ಮಂಗಳೂರು | ರಬ್ಬರ್ಗೆ ಬೆಂಬಲ ಬೆಲೆ: ಕ್ರಮಕ್ಕೆ ಕೇಂದ್ರ ಸಚಿವರ ಸೂಚನೆ

PC | PTI
ಮಂಗಳೂರು,ಡಿ.12 : ರಬ್ಬರ್ ಬೆಳೆಗೆ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗೆ ಕೇಂದ್ರ ಸರಕಾರ ಸೂಚಿಸಿದೆ.
ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರಕಾರಕ್ಕೆ ಬರೆದಿರುವ ಪತ್ರಕ್ಕೆ ಉತ್ತರಿಸಿರುವ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ರಬ್ಬರ್ ಬೆಳೆಯನ್ನು ಕನಿಷ್ಟ ಬೆಂಬಲ ಬೆಲೆ ಒದಗಿಸುವ ಬೆಳೆೆಗಳ ಪಟ್ಟಿಗೆ ಸೇರಿಸುವ ಬೇಡಿಕೆ ಸಂಬಂಧ ಪತ್ರವನ್ನು ಸೂಕ್ತ ಕ್ರಮಕೈಗೊಳ್ಳಲು ಸಂಬಂಧಿಸಿದ ಇಲಾಖೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
Next Story





