Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿವಿಯಲ್ಲಿ ವಾಣಿಜ್ಯ ವಿಭಾಗದ...

ಮಂಗಳೂರು ವಿವಿಯಲ್ಲಿ ವಾಣಿಜ್ಯ ವಿಭಾಗದ ಹಳೆ ವಿದ್ಯಾರ್ಥಿಗಳ ʼಅಲೂಮ್ನಿ ಮೀಟ್-ಸಮನ್ವಿತʼ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ17 Dec 2025 11:47 AM IST
share
ಮಂಗಳೂರು ವಿವಿಯಲ್ಲಿ ವಾಣಿಜ್ಯ ವಿಭಾಗದ ಹಳೆ ವಿದ್ಯಾರ್ಥಿಗಳ ʼಅಲೂಮ್ನಿ ಮೀಟ್-ಸಮನ್ವಿತʼ ಕಾರ್ಯಕ್ರಮ
ಹಳೆ ವಿದ್ಯಾರ್ಥಿಗಳ ಕೊಡುಗೆ ಅವಿಸ್ಮರಣೀಯ : ಪ್ರೊ. ಪಿ.ಎಲ್. ಧರ್ಮ

ಕೊಣಾಜೆ : ವಾಣಿಜ್ಯ ವಿಭಾಗದ ಹಳೆ ವಿದ್ಯಾರ್ಥಿಗಳು ವಿಭಾಗದ ಅಭಿವೃದ್ಧಿಗೆ ಹಾಗೂ ವಿಶ್ವವಿದ್ಯಾನಿಲಯಕ್ಕೆ ಅನೇಕ ಮಹತ್ತರ ಕೊಡುಗೆಗಳನ್ನು ನೀಡಿದ್ದಾರೆ ಮತ್ತು ದೇಶ ವಿದೇಶಗಳಲ್ಲಿ ಉನ್ನತ ಸ್ಥಾನವನ್ನು ಪಡೆದಿರುವುದು ಇಡೀ ವಿಶ್ವವಿದ್ಯಾನಿಲಯಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.ಪಿ.ಎಲ್. ಧರ್ಮ ಅವರು ಹೇಳಿದರು.

ಅವರು ವಾಣಿಜ್ಯ ವಿಭಾಗದ ಹಳೆ ವಿದ್ಯಾರ್ಥಿಗಳ ಆಲೂಮ್ನಿ ಮೀಟ್- ಸಮನ್ವಿತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ನಂತರ ವಿಭಾಗದೊಂದಿಗೆ ತಮ್ಮ ಉತ್ತಮ ಸಂಬಂಧ ಮುಂದುವರಿಸಿಕೊಂಡು ಹೋಗಬೇಕು ಹಾಗೂ ವಿಭಾಗದ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಪ್ರಸ್ತುತ ವಾಣಿಜ್ಯ ಕ್ಷೇತ್ರವು ಸಂಶೋಧನೆ, ವ್ಯವಹಾರ, ಪ್ರವಾಸೋದ್ಯಮ, ಕೈಗಾರಿಕೆ ಕ್ಷೇತ್ರಗಳಲ್ಲಿ ಪ್ರಗತಿಯನ್ನು ಸಾಧಿಸಿ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಗಳಾದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ.ಎಂ.ಪಿ.ಸುಬ್ರಹ್ಮಣ್ಯರವರು ಮಾತನಾಡಿ, ಉನ್ನತ ಶಿಕ್ಷಣವು ಸಂಶೋಧನೆಗೆ ಹೆಚ್ಚು ಹೆಚ್ಚು ಅವಕಾಶಗಳನ್ನು ಕಲ್ಪಿಸಬೇಕು ಎಂದು ನುಡಿದರು.

ಹಿರಿಯ ಪ್ರಾಧ್ಯಾಪಕರಾದ ಪ್ರೊ.ಉದಯ ಕುಮಾರ್, ಪ್ರೊ.ಪ್ರಕಾಶ್ ಪಿಂಟೊ, ಪ್ರೊ.ಶ್ರೀಧರ್ ಮಣಿಯಾಣಿ, ಪ್ರೊ.ಉಮ್ಮಪ್ಪ ಪೂಜಾರಿ, ಪ್ರೊ.ರಾಜಶೇಖರ್ ಹೆಬ್ಬಾರ್, ಪ್ರೊ.ಮಲ್ಲಿಕಾರ್ಜುನಪ್ಪ, ಪ್ರೊ.ವೈ.ಮುನಿರಾಜು, ಡಾ.ಸುಭಾಷಿನಿ ಶ್ರೀವತ್ಸ ಮತ್ತು 'ಮಾ' ಸಂಘದ ಗೌರವಾಧ್ಯಕ್ಷರಾದ ದಿನೇಶ್ ಕುಮಾರ್ ಆಳ್ವರವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಪಿ.ಎಲ್. ಧರ್ಮ, ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ.ಎಂ.ಪಿ. ಸುಬ್ರಹ್ಮಣ್ಯ ಹಾಗೂ ಪ್ರೊ.ಮಲ್ಲಿಕಾರ್ಜುನಪ್ಪರವರನ್ನು ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ.ಪ್ರೀತಿ ಕೀರ್ತಿ ಡಿಸೋಜಾ ಪ್ರಾಸ್ತಾವಿಸಿ, ಸ್ವಾಗತಿಸಿದರು. 'ಅಮಕಾ'ದ ಉಪಾಧ್ಯಕ್ಷರಾದ ಮಧುಸೂದನ್ ಭಟ್ ವಂದಿಸಿದರು. ವಿದ್ಯಾರ್ಥಿಗಳಾದ ಮೋಕ್ಷಿತ ಎಂ.ತಂಡದವರು ಪ್ರಾರ್ಥಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಡಾ.ರೋಷಿಣಿ ಯಶವಂತ್ ಗೈದರು. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X