳುವ ಅಗತ್ಯತೆಯನ್ನು ಜಿಲ್ಲಾಡಳಿತಕ್ಕೆ ಮನವರಿಕೆ ಮಾಡಲಾಗಿದೆ ಎಂದರು.

ಮಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ಹಾಗೂ ವಾಹನಗಳ ಪಾರ್ಕಿಂಗ್ ಉಲ್ಲಂಘನೆಗೆ ಸಂಬಂಧಿಸಿ ಸೂಕ್ತ ಕಾರ್ಯಾಚರಣೆ ನಡೆಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪೊಲೀಸ್ ಆಯುಕ್ತರು ಪ್ರತಿಕ್ರಿಯಿಸಿದರು.

ನಗರದ ಕಂಕನಾಡಿ, ಕೇಂದ್ರ ಮಾರುಕಟ್ಟೆ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ರಸ್ತೆ ಮೇಲೆ ಬೀದಿಬದಿ ವ್ಯಾಪಾರ ನಡೆಯುತ್ತಿದೆ. ತಳ್ಳು ಗಾಡಿಗಳ ವ್ಯಾಪಾರಸ್ಥರು ಅಲ್ಲೇ ಪಕ್ಕದಲ್ಲಿ ಕುರ್ಚಿ ಹಾಕಿ ಕುಳಿತುಕೊಳ್ಳುತ್ತಾರೆ. ಇದರಿಂದ ಪಾದಚಾರಿ ಹಾಗೂ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರೊಬ್ಬರು ಆಗ್ರಹಿಸಿದರು.

ನಗರದ ಮಾರ್ನಮಿಕಟ್ಟೆ, ನಂದಿಗುಡ್ಡ ಸೇರಿದಂತೆ ಹಲವು ರಸ್ತೆಗಳ ಬದಿಯಲ್ಲೇ ಗ್ಯಾರೇಜ್ ರೀತಿಯ ವ್ಯವಹಾರ ನಡೆಯುತ್ತಿದ್ದು, ಸಾಕಷ್ಟು ವಾಹನಗಳು ರಸ್ತೆಯುದ್ದಕ್ಕೂ ರಿಪೇರಿಗಾಗಿ ನಿಲ್ಲಿಸಲಾಗುತ್ತದೆ. ಇದರಿಂದ ಪಾದಾಚಾರಿಗಳು, ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂಬ ದೂರಿಗೆ ಸ್ಪಂದಿಸಿದ ಪೊಲೀಸ್ ಆಯುಕ್ತರು ಈ ಬಗ್ಗೆ ಕ್ರಮ ವಹಿಸುವುದಾಗಿ ಹೇಳಿದರು.

ಕಾಟಿಪಳ್ಳ, ಬೈಕಂಪಾಡಿ, ಮೂಡುಬಿದಿರೆ, ಕಡಂದಲೆ, ಮೂಲ್ಕಿ ಮತ್ತಿತರ ಕಡೆಗಳಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್ ಮಾಡುತ್ತಿದ್ದಾರೆ. ಅಲ್ಲದೆ ಮಕ್ಕಳು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದಾರೆ. ಅತ್ತಾವರದಲ್ಲಿ ನೋ ಎಂಟ್ರಿ ಫಲಕ ನಾಪತ್ತೆಯಾಗಿದೆ. ಟಿ.ವಿ.ರಮಣ ಪೈ ಹಾಲ್‌ನಿಂದ ಕಾರ್‌ಸ್ಟ್ರೀಟ್‌ಗೆ ಹೋಗುವಲ್ಲಿ 90 ಡಿಗ್ರಿ ತಿರುವು ಇದ್ದು, ಆಗಾಗ ಅಪಘಾತ ಸಂಭವಿಸುತ್ತಿರುತ್ತದೆ. ಮೂಲ್ಕಿ ಬಸ್ಟೇಂಡ್‌ನಲ್ಲಿ ವಾಹನ ದಟ್ಟಣೆಯಿಂದಾಗಿ ರಸ್ತೆ ದಾಟಲು ಸಾಧ್ಯವಾಗುತ್ತಿಲ್ಲ ಎಂಬ ಹಲವು ದೂರುಗಳು ಫೋನ್‌ಇನ್ ಮೂಲಕ ಸಾರ್ವಜನಿಕರಿಂದ ವ್ಯಕ್ತವಾಯಿತು.

ಇವುಗಳಿಗೆಲ್ಲ ಉತ್ತರಿಸಿದ ಕಮಿಷನರ್ ಅನುಪಮ್ ಅಗರ್‌ವಾಲ್, ಮಂಗಳೂರಲ್ಲಿ ಸಂಚಾರ ಸಮಸ್ಯೆ ನಿವಾರಣೆಗೆ ಮಹಾನಗರ ಪಾಲಿಕೆ, ಸ್ಮಾರ್ಟ್‌ಸಿಟಿ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಕ್ರಮ ಕೈಗೊಳ್ಳಲಾಗುವುದು. ಫುಟ್‌ಪಾತ್ ಅತಿಕ್ರಮಣ, ನೋ ಪಾರ್ಕಿಂಗ್‌ಗಳಲ್ಲಿ ನಿಲುಗಡೆ ಹಾಗೂ ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಾರ್ಯಾಚರಣೆ ನಡೆಸಲಾಗುವುದು. ವಾಹನ ದಟ್ಟಣೆ ಇರುವಲ್ಲಿ ಸಂಚಾರಿ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ಭರವಸೆ ನೀಡಿದರು.

ಕಾರುಗಳಲ್ಲಿ ಟಿಂಟ್ ಗ್ಲಾಸ್ ಅಳವಡಿಕೆಗೆ ಅವಕಾಶ ಇಲ್ಲ. ಅವುಗಳ ವಿರುದ್ಧವೂ ಕಾರ್ಯಾಚರಣೆ ನಡೆಸಲಾಗುವುದು. ಟಿಂಟ್ ಗ್ಲಾಸ್ ಕಾರುಗಳಿಗೆ ದಂಡ ವಿಧಿಸುವುದು ಮಾತ್ರವಲ್ಲ ಟಿಂಟ್ ಗ್ಲಾಸ್ ಸ್ಥಳದಲ್ಲೇ ತೆರವುಗೊಳಿಸಲು ಸೂಚಿಸಲಾಗುವುದು ಎಂದರು.

ಡಿಸಿಪಿಗಳಾದ ಸಿದ್ಧಾರ್ಥ ಗೋಯಲ್, ದಿನೇಶ್ ಕುಮಾರ್, ಸಂಚಾರಿ ಎಸಿಪಿ ನಝ್ಮಾ ಫರೂಕಿ ಉಪಸ್ಥಿತರಿದ್ದರು.

ಪೊಲೀಸರಿಗೆ ಬೆದರಿಕೆ ಸರಿಯಲ್ಲ:

ಕರ್ತವ್ಯನಿರತ ಪೊಲೀಸರಿಗೆ ಶಾಸಕರೊಬ್ಬರು ಬೆದರಿಕೆ ಹಾಕಿರುವುದು ಸರಿಯಲ್ಲ. ಇದು ಪೊಲೀಸರ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತದೆ. ಇದೇ ರೀತಿ ಅಕ್ರಮ ಮರಳುಗಾರಿಕೆ ವಿರುದ್ಧ ಕಾರ್ಯಾಚರಣೆ ನಡೆಸುವ ಸಂದರ್ಭ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಬೇಕು ಎಂಬ ಆಗ್ರಹವೂ ಫೋನ್ ಇನ್ ಮೂಲಕ ವ್ಯಕ್ತವಾಯಿತು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X