Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಕನಕದಾಸರು, ಬ್ರಹ್ಮಶ್ರೀ...

ಮಂಗಳೂರು | ಕನಕದಾಸರು, ಬ್ರಹ್ಮಶ್ರೀ ನಾರಾಯಣ ಗುರುಗಳು ಬಹುತ್ವ, ಬಂಧುತ್ವ ಸಾರಿದ ಸಂತರು : ದೇರ್ಲ

ವಾರ್ತಾಭಾರತಿವಾರ್ತಾಭಾರತಿ9 Dec 2025 7:06 PM IST
share
ಮಂಗಳೂರು | ಕನಕದಾಸರು, ಬ್ರಹ್ಮಶ್ರೀ ನಾರಾಯಣ ಗುರುಗಳು ಬಹುತ್ವ, ಬಂಧುತ್ವ ಸಾರಿದ ಸಂತರು : ದೇರ್ಲ
ʼಕನಕದಾಸರು ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆಗಳು’ ಉಪನ್ಯಾಸ

ಮಂಗಳೂರು, ಡಿ.9: ಕನಕದಾಸರು ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳು ನೆಲದಲ್ಲೇ ನಿಂತು ಇಡೀ ಸಮಾಜವನ್ನು ಸಾಮಾಜಿಕ, ಸಮಾನತೆ ಮತ್ತು ಆಧ್ಯಾತ್ಮಿಕ ಉನ್ನತಿಗೆ ಏರಿಸಿದ ಸಂತರು. ಇವರು ಭಾರತದ ಬಹುತ್ವ ಮತ್ತು ಬಂಧುತ್ವದ ಮಹತ್ವವನ್ನು ಸಾರಿದ ಮಹನೀಯರು ಎಂದು ಲೇಖಕ ಡಾ.ನರೇಂದ್ರ ರೈ ದೇರ್ಲ ಹೇಳಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನಾ ಕೇಂದ್ರ ಹಾಗೂ ಮಂಗಳೂರಿನ ಗಾಂಧಿನಗರದ ಶ್ರೀ ಗೋಕರ್ಣನಾಥೇಶ್ವರ ಪಿಯು ಕಾಲೇಜು ಇವರ ಸಹಯೋಗದೊಂದಿಗೆ ಶ್ರೀ ಗೋಕರ್ಣನಾಥೇಶ್ವರ ಪಿಯು ಕಾಲೇಜು ಸಭಾಂಗಣದಲ್ಲಿ ಮಂಗಳವಾರ ನಡೆದ ಕನಕ ತತ್ವ ಚಿಂತನ ಪ್ರಚಾರೋಪನ್ಯಾಸ ಮಾಲಿಕೆ ಭಾರತೀಯ ಸಂತ ಪರಂಪರೆ ಮತ್ತು ಕನಕದಾಸರು ಎಂಬ ಕಾರ್ಯಕ್ರಮದಲ್ಲಿ ‘ಕನಕದಾಸರು ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆಗಳು’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.

ಕನಕನ ಕಿಂಡಿ ಮತ್ತು ಗುರುಗಳ ಕನ್ನಡಿ :

ಬಾಳೆಹಣ್ಣು ಪ್ರಸಂಗದಲ್ಲಿ ದೇವರು ಸರ್ವಾಂತರ್ಯಾಮಿ ಎಂದು ತೋರಿಸಿಕೊಟ್ಟ ಕನಕದಾಸರು ಉಡುಪಿಯ ಕಿಂಡಿ ಪ್ರಸಂಗದ ಮೂಲಕ ಆಧ್ಯಾತ್ಮಿಕ ಸಮಾನತೆಯ ಆಶಯವನ್ನು ಸಾರಿದರು. ಬ್ರಹ್ಮಶ್ರೀ ನಾರಾಯಣ ಗುರುಗಳು ದೇವಸ್ಥಾನ ಪ್ರವೇಶ ದ್ವಾರದ ಎದುರು ಕನ್ನಡಿಯನ್ನಿಟ್ಟು ಭಗವಂತನನ್ನು ನೋಡುವ ಮೊದಲು ನಿನ್ನ ನೋಡುವಂತಾಗಬೇಕು. ನೀನೇನು ಅಂತ ತಿಳಿದರೆ ನಿನಗೆ ಜಗತ್ತು ಅರ್ಥವಾಗುತ್ತದೆ ಎಂಬ ಸಂದೇಶವನ್ನು ಸಾರಿದರು ಎಂದರು.

ದೇವಸ್ಥಾನದ ಒಳಗಡೆ ಗ್ರಂಥಾಲಯಗಳನ್ನು ತೆರೆದ, ಉದ್ಯಾನವನಗಳನ್ನು ಸ್ಥಾಪಿಸಿದ ನಾರಾಯಣ ಗುರುಗಳ ಪ್ರಯೋಗಗಳು ಶಿಕ್ಷಣ ಮತ್ತು ಪ್ರಕೃತಿ ಮೇಲಿನ ಅವರ ಲೋಕದೃಷ್ಟಿಯನ್ನು ತೋರಿಸುತ್ತದೆ ಎಂದರು.

ಶ್ರೀಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಸಂತ ಕಾರಂದೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀಗೋಕರ್ಣನಾಥೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಘುರಾಜ್ ಕದ್ರಿ, ಸಮಾನತೆ ಮತ್ತು ಮನುಷ್ಯತ್ವದ ಆಶಯಗಳನ್ನು ಇಬ್ಬರು ಸಂತರು ಹೊಂದಿದ್ದರು ಎಂದು ಹೇಳಿದರು.

ಆಶಯ ಭಾಷಣ ಮಾಡಿದ ಕನಕದಾಸ ಸಂಶೋಧನಾ ಕೇಂದ್ರದ ಸಂಯೋಜಕ ಡಾ.ಧನಂಜಯ ಕುಂಬ್ಳೆ, ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಒಳಿತು ಇರುವಂತೆ ಅಸಮಾನತೆಯನ್ನು ಸಾರುವ ಕೆಡುಕುಗಳು ಇವೆ. ಸಂತರು ಭಾರತದ ಅಧ್ಯಾತ್ಮಿಕ ಒಳಿತನ್ನು ಎತ್ತಿಹಿಡಿದು ಜಾತಿ, ಮೌಢ್ಯಗಳಂತಹ ಕೆಡುಕುಗಳ ವಿರುದ್ಧ ಹೋರಾಡಿದರು ಎಂದರು.

ಶ್ರೀಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ನಾಗೇಶ್ ಕರ್ಕೇರ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ಮಾಧವ ಎಂ.ಕೆ. ಉಪಸ್ಥಿತರಿದ್ದರು.

ಶ್ರೀ ಗೋಕರ್ಣನಾಥೇಶ್ವರ ಪಿಯು ಕಾಲೇಜು ಅರ್ಥಶಾಸ್ತ್ರ ಉಪನ್ಯಾಸಕಿ ಭಾರತಿ ಸ್ವಾಗತಿಸಿದರು, ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ದ್ವಿತೀಯ ಎಂ.ಎ.ವಿದ್ಯಾರ್ಥಿ ದುಶ್ಯಂತ್ ವಂದಿಸಿದರು, ಶ್ರೀ ಗೋಕರ್ಣನಾಥೇಶ್ವರ ಪಿಯು ಕಾಲೇಜು ವಾಣಿಜ್ಯಶಾಸ್ತ್ರ ಉಪನ್ಯಾಸಕಿ ದಿವ್ಯ ಯು. ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X