ಮಂಗಳೂರು: ವಿನಯ ಹೆಗ್ಡೆಯವರಿಗೆ ರೆಡ್ ಕ್ರಾಸ್ ನಿಂದ ಶ್ರದ್ಧಾಂಜಲಿ

ಮಂಗಳೂರು: ಕರಾವಳಿ ಜಿಲ್ಲೆಯ ಶೈಕ್ಷಣಿಕ ಹಾಗೂ ಔದ್ಯಮಿಕ ಕ್ಷೇತ್ರಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ನಿಟ್ಟೆ ವಿನಯ ಹೆಗ್ಡೆಯವರ ಆದರ್ಶಯುತ ಬದುಕು ಸಮಾಜಕ್ಕೆ ಸದಾ ಪ್ರೇರಣಾದಾಯಿ. ಸಾಧನೆಯ ಜತೆಗೆ ತನ್ನ ಸರಳ ನಡವಳಿಕೆಯಿಂದ ಅವರು ಜನಮಾನಸದಲ್ಲಿ ಗೌರವದ ಸ್ಥಾನ ಪಡೆದಿದ್ದಾರೆ ಎಂದು ದ.ಕ. ಜಿಲ್ಲಾ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.
ಇತ್ತೀಚೆಗೆ ಅಗಲಿದ ನಿಟ್ಟೆ ಪರಿಗಣಿತ ವಿ.ವಿ.ಯ ಕುಲಾಧಿಪತಿ ನಿಟ್ಟೆ ವಿನಯ ಹೆಗ್ಡೆಯವರಿಗೆ ದ.ಕ.ಜಿಲ್ಲಾ ರೆಡ್ ಕ್ರಾಸ್ ವತಿಯಿಂದ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ನುಡಿ ನಮನ ಸಲ್ಲಿಸಿದರು.
ದ.ಕ.ಜಿಲ್ಲಾ ರೆಡ್ ಕ್ರಾಸ್ ನ ಸಮಾಜ ಸೇವಾ ಕಾರ್ಯಗಳಿಗೆ ವಿನಯ ಹೆಗ್ಡೆ ನೀಡಿರು ಪ್ರೋತ್ಸಾಹ ಸದಾ ಸ್ಮರಣೀಯ ಎಂದು ಅವರು ಹೇಳಿದರು.
ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ದ.ಕ. ಜಿಲ್ಲಾ ರೆಡ್ ಕ್ರಾಸ್ ಸಮಿತಿಯ ಉಪಾಧ್ಯಕ್ಷ ಡಾ.ಸತೀಶ್ ರಾವ್, ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ, ನಿರ್ದೇಶಕರಾದ ಡಾ.ಸುಮನಾ .ಬಿ., ಪಿ.ಬಿ.ಹರೀಶ್ ರೈ ನುಡಿ ನಮನ ಸಲ್ಲಿಸಿದರು.
ನಿಟ್ಟೆ ಪರಿಗಣಿತ ವಿ.ವಿ.ಯ ಯೂತ್ ರೆಡ್ ಕ್ರಾಸ್ ನ ನೋಡಲ್ ಅಧಿಕಾರಿ ಡಾ.ಶಂತನು ಸಹ , ರೆಡ್ ಕ್ರಾಸ್ ಜಿಲ್ಲಾ ಘಟಕದ ಖಜಾಂಜಿ ಮೋಹನ್ ಶೆಟ್ಟಿ, ನಿರ್ದೇಶಕ ಗುರುದತ್ ನಾಯಕ್, ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.







