ಮಂಗಳೂರು | ಗಾಂಜಾ, ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ಬಂಧಿತ ಆರೋಪಿಗಳು
ಮಂಗಳೂರು: ನಗರದ ಬಂಗ್ರ-ಕೂಳೂರು ಫಾಲ್ಗುಣಿ ನದಿಯ ಬಳಿ ಮಂಗಳವಾರ ಬೆಳಗ್ಗೆ ಗಾಂಜಾ ಮತ್ತು ಎಂಡಿಎಂಎ ಮಾರಾಟ ಯತ್ನಿಸುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ತುಮಕೂರಿನ ಶಾಫಿ ಅಹ್ಮದ್ (40) ಮತ್ತು ಮುಹಮ್ಮದ್ ಸಮೀರ್ (20) ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳಿಂದ 70 ಸಾವಿರ ರೂ. ಮೌಲ್ಯದ 12 ಗ್ರಾಂ ಎಂಡಿಎಂ, 10 ಸಾವಿರ ರೂ. ಮೌಲ್ಯದ 275 ಗ್ರಾಂ ಗಾಂಜಾ ಮತ್ತು 2 ಮೊಬೈಲ್ ಪೋನ್ ವಶಪಡಿಸಲಾಗಿದೆ. ಆರೋಪಿಗಳು ಗಾಂಜಾ ಮತ್ತು ಎಂಡಿಎಂಎಯನ್ನು ಬೆಂಗಳೂರಿನಿಂದ ಖರೀದಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ಉತ್ತರ ವಲಯ ಎಸಿಪಿ ಶ್ರೀಕಾಂತ್ ಕೆ. ಕಾವೂರು ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಾಘವೇಂದ್ರ ಬೈಂದೂರ್, ಎಸ್ಸೈ ಮಲ್ಲಿಕಾರ್ಜುನ್, ಎಎಸ್ಸೈ ಚಂದ್ರಶೇಖರ್, ಸಿಬ್ಬಂದಿಗಳಾದ ರೆಜಿ ಎಂ, ಹಾಲೇಶ್ ನಾಯ್ಕ್, ರಿಯಾಝ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಆರೋಪಿ ಶಾಫಿ ಅಹ್ಮದ್ ವಿರುದ್ಧ 9 ಪ್ರಕರಣಗಳು ದಾಖಲಾಗಿದೆ. ಹಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಮುಹಮ್ಮದ್ ಸಮೀರ್ ವಿರುದ್ಧ 1 ಪ್ರಕರಣ ದಾಖಲಾಗಿದೆ.





