Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸಮಯ ಪರಿಪಾಲನೆ ಕ್ರಮಬದ್ಧ,...

ಮಂಗಳೂರು: ಸಮಯ ಪರಿಪಾಲನೆ ಕ್ರಮಬದ್ಧ, ಬಸ್‌ ನಿಲ್ದಾಣಗಳ ನಿರ್ಮಾಣ ತಿಂಗಳೊಳಗೆ ಕ್ರಮಕ್ಕೆ ಪೊಲೀಸ್ ಆಯುಕ್ತರ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ27 Sept 2023 5:33 PM IST
share
ಮಂಗಳೂರು: ಸಮಯ ಪರಿಪಾಲನೆ ಕ್ರಮಬದ್ಧ, ಬಸ್‌ ನಿಲ್ದಾಣಗಳ ನಿರ್ಮಾಣ ತಿಂಗಳೊಳಗೆ ಕ್ರಮಕ್ಕೆ ಪೊಲೀಸ್ ಆಯುಕ್ತರ ನಿರ್ದೇಶನ

ಮಂಗಳೂರು, ಸೆ.27: ಮಂಗಳೂರು ನಗರ ವ್ಯಾಪ್ತಿಯಲ್ಲಿ ಖಾಸಗಿ ಬಸ್ಸುಗಳ ಚಾಲಕರಿಂದ ನಿರ್ಲಕ್ಷ್ಯದ ಚಾಲನೆ, ನಿಯಮ ಗಳ ಉಲ್ಲಂಘನೆ ಮುಂದುವರಿಯುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಬಸ್ಸು ಚಾಲಕ- ನಿರ್ವಾಹಕರ ಒತ್ತಡಕ್ಕೆ ಕಾರಣವಾಗುತ್ತಿರುವ ಬಸ್ಸುಗಳ ಸಮಯ ಪರಿಪಾಲನೆ (ಟೇಮ್ ಕೀಪಿಂಗ್)ಯನ್ನು ಕ್ರಮಬದ್ಧಗೊಳಿಸುವುದು ಹಾಗೂ ನಗರದಲ್ಲಿ ಬಸ್ಸು ನಿಲ್ದಾಣಗಳನ್ನು ನಿರ್ಮಿಸಲು ಒಂದು ತಿಂಗಳೊಳಗೆ ಕ್ರಮ ವಹಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದಾರೆ.

ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಬುಧವಾರ ಬಸ್ಸು ಮಾಲಕರು, ಎನ್‌ಎಚ್‌ಐ, ಸ್ಮಾರ್ಟ್ ಸಿಟಿ, ಮಂಗಳೂರು ಮಹಾನಗರ ಪಾಲಿಕೆ, ಕೆಎಸ್‌ಆರ್‌ಟಿಸಿ ಅಧಿಕಾರಿಗಳನ್ನು ಒಳಗೊಂಡ ಸಭೆಯಲ್ಲಿ ಈ ಸೂಚನೆ ನೀಡಿರುವ ಅವರು, ಒಂದು ತಿಂಗಳೊಳಗೆ ಮತ್ತೆ ಸಭೆ ನಡೆಸಿ ಯಾವೆಲ್ಲಾ ಸುಧಾರಣೆ ಆಗಿದೆ ಹಾಗೂ ಆಗಿಲ್ಲ ಎಂಬ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

ನಗರದ ಅಂಬೇಡ್ಕರ್ ವೃತ್ತ (ಜ್ಯೋತಿ ಸರ್ಕಲ್), ಹಂಪನಕಟ್ಟೆ ಸೇರಿದಂತೆ ಪ್ರಮುಖ ಬಸ್ಸು ನಿಲ್ದಾಣಗಳಲ್ಲಿ ಬಸ್ಸುಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸುವುದನ್ನು ತಪ್ಪಿಸಲು ಹೋಂಗಾರ್ಡ್‌ಗಳ ನಿಯೋಜನೆಯನ್ನು ತಮ್ಮ ಖರ್ಚಿನಲ್ಲಿ ಭರಿಸಲು ಬಸ್ಸು ಮಾಲಕರು ಒಪ್ಪಿಕೊಂಡಿದ್ದು, ಅದರಂತೆ ಕ್ರಮ ವಹಿಸಲಾಗುವುದು. ಬಸ್ಸು ನಿಲ್ದಾಣಗಳ ಸಮಸ್ಯೆಯನ್ನು ಪಾಲಿಕೆ ಅಧಿಕಾರಿ ಗಳ ಗಮನಕ್ಕೆ ತರಲಾಗಿದೆ. ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಕರು ಇಲ್ಲದಿರುವುದನ್ನು ನಿರ್ವಾಹಕರು ಖಾತರಿಪಡಿಸಬೇಕು. ಬಸ್ಸುಗಳ ಕಾರ್ಯಾಚರಣೆ ಬಗ್ಗೆ ಪೊಲೀಸ್ ಇಲಾಖೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಜತೆ ಜಂಟಿ ದಾಳಿಗಳನ್ನು ಕೂಡಾ ನಡೆಸಲಿದೆ ಎಂದು ಪೊಲೀಸ್ ಆಯುಕ್ತರು ಸಭೆಯ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ನಗರದಲ್ಲಿ ಎಲ್ಲೆಲ್ಲಾ ಬಸ್ಸು ನಿಲ್ದಾಣಗಳ ಅಗತ್ಯವಿದೆ ಎಂಬ ಬಗ್ಗೆ ಮೂರು ತಿಂಗಳ ಹಿಂದೆಯೇ ಸಂಬಂಧಪಟ್ಟ ಇಲಾಖೆಗೆ ಮಾಹಿತಿಯನ್ನು ಒದಗಿಸಲಾಗಿದೆ. ಆದರೂ ಕ್ರಮ ಆಗಿಲ್ಲ. ಈ ನಡುವೆ ಸಮಯ ಪಾಲನೆಯ ಒತ್ತಡ ನಗರದಲ್ಲಿ ಬಸ್ಸುಗಳ ಚಾಲಕ ಮತ್ತು ನಿರ್ವಾಹಕರ ಮೇಲೆ ಸಾಕಷ್ಟು ಒತ್ತಡ ಬೀರುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಇದನ್ನು ಕ್ರಮಬದ್ಧ ಗೊಳಿಸುವ ನಿಟ್ಟಿನಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಕ್ರಮ ಆಗುವ ವಿಶ್ವಾಸವಿದೆ ಎಂದರು.

ನಿರ್ಲಕ್ಷ್ಯ, ಅಡ್ಡಾದಿಡ್ಡಿ ಚಾಲನೆ ಬಗ್ಗೆ ವೀಡಿಯೋ ಪ್ರದರ್ಶನ

ಸಭೆಯಲ್ಲಿ ನಗರದ ಪ್ರಮುಖ ಜಂಕ್ಷನ್ ಪ್ರದೇಶಗಳಲ್ಲಿ ಖಾಸಗಿ ಬಸ್ಸುಗಳ ಚಾಲಕರು ವಾಹನಗಳನ್ನು ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುವ ಹಾಗೂ ನಿರ್ಲಕ್ಷ್ಯದ ಚಾಲನೆಗಳಿಂದ ಕಳೆದ ಕೆಲ ತಿಂಗಳಿಂದೀಚೆಗೆ ಸಂಭವಿಸಿದ ಭೀಕರ ಅಪಘಾತ ಪ್ರಕರಣಗಳ ವೀಡಿಯೋ ಕ್ಲಿಪ್ಪಿಂಗ್‌ಗಳ ಮೂಲಕ ಸಭೆಯಲ್ಲಿ ಭಾಗವಹಿಸಿದ್ದ ಬಸ್ಸು ಮಾಲಕರು ಹಾಗೂ ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನವನ್ನು ಪೊಲೀಸ್ ಆಯುಕ್ತರು ಮಾಡಿದ್ದರು.

ಬಸ್ಸು ಮಾಲಕರು- ಚಾಲಕರ ಪದೇ ಪದೇ ಸಭೆಗಳು, ಜಾಗೃತಿ ಕಾರ್ಯಕ್ರಮಗಳು ನಡೆದರೂ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಪ್ರಕರಣಗಳು ಮುಂದುವರಿಯುತ್ತಿದೆ. ನಿಯಮಗಳನ್ನು ಪಾಲಿಸಲಾಗುತ್ತಿಲ್ಲ. ಈ ರೀತಿಯ ನಿರ್ಲಕ್ಷ್ಯದಿಂದ ಆಗುವ ಜೀವಹಾನಿ ಕೊಲೆಗೆ ಸಮಾನ. ಇದಕ್ಕೆ ಸೂಕ್ತ ಪರಿಹಾರ ಅಗತ್ಯವಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದರು.

ಸಿಟಿ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಪ್ರತಿಕ್ರಿಯಿಸಿ, ಚಾಲಕ ಹಾಗೂ ನಿರ್ವಾಹಕರ ವರ್ತನೆ ಯಲ್ಲಿ ದೂರುಗಳು ಬರುವ ಬಗ್ಗೆ ಸರಿಪಡಿಸಲು ಬಹಳಷ್ಟು ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಇಲಾಖೆ ನೀಡುವ ಸಲಹೆಗಳನ್ನು ಪಾಲಿಸಲು ಕೂಡಾ ಬಸ್ಸು ಮಾಲಕರು ಸಿದ್ಧರಿದ್ದಾರೆ ಎಂದರು.

ಮಾಜಿ ಅಧ್ಯಕ್ಷ ದಿಲ್‌ರಾಜ್ ಆಳ್ವ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ 325 ಸಿಟಿ ಬಸ್ಸುಗಳು, 2000 ಸರ್ವಿಸ್ ಬಸ್‌ಗಳು ಇವೆ. ಬಸ್‌ಗಳಲ್ಲಿ ಟಿಕೆಟ್ ನೀಡದಿರುವ ಸಮಸ್ಯೆ, ಕರ್ಕಶ ಹಾರ್ನ್ ಸಂಬಂಧಿತ ಸಮಸ್ಯೆಗಳನ್ನು ಸಮನ್ವಯದಿಂದ ಒಂದೇ ದಿನ ದಲ್ಲಿ ಬಗೆಹರಿಸಲು ಸಾಧ್ಯ. ಪರವಾನಿಗೆ ನೀಡುವ ಸಂದರ್ಭ ಅಗತ್ಯ ಆದೇಶಗಳು ಪಾಲನೆಯಾದಲ್ಲಿ ಅಪಘಾತ, ನಿರ್ಲಕ್ಷ್ಯದ ಚಾಲನೆ ತಡೆಯಲು ಸಾಧ್ಯ ಎಂದರು.

ಸಂಚಾರ ಪೊಲೀಸ್ ನಿರೀಕ್ಷಕ ಗೋಪಾಲಕೃಷ್ಣ ಭಟ್ ಪ್ರತಿಕ್ರಿಯಿಸಿ, ತಮ್ಮ ಬಸ್ಸಿನಲ್ಲಿ ಕಾರ್ಯ ನಿರ್ವಹಿಸುವ ಚಾಲಕರು ಹಾಗೂ ನಿರ್ವಾಹಕರ ಬಗ್ಗೆ ಬಹುತೇಕ ಮಾಲಕರಿಗೆ ಮಾಹಿತಿಯೇ ಇಲ್ಲ. ಇದು ಸಾಕಷ್ಟು ಸಮಸ್ಯೆಗಳಿಗೆ ಕಾರಣವಾಗುತ್ತಿದೆ ಎಂದರು.

ನಿರ್ಲಕ್ಷ್ಯದ ಚಾಲನೆಯು ಅಪರಾಧವಾಗಿದ್ದು, ನಗರದಲ್ಲಿ ನಡೆದಿರುವ ಕೆಲವೊಂದು ಅಪಘಾತ ಘಟನೆಗಳ ವೀಡಿಯೋ ಚಾಲಕರ ಮಾನಸಿಕ ಸ್ಥಿರತೆಯನ್ನೇ ಪ್ರಶ್ನಿಸುವಂತ ಮೋಟಾರು ವಾಹನಗಳ ಕಾಯ್ದೆ 186ರಡಿ ಮಾನಸಿಕವಾಗಿ ಸ್ಥಿರತೆ ಹೊಂದಿರದವರು ವಾಹನ ಚಲಾಯಿಸುವಂತಿಲ್ಲ. ಸೆಕ್ಷನ್ 123ರ ಪ್ರಕಾರ ಚಲಿಸುವ ಬಸ್ಸಿನ ಫುಟ್‌ಬೋರ್ಡ್‌ನಲ್ಲಿ ನಿಂತು ಪ್ರಯಾಣ ಮಾಡುವಂತಿಲ್ಲ. ನಗರ ಪಾಲಿಕೆ, ನಗರ ಸಭೆ ವ್ಯಾಪ್ತಿಯಲ್ಲಿ ಓಡಾಡುವ ಬಸ್ಸುಗಳನ್ನು ಹೊರತುಪಡಿಸಿ ಉಳಿದ ಬಸ್ಸುಗಳಲ್ಲಿ ಬಾಗಿಲು ಅಳವಡಿಕೆ ಮಾಡಬೇಕಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್ ಮಾಹಿತಿ ನೀಡಿದರು.

ಸಭೆಯಲ್ಲಿ ಭಾಗವಹಿಸಿದ್ದ ಬಸ್ಸು ಮಾಲಕರನೇಕರು ಪಂಪ್‌ವೆಲ್, ತೊಕ್ಕೊಟ್ಟು ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಬಸ್ಸು ನಿಲ್ದಾಣವೇ ಇಲ್ಲ ಎಂದು ಹೇಳಿದಾಗ ಬಸ್ಸು ನಿಲ್ದಾಣ ಇರುವಲ್ಲಿಯೂ ಬಸ್ಸು ಚಾಲಕರು ಕೆಲವೆಡೆ ಬಸ್ಸುಗಳು ನಿಲುಗಡೆ ಮಾಡುವುದಿಲ್ಲ ಎಂದು ಪೊಲೀಸ್ ಆಯುಕ್ತರು ಅಸಮಾಧಾನ ವ್ಯಕ್ತಪಡಿಸಿದರು.

ಡಿಸಿಪಿ ದಿನೇಶ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಡಿಸಿಪಿ ಸಿದ್ದಾರ್ಥ್ ಗೋಯಲ್, ಎಸಿಪಿಗಳಾದ ಮಹೇಶ್ ಕುಮಾರ್, ಗೀತಾ ಕುಲಕರ್ಣಿ ಮೊದಲಾದವರು ಉಪಸ್ಥಿತರಿದ್ದರು.

ನಗರದಲ್ಲಿ ರಸ್ತೆ ಹೊಂಡ ಗುಂಡಿ ಮುಚ್ಚುವಲ್ಲಿ ಕ್ರಮವಾಗಬೇಕು ಎಂದು ಪೊಲೀಸ್ ಆಯುಕ್ತ ಅನುಪಮ್ ಅವರು ಪಾಲಿಕೆ ಇಂಜಿನಿಯರ್‌ಗೆ ಸೂಚಿಸಿದಾಗ, ಆ ಕಾರ್ಯ ನಾವು ಮಾಡುತ್ತಿದ್ದೇವೆ ಎಂದರು. ನೀವು ಸರಿಯಾಗಿ ಮಾಡದ ಕಾರಣ ನಮ್ಮವರೂ ಆ ಕಾರ್ಯವನ್ನು ನಗರದಲ್ಲಿ ಮಾಡಬೇಕಾಗಿದೆ ಎಂದು ಹೇಳಿದ ಕಮಿಷನರ್, ಅಸಮರ್ಪಕ ರಸ್ತೆಗಳಿಂದಾಗುವ ಅಪಘಾತಗಳಿಗೆ ಸ್ಥಳೀಯಾಡಳಿತದ ಇಂಜಿನಿಯರ್‌ಗಳನ್ನೇ ಹೊಣೆಯಾಗಿಸುವ ಬೆಂಗಳೂರಿನ ಕ್ರಮವನ್ನು ಇಲ್ಲಿಯೂ ಅನುಸರಿಸಬೇಕಾಗುತ್ತದೆ ಎಂದು ಹೇಳಿದರು.

"ನಿರ್ಲಕ್ಷ್ಯದ ಚಾಲನೆ ವಿರುದ್ಧ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಾಗುತ್ತಿದೆ. ಚಾಲನಾ ಪರವಾನಿಗೆ ರದ್ಧತಿಗೆ ಸಂಬಂಧಿಸಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಸಲ್ಲಿಸಲಾದ 937 ಅರ್ಜಿಗಳಲ್ಲಿ ಈ ವರ್ಷ 90 ಮಂದಿಯ ಪರವಾನಿಗೆ ಅಮಾನತುಗೊಂಡಿದೆ. ಕಳೆದ ಮೂರು ವರ್ಷಗಳಲ್ಲಿ 771 ಪರವಾನಿಗೆಗಳು ಅಮಾನುತುಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ತಿಳಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X