Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭಾರತ -ಶ್ರೀಲಂಕಾ ಮಧ್ಯೆ ಉತ್ತಮ ಸಂಬಂಧ...

ಭಾರತ -ಶ್ರೀಲಂಕಾ ಮಧ್ಯೆ ಉತ್ತಮ ಸಂಬಂಧ ಮುಂದುವರಿದಿದೆ: ನಿಶಾಂತ ಆಲ್ವಿಸ್

ವಾರ್ತಾಭಾರತಿವಾರ್ತಾಭಾರತಿ27 Dec 2025 10:44 PM IST
share
ಭಾರತ -ಶ್ರೀಲಂಕಾ ಮಧ್ಯೆ ಉತ್ತಮ ಸಂಬಂಧ ಮುಂದುವರಿದಿದೆ: ನಿಶಾಂತ ಆಲ್ವಿಸ್
ಮಂಗಳೂರು ಪ್ರೆಸ್‌ಕ್ಲಬ್‌ಗೆ ಶ್ರೀಲಂಕಾದ ಅಧಿಕಾರಿಗಳ-ಪತ್ರಕರ್ತರ ನಿಯೋಗ ಭೇಟಿ

ಮಂಗಳೂರು: ಪ್ರಾಚೀನ ಕಾಲದಿಂದಲೂ ಭಾರತ -ಶ್ರೀಲಂಕಾ ಮಧ್ಯೆ ಉತ್ತಮ ಸಂಬಂಧವಿದ್ದು, ಅದು ಈಗಲೂ ಮುಂದುವರಿದಿದೆ ಎಂದು ಶ್ರೀಲಂಕಾ ಪ್ರಧಾನಿ ಕಚೇರಿಯ ಮಾಜಿ ಮಾಧ್ಯಮ ಕಾರ್ಯದರ್ಶಿ ನಿಶಾಂತ ಆಲ್ವಿಸ್ ಹೇಳಿದ್ದಾರೆ.

ಶ್ರೀಲಂಕಾದ ಆರ್ಥಿಕ ಸಚಿವಾಲಯದ ಮಾಜಿ ಮಾಧ್ಯಮ ಕಾರ್ಯದರ್ಶಿ, ಏಷ್ಯನ್ ಮೀಡಿಯಾ ಮತ್ತು ಕಲ್ಚರಲ್ ಅಸೋಸಿಯೇಶನ್ ಅಧ್ಯಕ್ಷ ಪ್ಯಾಟಮ್ ಪ್ಯಾಸ್ಕ್ಯುಲ್ ನೇತೃತ್ವದ ಶ್ರೀಲಂಕಾದ ಅಧಿಕಾರಿಗಳ ಹಾಗೂ ಪತ್ರಕರ್ತರ ನಿಯೋಗವು ಶನಿವಾರ ಮಂಗಳೂರು ಪ್ರೆಸ್‌ಕ್ಲಬ್‌ಗೆ ಭೇಟಿ ನೀಡಿ ಪತ್ರಕರ್ತರ ಜೊತೆ ಸಂವಾದ ನಡೆಸಿತು.

ಈ ವೇಳೆ ಮಾತನಾಡಿದ ನಿಶಾಂತ ಆಲ್ವಿಸ್, ‘ಶ್ರೀಲಂಕಾ ಸಂಕಷ್ಟ ಎದುರಿಸಿದಾಗಲೆಲ್ಲ ಭಾರತ ನೆರವಿಗೆ ಬಂದಿದೆ. ಕೋವಿಡ್ ಸಾಂಕ್ರಾಮಿಕ, ಚಂಡಮಾರುತ, ನೆರೆಯಂತಹ ಪ್ರಾಕೃತಿಕ ವಿಕೋಪ ಸಂಭವಿಸಿದ ಸಂದರ್ಭಗಳಲ್ಲಿ ಭಾರತದ ಸಹಾಯಹಸ್ತವನ್ನು ಎಂದೂ ಮರೆಯುವಂತಿಲ್ಲ. ಉಭಯ ದೇಶಗಳ ಮಧ್ಯೆ ಇರುವ ಅವಿನಾಭಾವ ಸಂಬಂಧವನ್ನು ಶಾಶ್ವತವಾಗಿ ಉಳಿಸಿಕೊಳ್ಳುವ ಜವಾಬ್ದಾರಿ ಪ್ರಜೆಗಳ ಮೇಲಿದೆ ಎಂದರು.

ಶ್ರೀಲಂಕಾ 2.5ರಿಂದ 3 ದಶಲಕ್ಷ ಜನಸಂಖ್ಯೆಯನ್ನು ಹೊಂದಿದ್ದು, ಈ ಪೈಕಿ ಶೇ.70 ಬೌದ್ಧ ಧರ್ಮೀಯರಾಗಿದ್ದಾರೆ. ಜೊತೆಗೆ ತಮಿಳರು, ಸಿಂಹಳೀಯರು, ಮುಸ್ಲಿಮರು, ಹಿಂದೂಗಳು ಇದ್ದಾರೆ ಎಂದವರು ಮಾಹಿತಿ ನೀಡಿದರು.

ಮಾಧ್ಯಮಗಳಿಗೆ ಸಾಂವಿಧಾನಿಕವಾಗಿ ನೀಡಲಾಗಿರುವ ಹಕ್ಕುಗಳಿಂದಾಗಿ ಶ್ರೀಲಂಕಾದಲ್ಲಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಿದೆ. ಪತ್ರಕರ್ತರಿಗೆ ಸಿಗುತ್ತಿರುವ ವೇತನ ಕಡಿಮೆ. ಸರಕಾರದಿಂದ ಲಭಿಸುತ್ತಿರುವ ಸೌಲಭ್ಯವೂ ಕಡಿಮೆ ಎಂದು ನಿಶಾಂತ್ ಆಲ್ವಿಸ್ ತಿಳಿಸಿದರು.

ನಿಯೋಗದಲ್ಲಿ ಶ್ರೀಲಂಕಾದ ಹಿರಿಯ ಪತ್ರಕರ್ತರಾದ ಸಂಜೀವ ತಿಸೇರಾ, ಹೇಮಂತ ಕುಮಾರ ಸಿಂಘೆ, ದಾಮಿಸಿರಿ ಅಜಿತ್, ತುಷಾರ ಹೆಟ್ಟಿರಾಚಿ ಉಪಸ್ಥಿತರಿದ್ದರು.

ಇದೇ ವೇಳೆ ವೇಳೆ ಶ್ರೀಲಂಕಾದ ಪತ್ರಕರ್ತರ ನಿಯೋಗವನ್ನು ಪ್ರೆಸ್‌ಕ್ಲಬ್ ವತಿಯಿಂದ ಗೌರವಿಸಲಾಯಿತು.

ದ.ಕ.ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಮಹಮ್ಮದ್ ಆರಿಫ್ ಪಡುಬಿದ್ರಿ, ವಿಲ್ಫ್ರೆಡ್ ಡಿಸೋಜ, ಖಜಾಂಚಿ ವಿಜಯ ಕೋಟ್ಯಾನ್, ಕಾರ್ಯದರ್ಶಿ ಸತೀಶ್ ಇರಾ, ಜೀವನ್, ದಯಾ ಕುಕ್ಕಾಜೆ, ಸಂದೀಪ್ ಕುಮಾರ್ ಎಂ, ಭಾಸ್ಕರ ರೈ ಕಟ್ಟ, ಪ್ರಣಾಮ್, ಅಭಿಜಿತ್ ಕೊಲ್ಪೆ, ಹಿರಿಯ ಪತ್ರಕರ್ತ ರಾಮಚಂದ್ರ ಭಂಡಾರ್ಕಾರ್ ಉಪಸ್ಥಿತರಿದ್ದರು.






















share
ವಾರ್ತಾಭಾರತಿ
ವಾರ್ತಾಭಾರತಿ
Next Story
X